ಕೊರೊನಾ ಮೂರನೇ ಅಲೆ ಬಗ್ಗೆ ಡಾ.ದೇವಿ ಪ್ರಸಾದ್ ಶೆಟ್ಟಿ ಹೇಳಿದ್ದು ಹೀಗೆ

ಮೊದಲ ಮತ್ತು ಎರಡನೇ ಅಲೆಗೆ ಆರು ತಿಂಗಳು ಸಮಯವಿತ್ತು. ಆಗ ವೇಗವಾಗಿ ಹರಡಿತ್ತು. ಆದರೆ ಇದು ಅದಕ್ಕಿಂತಲೂ ವೇಗವಾಗಿ ಹರಡುವ ಸಾಧ್ಯತೆ ಹೆಚ್ಚಿದೆ. ವ್ಯಕ್ತಿ ಸಾವನ್ನಪ್ಪಿದರೆ, ವೈರಸ್ ಕೂಡಾ ಸತ್ತೋಗುತ್ತದೆ.

ಕೊರೊನಾ ಮೂರನೇ ಅಲೆ ಬಗ್ಗೆ ಡಾ.ದೇವಿ ಪ್ರಸಾದ್ ಶೆಟ್ಟಿ ಹೇಳಿದ್ದು ಹೀಗೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: sandhya thejappa

Updated on:Dec 01, 2021 | 8:49 AM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಮೂರನೇ ಅಲೆ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸರ್ಕಾರ ಕೂಡಾ ಹೆಚ್ಚು ನಿಗಾ ವಹಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕೊರೊನಾ ಮೂರನೇ ಅಲೆ ಬಗ್ಗೆ ಉನ್ನತ ಮಟ್ಟದ ನುರಿತ ತಜ್ಞರ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಟಿವಿ9ಗೆ ಕೆಲ ಮಾಹಿತಿ ನೀಡಿದ್ದಾರೆ. ವೈರಸ್ ಮ್ಯೂಟೇಟ್ ಆಗ್ತಾ ಚೇಂಜ್ ಆಗ್ತಾ ಇರುತ್ತದೆ. ಇದನ್ನು ನಿಲ್ಲಿಸಲು ಆಗಲ್ಲ. ಕೊರೊನಾ ಹೊಸ ತಳಿ ಬಗ್ಗೆ ಹೆದರುವ ಅಗತ್ಯವಿಲ್ಲ. ಆದರೆ ಇದು ಭಾರಿ ವೇಗವಾಗಿ ಹರಡುತ್ತದೆ ಅಂತ ತಿಳಿಸಿದರು.

ಮೊದಲ ಮತ್ತು ಎರಡನೇ ಅಲೆಗೆ ಆರು ತಿಂಗಳು ಸಮಯವಿತ್ತು. ಆಗ ವೇಗವಾಗಿ ಹರಡಿತ್ತು. ಆದರೆ ಇದು ಅದಕ್ಕಿಂತಲೂ ವೇಗವಾಗಿ ಹರಡುವ ಸಾಧ್ಯತೆ ಹೆಚ್ಚಿದೆ. ವ್ಯಕ್ತಿ ಸಾವನ್ನಪ್ಪಿದರೆ, ವೈರಸ್ ಕೂಡಾ ಸತ್ತೋಗುತ್ತದೆ. ಸಮಯ ಆದಂತೆ ಹರಡುವಿಕೆ ಕಡಿಮೆಯಾಗುತ್ತಾ ಹೋಗುತ್ತದೆ ಎಂದು ಮಾಹಿತಿ ನೀಡಿದ ಡಾ.ದೇವಿ ಪ್ರಸಾದ್ ಶೆಟ್ಟಿ, ಮೊದಲ ಅಲೆಯಲ್ಲಿ ಎಲ್ಲರೂ ಹೆದರಿಕೊಂಡು ವ್ಯಾಕ್ಸಿನ್ ತೆಗೆದುಕೊಂಡರು. ನಂತರ ಎರಡನೇ ಅಲೆಯಲ್ಲಿ ಸೆಕೆಂಡ್ ಡೋಸ್ ಅನ್ನು ನಿರ್ಲಕ್ಷಿಸಿದರು. ಆದರೆ ಹೀಗೆ ಮಾಡಬಾರದು. ಎಲ್ಲರೂ ಕಡ್ಡಾಯವಾಗಿ ಸೆಕೆಂಡ್ ಡೋಸ್ ತೆಗೆದುಕೊಳ್ಳಬೇಕು ಅಂದರು.

