ಕೊವಿಡ್ 3ನೇ ಅಲೆ ಯಾವಾಗ ಬರುತ್ತೆಂದು ಊಹಿಸಲಾಧ್ಯ: ಡಾ ದೇವಿಪ್ರಸಾದ್ ಶೆಟ್ಟಿ
ಎಲ್ಲ ಸಲಹೆಗಳನ್ನು ನಾವು ಸರ್ಕಾರಕ್ಕೆ ತಿಳಿಸಿದ್ದೇವೆ. ಸರ್ಕಾರ ಅವುಗಳನ್ನು ಜಾರಿಗೆ ತರುತ್ತದೆ ಎಂದು ಅವರು ತಿಳಿಸಿದರು.
ಬೆಂಗಳೂರು: ಕೊರೊನಾ 3ನೇ ಅಲೆ ಯಾವಾಗ ಬರುತ್ತೆಂದು ಊಹಿಸಲು ಸಾಧ್ಯವಿಲ್ಲ. ಸದ್ಯ 3ನೇ ಅಲೆಯ ತೀವ್ರತೆ ಬಗ್ಗೆ ಹೇಳಲು ಆಗುವುದಿಲ್ಲ ಎಂದು ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕದಲ್ಲಿ ಸದ್ಯಕ್ಕೆ ಗಂಭೀರ ಸ್ಥಿತಿ ಇಲ್ಲ. ಕರ್ನಾಟಕದಲ್ಲಿ ನಾವು ಸಮಾಧಾನಕರ ಸ್ಥಿತಿಯಲ್ಲಿದ್ದೇವೆ. ಸಿಎಂ ನೇತೃತ್ವದ ಸಭೆಯ ಬಳಿಕ ದೇವಿಪ್ರಸಾದ್ ಶೆಟ್ಟಿ ತಿಳಿಸಿದರು. ಸರ್ಕಾರಕ್ಕೆ ನಾವು ಸಲಹೆ ನೀಡುವವರು, ಸರ್ಕಾರಕ್ಕೆ ಬಹಳಷ್ಟು ಇತಿಮಿತಿಗಳಿಗೆ ಮೂರನೇ ಅಲೆ ಎಷ್ಟಿದೆ ಯಾವಾಗ ಅಂತ ಯಾರೂ ಊಹಿಸಲು ಮಾಡಲು ಸಾಧ್ಯವಿಲ್ಲ. ಎಲ್ಲ ಸಲಹೆಗಳನ್ನು ನಾವು ಸರ್ಕಾರಕ್ಕೆ ತಿಳಿಸಿದ್ದೇವೆ. ಸರ್ಕಾರ ಅವುಗಳನ್ನು ಜಾರಿಗೆ ತರುತ್ತದೆ ಎಂದು ಅವರು ತಿಳಿಸಿದರು.
ಜಿಲ್ಲಾವಾರು ಕೊವಿಡ್ ತಡೆ ಯೋಜನೆ, ಗಡಿ ಜಿಲ್ಲೆಗಳ ಹಳ್ಳಿಗಳಲ್ಲಿ ಟೆಸ್ಟಿಂಗ್, 6 ಜಿನೋಮ್ ಟೆಸ್ಟಿಂಗ್ ಲ್ಯಾಬ್ ಸ್ಥಾಪನೆ ಕೊರೊನಾ 2ನೇ ಅಲೆ ಸಂಪೂರ್ಣವಾಗಿ ಹೋಗಿಲ್ಲ. ಬಹಳ ಎಚ್ಚರಿಕೆಯಿಂದ ಕೊರೊನಾ ನಿಯಂತ್ರಿಸಬೇಕಾಗಿದೆ. ಮಹಾರಾಷ್ಟ್ರ ಮತ್ತು ಕೇರಳದ ಗಡಿ ಹಳ್ಳಿಗಳಲ್ಲಿ ಸಂಪೂರ್ಣ ಕೊವಿಡ್ ಪರೀಕ್ಷೆ ನಡೆಸಲಾಗುವುದು. ಕೊವಿಡ್ ತಡೆಯಲು ಜಿಲ್ಲಾವಾರು ಯೋಜನೆಗೆ ನಿರ್ಧಾರ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಹಾಸನ, ಬೆಂಗಳೂರು ಗ್ರಾಮೀಣ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಗಳಲ್ಲಿ ಲಸಿಕೆ ವಿತರಣೆ ಇನ್ನೂ ವೇಗ ಪಡೆಯಬೇಕು. ಪಾಸಿಟಿವಿಟಿ ದರ 2 ಪರ್ಸೆಂಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಓಪನ್ ಮಾಡಬೇಕು. ಪೋಷಕರು ಮತ್ತು ಶಿಕ್ಷಕರು ಕೊರೊನಾ ಲಸಿಕೆ ಪಡೆದಿರಬೇಕು. ಕೊವಿಡ್ ಪಾಸಿಟಿವಿಟಿ ದರ ಶೇಕಡಾ 2ಕ್ಕಿಂತ ಹೆಚ್ಚಾದರೆ ಒಂದು ವಾರ ಶಾಲೆಯನ್ನು ಮುಚ್ಚಿ, ಸ್ಯಾನಿಟೈಸ್ ಮಾಡ್ತೇವೆ. ಸ್ಯಾನಿಟೈಸ್ ಮಾಡಿ ವಾರದ ಬಳಿಕ ಶಾಲೆ ಆರಂಭಿಸುತ್ತೇವೆ.
