AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲಿ ಗ್ರಾಮೀಣ‌ ಪ್ರದೇಶದಲ್ಲಿ ಚುನಾವಣೆ ಸೂಕ್ತವಲ್ಲ -ಡಾ. ಕೆ. ಸುಧಾಕರ್​

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಚುನಾವಣೆ ಎಂಬುದು ಹಬ್ಬ. ಆದರೆ, ಕೊವಿಡ್ ಮಹಾಮಾರಿಯ ಈ ಸಮಯದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾರ್ಚ್​ವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಜನರು ಚುನಾವಣೆ ಮೂಲಕ ತಮ್ಮ ಸೇವೆ ಮಾಡುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಈ ರೀತಿ ಜನಾದೇಶದ ಮೂಲಕ ನಡೆಯುವ ವ್ಯವಸ್ಥೆ ಪ್ರಜೆಗಳ ಪರವಾಗಿರುತ್ತದೆ. ಆದರೆ ಈ ಸಂದರ್ಭದಲ್ಲಿ ಕೋವಿಡ್ ಮಹಾಮಾರಿಯಿಂದಾಗಿ ಎಲ್ಲ ಚಟುವಟಿಕೆಗಳಿಗೂ […]

ಕೊರೊನಾ ಕಾಲದಲ್ಲಿ ಗ್ರಾಮೀಣ‌ ಪ್ರದೇಶದಲ್ಲಿ ಚುನಾವಣೆ ಸೂಕ್ತವಲ್ಲ -ಡಾ. ಕೆ. ಸುಧಾಕರ್​
KUSHAL V
| Edited By: |

Updated on: Oct 28, 2020 | 2:29 PM

Share

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಚುನಾವಣೆ ಎಂಬುದು ಹಬ್ಬ. ಆದರೆ, ಕೊವಿಡ್ ಮಹಾಮಾರಿಯ ಈ ಸಮಯದಲ್ಲಿ ಜನರ ಆರೋಗ್ಯದ ಹಿತದೃಷ್ಟಿಯಿಂದ ಮಾರ್ಚ್​ವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಜನರು ಚುನಾವಣೆ ಮೂಲಕ ತಮ್ಮ ಸೇವೆ ಮಾಡುವ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ. ಈ ರೀತಿ ಜನಾದೇಶದ ಮೂಲಕ ನಡೆಯುವ ವ್ಯವಸ್ಥೆ ಪ್ರಜೆಗಳ ಪರವಾಗಿರುತ್ತದೆ. ಆದರೆ ಈ ಸಂದರ್ಭದಲ್ಲಿ ಕೋವಿಡ್ ಮಹಾಮಾರಿಯಿಂದಾಗಿ ಎಲ್ಲ ಚಟುವಟಿಕೆಗಳಿಗೂ ಅಡ್ಡಿಯಾಗಿದೆ.

ಇಂತಹ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದರೆ ಕೊವಿಡ್ ಸೋಂಕು ಮತ್ತಷ್ಟು ಹರಡುವ ಆತಂಕವನ್ನು ಅಲ್ಲಗಳೆಯಲು ಸಾಧ್ಯವಿಲ್ಲ. ಮಾರ್ಚ್​ವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವುದು ಸರಿಯಲ್ಲ ಎಂದು ತಜ್ಞರು ಕೂಡ ಅಭಿಪ್ರಾಯಪಟ್ಟಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಕೊರೊನಾ ವೈರಸ್ ಯಾವ ಕಾಲದಲ್ಲಿ ಹೇಗೆ ವರ್ತಿಸುತ್ತದೆ ಎಂಬುದರ ಬಗ್ಗೆ ಇನ್ನೂ ಅಧ್ಯಯನಗಳಾಗುತ್ತಿವೆ. ಚಳಿಗಾಲದಲ್ಲಿ ವೈರಸ್ ಹೇಗೆ ಹರಡುತ್ತದೆ ಎಂಬುದು ಕೂಡ ಇನ್ನೂ ತಿಳಿಯಬೇಕಿದೆ. ಇಂತಹ ಸಂದರ್ಭದಲ್ಲಿ ಚುನಾವಣೆ ನಡೆದರೆ, ಜನರು ಭೌತಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಮೊದಲಾದ ಕ್ರಮಗಳನ್ನು ಅನುಸರಿಸುವುದು ಕಷ್ಟವಾಗುತ್ತದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಈಗಾಗಲೇ ವಿಧಾನಸಭೆಯ ಎರಡು ಮತ್ತು ವಿಧಾನಪರಿಷತ್‍ನ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಇಂತಹ ಸಂದರ್ಭದಲ್ಲೇ ಜನರು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸುವಲ್ಲಿ ಎಡವುತ್ತಿದ್ದಾರೆ ಎಂಬುದನ್ನು ನೋಡುತ್ತಿದ್ದೇವೆ. ಇನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದರೆ ಗ್ರಾಮೀಣ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳ ಪಾಲನೆ ಬಹಳ ಕಷ್ಟವಾಗುತ್ತದೆ. ಆದ್ದರಿಂದ ಸಾರ್ವಜನಿಕರ ಬದುಕಿನ ದೃಷ್ಟಿಯಿಂದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುವುದು ಒಳಿತು ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ
ಸಿದ್ದರಾಮಯ್ಯ ಪರ ಯತ್ನಾಳ್ ಬ್ಯಾಟಿಂಗ್, ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