ರಾಜ್ಯದಲ್ಲಿ 97 ಜನರಿಗೆ ಬ್ಲ್ಯಾಕ್ ಫಂಗಸ್ ಬಂದಿದೆ; ಆರೋಗ್ಯ ಸಚಿವ ಸುಧಾಕರ್ ಮಾಹಿತಿ
ಕ್ಯಾನ್ಸರ್ ರೋಗಿಗಳು, ಹೆಚ್ಐವಿ ಇರುವವರು, ಅಂಗಾಂಗ ಕಸಿ ಮಾಡಿಸಿಕೊಂಡವರಿಗೆ ಈ ಫಂಗಸ್ ತಗುಲುವ ಸಾಧ್ಯತೆಯಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ. ಮಧುಮೇಹಿಗಳು, ಅಂಗಾಂಗ ಕಸಿ ಮಾಡಿಸಿಕೊಂಡವರು, ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿರುವವರು, ಹೆಚ್ಐವಿ ಸೇರಿದಂತೆ ಇತರೆ ಕಾಯಿಲೆ ಇದ್ದವರು ಎಚ್ಚರದಿಂದ ಇರಬೇಕು.
ಬೆಂಗಳೂರು: ರಾಜ್ಯದಲ್ಲಿ ಕೆಲವರಿಗೆ ಬ್ಲ್ಯಾಕ್ ಫಂಗಸ್ ಬಂದಿದೆ ಎಂದು ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ಬ್ಲ್ಯಾಕ್ ಫಂಗಸ್ ಸಂಬಂಧ ತಜ್ಞರ ಜೊತೆ ಸಭೆ ನಡೆದಿದೆ. ಫಂಗಸ್ಗೆ ಚಿಕಿತ್ಸೆ, ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ. ಸಂಜೆ 5 ಗಂಟೆಗೆ ರಾಜ್ಯ ಸರ್ಕಾರಕ್ಕೆ ಟಾಸ್ಕ್ ಫೋರ್ಸ್ ವರದಿ ನೀಡುತ್ತದೆ. ಕೊರೊನಾದಷ್ಟೇ ಬ್ಲ್ಯಾಕ್ ಫಂಗಸ್ ಹರಡುತ್ತಿಲ್ಲ. ಅನ್ ಕಂಟ್ರೋಲ್ಡ್ ಡಯಾಬಿಟಿಸ್ ಇರುವವರಿಗೆ ಕೊರೊನಾ ಸೋಂಕು ಬಂದಾಗ ಸ್ಟಿರಾಯ್ಡ್ ಬಳಸಿದರೆ ಅಂತಹವರಿಗೆ ಸ್ವಾಭಾವಿಕವಾಗಿ ಶುಗರ್ ಹೆಚ್ಚಾಗುತ್ತದೆ. ಇಂತಹವರು ಆರೋಗ್ಯದ ಮೇಲೆ ನಿಗಾ ಇಡಬೇಕು ಎಂದು ಹೇಳಿದರು.
ಕಾನೂನು ಕ್ರಮ ಕ್ಯಾನ್ಸರ್ ರೋಗಿಗಳು, ಹೆಚ್ಐವಿ ಇರುವವರು, ಅಂಗಾಂಗ ಕಸಿ ಮಾಡಿಸಿಕೊಂಡವರಿಗೆ ಈ ಫಂಗಸ್ ತಗುಲುವ ಸಾಧ್ಯತೆಯಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ. ಮಧುಮೇಹಿಗಳು, ಅಂಗಾಂಗ ಕಸಿ ಮಾಡಿಸಿಕೊಂಡವರು, ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿರುವವರು, ಹೆಚ್ಐವಿ ಸೇರಿದಂತೆ ಇತರೆ ಕಾಯಿಲೆ ಇದ್ದವರು ಎಚ್ಚರದಿಂದ ಇರಬೇಕು. ಕೊರೊನಾದಿಂದ ಗುಣಮುಖರಾದ ಬಳಿಕ ಕಿವಿ, ಮೂಗು, ಕಣ್ಣು ತಪಾಸಣೆ ಮಾಡಿಸಿಕೊಳ್ಳಬೇಕು. ತಪಾಸಣೆ ಮಾಡಿಸಿಕೊಂಡು ಡಿಸ್ಚಾರ್ಜ್ ಆಗಬೇಕು. ಇದನ್ನು ಯಾರೂ ಮುಚ್ಚಿಡಬಾರದು. ಮುಚ್ಚಿಟ್ಟರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಇಂದು ನೋಟಿಸ್ ಸಹ ಹೊರಡಿಸುತ್ತೇವೆ ಎಂದು ತಿಳಿಸಿದರು.