ರಾಯಚೂರು, ಕಲಬುರಗಿ, ಕೊಪ್ಪಳ, ಹಾವೇರಿ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಟೆಸ್ಟಿಂಗ್ ಹೆಚ್ಚಳಕ್ಕೆ ಚಿಂತಿಸಲಾಗಿದೆ. ಡೆಲ್ಟಾ ವೇರಿಯೆಂಟ್ ಪತ್ತೆಗೆ ಜಿನೋಮ್ ಲ್ಯಾಬ್ ಅಗತ್ಯವಾಗಿದ್ದು, ಮುಂದಿನ 3 ವಾರದಲ್ಲಿ 6 ಜಿನೋಮ್ ಟೆಸ್ಟಿಂಗ್ ಲ್ಯಾಬ್ ಸ್ಥಾಪಿಸಲಾಗುವುದು. ಬೆಂಗಳೂರು, ಮೈಸೂರು, ಶಿವಮೊಗ್ಗ, ಬೆಳಗಾವಿ, ಕಲಬುರಗಿ, ಹುಬ್ಬಳ್ಳಿಯಲ್ಲಿ ಜಿನೋಮ್ ಟೆಸ್ಟಿಂಗ್ ಲ್ಯಾಬ್ ಆರಂಭ ಮಾಡಲಾಗುವುದು.
ರಾಜ್ಯದಲ್ಲಿ 2ನೇ ಅಲೆ ಮುಗಿದಿಲ್ಲ, 3ನೇ ಅಲೆ ಆರಂಭವಾಗಿಲ್ಲ. ಹಬ್ಬಗಳಿಗೆ ಕಳೆದ ವರ್ಷದ ಕೊವಿಡ್ ನಿಯಮಗಳೇ ಮುಂದುವರೆಯಲಿದೆ. ಮೊದಲ ಅಲೆ ಆರಂಭವಾಗಿದ್ದು ಕೇರಳ ರಾಜ್ಯದಲ್ಲಿ. ಈಗ ಹೆಚ್ಚು ಕೇಸ್ ಇರುವುದು ಕೂಡ ಕೇರಳದಲ್ಲಿಯೇ. ಕೇರಳ ಹೈಕೋರ್ಟ್‌ನಲ್ಲಿ ಕೇಸ್ ಹಾಕುವ ಬದಲು ಸೋಂಕು ನಿಯಂತ್ರಿಸಲಿ ಎಂದು ಅವರು ಆಶಿಸಿದರು.
ಶೇ.2ಕ್ಕಿಂತ ಹೆಚ್ಚಾದರೆ ಬೆಡ್ ಅಲಾಟ್‌ಮೆಂಟ್‌ಗೆ ಸೂಚನೆ ನೀಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಶೇ.40ರಷ್ಟು ಬೆಡ್ ಪಡೆಯುತ್ತೇವೆ. ಬೆಡ್ ಪಡೆಯುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ದಕ್ಷಿಣ ಕನ್ನಡ, ಹಾಸನ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಪಾಸಿಟಿವಿಟಿ ಹೆಚ್ಚಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಹೆಚ್ಚು ವ್ಯಾಕ್ಸಿನೇಷನ್ ಆಗಬೇಕಿದೆ. ಟೆಸ್ಟಿಂಗ್ ಜೊತೆಗೆ ವ್ಯಾಕ್ಸಿನೇಷನ್ ಕೂಡ ಹೆಚ್ಚು ಮಾಡಬೇಕಿದೆ. ರಾಯಚೂರು, ಕಲಬುರಗಿ, ಕೊಪ್ಪಳ, ಹಾವೇರಿ, ತುಮಕೂರು, ಬೆಂಗಳೂರು ಗ್ರಾಮಾಂತರದಲ್ಲಿ ಟೆಸ್ಟಿಂಗ್ ಹೆಚ್ಚಳಕ್ಕೆ ಚಿಂತನೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ರಾಜ್ಯದಲ್ಲಿ 4 ಕೋಟಿಯಷ್ಟು ವ್ಯಾಕ್ಸಿನೇಷನ್ ಆಗಿದೆ. ರಾಜ್ಯದಲ್ಲಿ ಸದ್ಯ 14,89,000 ಡೋಸ್ ಲಸಿಕೆ ಲಭ್ಯವಿದೆ. ಈ ತಿಂಗಳಾಂತ್ಯಕ್ಕೆ ಮತ್ತಷ್ಟು ಕೊವಿಡ್ ಲಸಿಕೆ ಬರಲಿದೆ. ರಾಜ್ಯಕ್ಕೆ ಸದ್ಯ 68 ಲಕ್ಷ ಲಸಿಕೆಯನ್ನು ಕಳುಹಿಸಲಾಗುತ್ತಿದೆ. ಮತ್ತಷ್ಟು ಲಸಿಕೆ ಪೂರೈಕೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ಓದಿ:
ಹಿಂದಿನ ಅನುಭವಗಳ ಮೇಲೆ ಕೊವಿಡ್ ನಿರ್ವಹಣೆಗೆ ಗಮನವಹಿಸಲಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ
(Dr Deviprasad Shetty says Can not imagine when covid 19 3rd wave will come)