AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಪ್ರಕರಣ; ಟಿವಿ9 ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ.ಕೆ.ಸುಧಾಕರ್

ಪೂರ್ವ ಸಿದ್ಧತೆಯ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಮಾತನಾಡಿದ ಸಚಿವರು, ಮುಖ್ಯಮಂತ್ರಿಗಳು ನೇಮಕ ಮಾಡಿರುವ ಡಾ.ದೇವಿಪ್ರಸಾದ್ ಶೆಟ್ಟಿಯವರ ವರದಿ ಮೇಲೆ ಪೂರ್ವ ಸಿದ್ಧತೆಗಳ ಬಗ್ಗೆ ತೀರ್ಮಾನ ಮಾಡುತ್ತೀವಿ. ಅನ್​ಲಾಕ್​ ಬಗ್ಗೆಯೂ ಸಿಎಂ ನೇತೃತ್ವದಲ್ಲಿ ಸಚಿವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ಪ್ರಕರಣ; ಟಿವಿ9 ವರದಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಡಾ.ಕೆ.ಸುಧಾಕರ್
ಕೆ. ಸುಧಾಕರ್​
TV9 Web
| Edited By: |

Updated on:Jun 07, 2021 | 2:34 PM

Share

ಬೆಂಗಳೂರು: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಕೊರೊನಾ ಸಂದರ್ಭದಲ್ಲಿ ಬೇಜಾವಬ್ದಾರಿಂದ ವರ್ತಿಸುತ್ತಿರುವ ಬಗ್ಗೆ ಟಿವಿ9ನಲ್ಲಿ ಪ್ರಸಾರವಾಗಿತ್ತು. ಕಿಮ್ಸ್ ಆಸ್ಪತ್ರೆಯ ಈ ಪ್ರಕರಣಕ್ಕೆ ಸಂಬಂಧಿಸಿ ಟಿವಿ9ಗೆ ಆರೋಗ್ಯ ಸಚಿವ ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಬಗ್ಗೆ ನನಗೂ ದೂರುಗಳು ಬಂದಿತ್ತು. ಈ ಬಗ್ಗೆ ತನಿಖೆ ಮಾಡಿ ವರದಿ ಕೊಡಲು ಹೇಳಿದ್ದೇನೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ರಕ್ಷಿಸುವುದಿಲ್ಲ. ಟಿವಿ9 ಕೂಡ ಉತ್ತಮ ಕೆಲಸವನ್ನು ಮಾಡಿದೆ. ಯಾರೇ ಆಗಲಿ ಈ ರೀತಿ ಮಾಡುವವರಿಗೆ ಬುದ್ಧಿ ಕಲಿಸಬೇಕಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಹೇಳಿಕೆ ನೀಡಿದರು. ಪ್ರಕರಣವೇನು? ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಬರೋಬ್ಬರಿ 960 ವೈದ್ಯರಿದ್ದಾರೆ ಎನ್ನುವುದು ಆರೋಗ್ಯ ಸಚಿವರೇ ಖಚಿತಪಡಿಸಿದ್ದಾರೆ. ಅಲ್ಲದೆ ದೂರದ ಅಮೇರಿಕಾ ಆಸ್ಟ್ರೇಲಿಯದಲ್ಲೂ ಇಷ್ಟೊಂದು ದೊಡ್ಡ ಸಂಖ್ಯೆಯ ವೈದ್ಯರು ಇಲ್ಲ ಅಂತಾರೆ‌. 960 ರಲ್ಲಿ 420 ಜನ ಪಿಜಿ ವೈದ್ಯರು 141 ಜನ ಹೌಸ್ ಸರ್ಜನ್ ಹಾಗೂ ಎಂಡಿ ಮುಗಿಸಿರುವ 400 ಕ್ಕೂ ಹೆಚ್ಚು ಜನ ವೈದ್ಯರು ಕಿಮ್ಸ್​ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ವೈದ್ಯರು ಸರ್ಕಾರದಿಂದ 2 ರಿಂದ 3 ಲಕ್ಷ ರೂ. ಸಂಬಳ ಪಡೆಯುತ್ತಾರೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಸಂಬಳ ತೆಗೆದುಕೊಳ್ಳುವ ವೈದ್ಯರು ಸರಿಯಾಗಿ ಕೆಲಸಕ್ಕೆ ಬರದೇ ಮೈಗಳ್ಳರಾಗಿ ವರ್ತಿಸುತ್ತಿದ್ದಾರೆ ಎಂದು ಟಿವಿ9 ನಲ್ಲಿ ಪ್ರಸಾರವಾಗಿತ್ತು.

