ಅಫಜಲಪುರ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 4 ರೋಗಿಗಳ ಸಾವು: ಪ್ರತಿಕ್ರಿಯೆಗೆ ನಿರಾಕರಿಸಿ, ಸ್ಥಳದಿಂದ ಕಾಲ್ಕಿತ್ತ ಸಚಿವ ಸುಧಾಕರ್

ಅಫಜಲಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮುಂಜಾನೆ ಆರು ಗಂಟೆಯಿಂದ ಒಂಬತ್ತು ಗಂಟೆವರಗೆ ಏನಾಗಿತ್ತು? ಪ್ರತಿ ದಿನ ಆಕ್ಸಿಜನ್ ತುಂಬಿಸಿಕೊಳ್ಳಲು ಹತ್ತು ಗಂಟೆ ಕಾಯಬೇಕು ಎಂದು ಆಕ್ಸಿಜನ್ ಕೊರತೆ ಕರಾಳತೆಯನ್ನು ಆಸ್ಪತ್ರೆಯ ಸಿಬ್ಬಂದಿ ಯೂಸೂಪ್ ಖಾನ್ ಟಿವಿ9 ಗೆ ತಿಳಿಸಿದ್ದಾರೆ.

ಅಫಜಲಪುರ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ 4 ರೋಗಿಗಳ ಸಾವು: ಪ್ರತಿಕ್ರಿಯೆಗೆ ನಿರಾಕರಿಸಿ, ಸ್ಥಳದಿಂದ ಕಾಲ್ಕಿತ್ತ ಸಚಿವ ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ
Follow us
ಸಾಧು ಶ್ರೀನಾಥ್​
|

Updated on:May 04, 2021 | 3:05 PM

ಬೆಂಗಳೂರು/ಕಲಬುರಗಿ: ಜಿಲ್ಲೆಯ ಅಫಜಲಪುರ ಆಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ನಾಲ್ವರು ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್​ ಅವರು ಪ್ರತಿಕ್ರಿಯೆಗೆ ನಿರಾಕರಿಸಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕಲಬುರಗಿ ಜಲ್ಲೆ ಅಫಜಲಪುರ ಆಸ್ಪತ್ರೆಯಲ್ಲಿ ನಾಲ್ವರ ಸಾವು ಪ್ರಕರಣದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೆ ಎಸ್ಕೇಪ್​ ಆದ ಸಚಿವ ಸುಧಾಕರ್, ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಜತೆಗಿನ ಸಭೆಗೆ ತೆರಳಿದರು. ಯಾವಾಗಲೂ 20 ನಿಮಿಷ ಉದ್ದುದ್ದ ಭಾಷಣ ಬಿಗಿಯುತ್ತಿದ್ದ ಸಚಿವ ಸುಧಾಕರ್ ಇಂದು ಸಿಎಂ ಮೀಟಿಂಗ್​ಗೆ ಹೊರಟೇ ಎನ್ನುತ್ತಾ, ಪ್ರಕರಣದ ಬಗ್ಗೆ ಯಾವುದೇ ಹೇಳಿಕೆ ನೀಡದೆ ಕಾಲ್ಕಿತ್ತಿದ್ದಾರೆ. ಗಮನಾರ್ಹವೆಂದ್ರೆ, ಸಿಎಂ ಸಭೆಯ ಬಳಿಕವೂ ರೆಮಿಡೆಸಿವಿರ್ ಕುರಿತಾದ ಮಾಧ್ಯಮದವರ ಪ್ರಶ್ನೆಗೆ ಆರೋಗ್ಯ ಸಚಿವ ಡಾ. ಸುಧಾಕರ್ ಯಾವುದೇ ಪ್ರತಿಕ್ರಿಯೆ ನೀಡದೇ ತೆರಳಿದರು.

ತಾಜಾ ವರದಿಗಳ ಪ್ರಕಾರ  ಅಫಜಲಪುರ ಆಸ್ಪತ್ರೆಯಲ್ಲಿ 4 ರೋಗಿಗಳ ಸಾವು ವಿಚಾರವಾಗಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಜತೆಗಿನ ಸಭೆಯ ಬಳಿಕ ಕಲಬುರಗಿ ಡಿಹೆಚ್‌ಒರಿಂದ ಸಚಿವ ಸುಧಾಕರ್ ಮಾಹಿತಿ ಪಡೆದುಕೊಂಡರು. ಆ ವೇಳೆ ಆಕ್ಸಿಜನ್ ಕೊರತೆಯಿಂದ ಸೋಂಕಿತರು ಮೃತಪಟ್ಟಿಲ್ಲವೆಂದು ಆರೋಗ್ಯ ಸಚಿವ ಡಾ. ಸುಧಾಕರ್‌ಗೆ DHO ಮಾಹಿತಿ ನೀಡಿದ್ದಾರೆ.

ತುರ್ತು ಸುದ್ದಿಗೋಷ್ಟಿಯಲ್ಲಿ ಜಿಲ್ಲಾಧಿಕಾರಿ ವಿ ವಿ ಜ್ಯೋತ್ಸ್ನಾ  ಹೇಳಿದ್ಧೇನು?

ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯುಂಟಾಗಿ ನಾಲ್ವರು ಪ್ರಾಣ ಕಳೆದುಕೊಂಡ ವಿಚಾರವಾಗಿ ಕಲಬುರಗಿಯಲ್ಲಿ ಜಿಲ್ಲಾಧಿಕಾರಿ ವಿ ವಿ ಜ್ಯೋತ್ಸ್ನಾ ತುರ್ತು ಸುದ್ದಿಗೋಷ್ಟಿ ನಡೆಸಿದ್ದಾರೆ. ಈಗಾಗಲೇ ಆಸ್ಪತ್ರೆ ವೈದ್ಯಾಧಿಕಾರಿ, ತಹಶಿಲ್ದಾರ್, ಎಸಿ ಅವರುಗಳನ್ನ ಸಂಪರ್ಕಿಸಲಾಗಿದೆ. ನಿನ್ನೆಯಿಂದ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಅಫಜಲಪುರ ತಾಲೂಕ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ತಪ್ಪು ಮಾಹಿತಿಯಿಂದ ಮಾಧ್ಯಮಗಳಲ್ಲಿ ಆಕ್ಸಿಜನ್ ಕೊರತೆ ಎದುರಾಗಿದೆ ಅಂತಾ ಸುದ್ದಿ ಆಗಿದೆ. ಮೃತಪಟ್ಟ ರೋಗಿಗಳು ವಿವಿಧ ಕಾರಣಗಳಿಂದ ಮೃತಪಟ್ಟಿದ್ದಾರೆ. ಬೇರೆ ಬೇರೆ ಸಮಯದಲ್ಲಿ, ಬೇರೆ ಬೇರೆ ಸಮಯದಲ್ಲಿ ರೋಗಿಗಳು ಮೃತಪಟ್ಟಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯುತ್ತಿದೆ. ತಾಲೂಕಾ ಆಸ್ಪತ್ರೆಯಲ್ಲಿ ಯಾವುದೇ ವೈಫಲ್ಯ ಇಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಅಫಜಲಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮುಂಜಾನೆ ಆರು ಗಂಟೆಯಿಂದ ಒಂಬತ್ತು ಗಂಟೆವರಗೆ ಏನಾಗಿತ್ತು?:

ಅಫಜಲಪುರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಮುಂಜಾನೆ ಆರು ಗಂಟೆಯಿಂದ ಒಂಬತ್ತು ಗಂಟೆವರಗೆ ಆಕ್ಸಿಜನ್ ಇರಲಿಲ್ಲಾ. ರಾತ್ರಿ ಒಂಬತ್ತು ಗಂಟೆಗೆ ಆಕ್ಸಿಜನ್ ತರಲು ಕಲಬುರಗಿಗೆ ಹೋಗಿದ್ವಿ. ಆದ್ರೆ ಮುಂಜಾನೆ ಎಂಟು ಗಂಟೆಗೆ ಆಕ್ಸಿಜನ್ ಕೊಟ್ಟಿದ್ದಾರೆ. ಬಂದು ಆಕ್ಸಿಜನ್ ಹಚ್ಚಲು ಒಂಬತ್ತು ಗಂಟೆಯಾಯಿತು. ಇರೋದೋ ಕೇವಲ ಹತ್ತು ಜಂಬೂ ಸಿಲಿಂಡರ್ ಮಾತ್ರ. ಅದರಲ್ಲಿ ಐದು ಆನ್ ಮಾಡಿ, ಐದು ಕಲಬುರಗಿಗೆ ತುಂಬಿಸಿಕೊಂಡು ಬರಲು ಹೋಗಿತ್ತು. ಅಲ್ಲಿ ಆಕ್ಸಿಜನ್ ತುಂಬಿ ಕೊಡಲು ವಿಳಂಬವಾಗ್ತಿದೆ. ಪ್ರತಿ ದಿನ ಆಕ್ಸಿಜನ್ ತುಂಬಿಸಿಕೊಳ್ಳಲು ಹತ್ತು ಗಂಟೆ ಕಾಯಬೇಕು ಎಂದು ಆಕ್ಸಿಜನ್ ಕೊರತೆ ಕರಾಳತೆಯನ್ನು ಆಸ್ಪತ್ರೆಯ ಸಿಬ್ಬಂದಿ ಯೂಸೂಪ್ ಖಾನ್ ಟಿವಿ9 ಗೆ ತಿಳಿಸಿದ್ದಾರೆ.

(Dr K Sudhakar refuses to react on afzalpur oxygen shortage resulting 4 covid patients death)

Also Read ಸಚಿವ ಸುಧಾಕರ್, ಸುರೇಶ್ ಕುಮಾರ್​ ಭೇಟಿ ವೇಳೆ ಜನ ಆಕ್ರೋಶ| ಚಾಮರಾಜನಗರ ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟನೆ

Published On - 1:58 pm, Tue, 4 May 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್