ಮೊದಲ ಡೋಸ್ ಅಷ್ಟೊಂದು ರಕ್ಷಣೆ ನೀಡಲ್ಲ. ಎರಡನೇ ಡೋಸ್ ಹೆಚ್ಚು ಪರಿಣಾಮಕಾರಿಯಾಗಿದೆ. ಸರ್ಕಾರ ಬೂಸ್ಟರ್ ಡೋಸ್ ತೆಗೆದುಕೊಳ್ಳಲು ಅನುಮತಿಸಿದರೆ ತಕ್ಷಣ ತೆಗೆದುಕೊಳ್ಳಬೇಕು. ವಿದೇಶಗಳಲ್ಲಿ ವ್ಯಾಕ್ಸಿನ್ ತೆಗೆದುಕೊಂಡವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವ್ಯಾಕ್ಸಿನ್ ತೆಗೆದುಕೊಳ್ಳದವರು ಸಾವನ್ನಪ್ಪಿದ್ದಾರೆ. ಹೀಗಾಗಿ ಎಲ್ಲರೂ ವ್ಯಾಕ್ಸಿನ್ ತೆಗೆದುಕೊಳ್ಳಬೇಕು ಅಂತ ತಿಳಿಸಿದರು.

ವ್ಯಾಕ್ಸಿನ್ ಖಾಲಿ ಆದ ನಂತರ ಸರ್ಕಾರವನ್ನು ನಿಂದಿಸಬಾರದು. ವ್ಯಾಕ್ಸಿನ್​ನ ಎಲ್ಲರೂ ತೆಗೆದುಕೊಂಡರೆ, ವ್ಯಾಕ್ಸಿನ್ ಖಾಲಿಯಾದರೆ ಕಂಪನಿಗಳು ಉತ್ಪಾದಿಸುತ್ತವೆ. ವ್ಯಾಕ್ಸಿನ್ ಉಳಿದರೆ ಕಂಪನಿಗಳು ತಯಾರಿಕೆ ನಿಲ್ಲಿಸುತ್ತವೆ. ಹಾಗಾಗಿ ಎಲ್ಲರೂ ಸ್ಟಾಕ್ ಇದ್ದಾಗಲೇ ವ್ಯಾಕ್ಸಿನ್​ ತೆಗೆದುಕೊಳ್ಳಬೇಕು. ಇನ್ನು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಅಂತರ ಕಾಯ್ದುಕೊಳ್ಳಬೇಕು ಅಂತ ಪ್ರಸಾದ್ ಶೆಟ್ಟಿ ಹೇಳಿದರು.

ಇದನ್ನೂ ಓದಿ

ಪ್ರೇಮಿಗಳು ಇಬ್ಬರೂ ತಬ್ಬಿಕೊಂಡು ಮುಡಿಕಟ್ಟೆ ಬಳಿ ಕಪಿಲಾ ನದಿಗೆ ಹಾರಿದರು! ಮುಂದೇನಾದರು?

ಅಮೆರಿಕದ ಹೈಸ್ಕೂಲ್​​​ನಲ್ಲಿ ಗುಂಡಿನ ದಾಳಿ ನಡೆಸಿದ 15ವರ್ಷದ ಬಾಲಕ; 3 ವಿದ್ಯಾರ್ಥಿಗಳು ಸಾವು, 8 ಮಂದಿಗೆ ಗಾಯ

Published On - 8:44 am, Wed, 1 December 21

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