ಫಂಗಸ್ ಅನ್ನೋದು ಗಾಳಿಯಲ್ಲಿಯೂ ಇರುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆ ಇದ್ದರೆ ಅಟ್ಯಾಕ್ ಮಾಡುತ್ತದೆ. ಇದು ಮೊದಲಿಗೆ ಕಣ್ಣಿಗೆ ಅಟ್ಯಾಕ್ ಆಗುತ್ತದೆ. ಕಣ್ಣಿನ ನೋವು, ಊತ ಬರುವುದು ಆಗುತ್ತದೆ. ಕಣ್ಣು, ಮುಗಿನ ಬಳಿಕ ಮೆದುಳಿಗೆ ತಾಗುತ್ತದೆ. ಹೀಗಾಗಿ ಆರಂಭದಲ್ಲೇ ಎಚ್ಚರಿಕೆ ವಹಿಸಬೇಕಾಗಿದೆ. ಈ ಬಗ್ಗೆ ಪತ್ತೆ ಹಚ್ಚುವುದಕ್ಕೆ ಸಮಿತಿಯನ್ನು ರಚಿಸಿದ್ದೇವೆ. ವೆಂಟಿಲೇಟರ್ಗಳು ಸ್ವಚ್ಛವಾಗಿಲ್ಲದೆ ಹರಡುತ್ತಿದೆಯಾ. ಎಲ್ಲದರ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡಲು ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.
ಮೈಸೂರು ಮೆಡಿಕಲ್ ಕಾಲೇಜು, ಶಿವಮೊಗ್ಗ, ಕಲಬುರಗಿಯ ಜಿಮ್ಸ್, ಹುಬ್ಬಳ್ಳಿಯ ಕಿಮ್ಸ್, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ಗೆ ಚಿಕಿತ್ಸೆ ನೀಡುವುದಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಆಯಾ ಸ್ಥಳದಲ್ಲೇ ಬ್ಲ್ಯಾಕ್ ಫಂಗಸ್ಗೆ ಚಿಕಿತ್ಸೆ ನೀಡಲಾಗುವುದು. ನಾವು ಹೋಮ್ ಐಸೋಲೇಶನ್ನಲ್ಲಿರುವ ಸೋಂಕಿತರಿಗೆ ಸ್ಟೀರಾಯ್ಡ್ ನೀಡುತ್ತಿಲ್ಲ. ಒಂದೊಮ್ಮೆ ನೀಡುತ್ತಿದ್ದರೆ ನಾನು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡುತ್ತೇನೆ. ಹೋಮ್ ಐಸೋಲೇಶನ್ನಲ್ಲಿ ಇರುವವರಿಗೆ ಸ್ಟೀರಾಯ್ಡ್ ನೀಡುವಂತಿಲ್ಲ ಎಂದು ಸಚಿವರು ಅಭಿಪ್ರಾಯಪಟ್ಟರು.
ಇದನ್ನೂ ಓದಿ
ಶ್ರೀನಿವಾಸ್, ಗೌತಮ್ ಗಂಭೀರ್ ಮತ್ತಿತರರು ಜನರನ್ನು ವಂಚಿಸುತ್ತಿಲ್ಲ.. ಸಹಾಯ ಮಾಡುತ್ತಿದ್ದಾರೆ: ದೆಹಲಿ ಪೊಲೀಸ್
(Dr K Sudhakar informed that 97 people in state had black fungus)
Published On - 2:38 pm, Mon, 17 May 21