ಕೊರೊನಾ ಮೂರನೇ ಅಲೆಯ ಪೂರ್ವ ಸಿದ್ಧತೆಯ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಮಾತನಾಡಿದ ಆರೋಗ್ಯ  ಸಚಿವರು, ಮುಖ್ಯಮಂತ್ರಿಗಳು ನೇಮಕ ಮಾಡಿರುವ ಡಾ.ದೇವಿಪ್ರಸಾದ್ ಶೆಟ್ಟಿಯವರ ವರದಿ ಮೇಲೆ ಪೂರ್ವ ಸಿದ್ಧತೆಗಳ ಬಗ್ಗೆ ತೀರ್ಮಾನ ಮಾಡುತ್ತೀವಿ. ಅನ್​ಲಾಕ್​ ಬಗ್ಗೆಯೂ ಸಿಎಂ ನೇತೃತ್ವದಲ್ಲಿ ಸಚಿವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಕೊವಿಡ್ ಲಸಿಕೆ ಸಿಗುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸುಧಾಕರ್, ಇದರ ಬಗ್ಗೆ ಅಪಪ್ರಚಾರ ಮಾಡುವುದು ಬೇಡ. ಹೆಚ್ಚು ಲಸಿಕೆ ನೀಡುವುದಕ್ಕೆ ಶತಪ್ರಯತ್ನ ನಡೆಯುತ್ತಿದೆ ಎಂದು ಅಭಿಪ್ರಾಯಪಟ್ಟರು. ಈ ತಿಂಗಳು ಖಾಸಗಿ ಆಸ್ಪತ್ರೆಯವರು 24.46 ಲಕ್ಷ ಡೋಸ್ ಲಸಿಕೆಗೆ ಬೇಡಿಕೆ ಇಟ್ಟಿದ್ದರು. ನಿನ್ನೆ ರಾಜ್ಯಕ್ಕೆ 15,80,520 ಡೋಸ್ ಲಸಿಕೆ ಬಂದಿದೆ. ಈ ತಿಂಗಳಾಂತ್ಯಕ್ಕೆ 70 ಲಕ್ಷ ಡೋಸ್ ಲಸಿಕೆ ನೀಡುತ್ತೇವೆ ಎಂದು ಹೇಳಿದರು.

ಟಿವಿ9 ರಹಸ್ಯ ಕಾರ್ಯಾಚರಣೆಗೆ ಪ್ರಹ್ಲಾದ್ ಜೋಶಿ ಮೆಚ್ಚುಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ವರದಿ ಬಗ್ಗೆ ಟಿವಿ9ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೆಚ್ಚುಗೆ ಸೂಚಿಸಿದ್ದಾರೆ. ಯಾರಿಗೆ ಕೆಲಸ ಮಾಡುವುದಕ್ಕೆ ಇಷ್ಟವಿಲ್ಲವೋ ಅವರು ಬೇಡ. ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು. ಟಿವಿ9 ವರದಿಯನ್ನು ಡಿಸಿ ಗಂಭೀರವಾಗಿ ಪರಿಗಣಿಸಬೇಕು. ಕೆಲಸಗಳ್ಳ ಕಿಮ್ಸ್ ವೈದ್ಯರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಎಲ್ಲರ ಕಣ್ಣು ತೆರಿಸಿದ ಟಿವಿ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಈ ಮೊದಲು ಕಿಮ್ಸ್‌ ವೈದ್ಯರಿಗೆ ಸರಿಯಾಗಿ ಕೆಲಸ ನಿರ್ವಹಿಸುವಂತೆ ಹೇಳಿದ್ದೇನೆ. ವೈದ್ಯರ ನಡೆ ಬಗ್ಗೆ ಕಿಮ್ಸ್ ನಿರ್ದೇಶಕರ ಜೊತೆ ಮಾತನಾಡುವೆ. ವೈದ್ಯರು ನಿಗದಿತ ಸಮಯ ಆಸ್ಪತ್ರೆಯಲ್ಲಿ ಕೆಲಸ ಮಾಡಬೇಕು. ತಪ್ಪು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅಭಿಪ್ರಾಯಪಟ್ಟರು.

ಈ ಬಗ್ಗೆ ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಪ್ರತಿಕ್ರಿಯಿಸಿ, ರಾಜ್ಯದ ಹಲವು ಆಸ್ಪತ್ರೆಗಳಲ್ಲಿ ಇಂತಹ ಕೆಲಸಗಳ್ಳರು ಇದ್ದಾರೆ. ಅದರಲ್ಲೂ ಜಿಲ್ಲಾಸ್ಪತ್ರೆ, ಮೆಡಿಕಲ್ ಆಸ್ಪತ್ರೆಗಳಲ್ಲಿ ಹೆಚ್ಚಾಗಿದ್ದಾರೆ. ಸರ್ಕಾರದಿಂದ ಸಂಬಳ ಪಡೆದು ಅನ್ಯಾಯ ಮಾಡೋರಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು. ಕೆಲಸಗಳ್ಳ ವೈದ್ಯರ ವಿರುದ್ಧ ಕ್ರಮಕ್ಕೆ ಸಿಎಂ ಜೊತೆ ಚರ್ಚಿಸ್ತೇವೆ ಎಂದು ಹೇಳಿದರು.

ಇದನ್ನೂ ಓದಿ

ಲಾಕ್​ಡೌನ್​ ಸಮಯದ ಸದುಪಯೋಗ; 32 ಅಡಿ ಬಾವಿ ತೋಡಿ ಗ್ರಾಮಸ್ಥರಿಗೆ ನೆರವಾದ ಉತ್ತರ ಕನ್ನಡದ ವ್ಯಕ್ತಿ

ನಟ ದಿಲೀಪ್​ ಕುಮಾರ್​ ಬಗ್ಗೆ ವಾಟ್ಸ್​ಆ್ಯಪ್​ನಲ್ಲಿ ಹರಿದಾಡುತ್ತಿದೆ ಕೆಟ್ಟ ಸುದ್ದಿ; ಪತ್ನಿ ನೀಡಿದ ಸ್ಪಷ್ಟನೆ ಏನು?

(Dr K Sudhakar congratulates TV9 on reporting on Hubli KIMS Hospital mess)

Published On - 12:37 pm, Mon, 7 June 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?