ಲೋಕಸಭಾ ಚುನಾವಣೆಯಲ್ಲಿ ಎಲ್ಲ 543 ಕ್ಷೇತ್ರಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಅಭ್ಯರ್ಥಿ: ಡಾ ಕೆ ಸುಧಾಕರ್

ತಾನು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಬಯಕೆ ಎಲ್ಲೂ ವ್ಯಕ್ರಪಡಿಸಿಲ್ಲ; ಆದರೆ ತಾವೇ ಸ್ಪರ್ಧಿಸಬೇಕೆಂದು ಒಂದೇ ಸಮನೆ ಆಗ್ರಹಿಸುತ್ತಿರುವ ಅಭಿಮಾನಿ ಮತ್ತು ಬೆಂಬಲಿಗರನ್ನು ಸಮಾಧಾನಪಡಿಸಲು ಸ್ಪರ್ಧಿಸುತ್ತೇನೆ ಅಂತ ಹೇಳಬೇಕಾಗುತ್ತದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಹೊಂದಾಣಿಕೆಯಾಗಿದೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಣಯಕ್ಕೆ ತಾನು ಬದ್ಧನಾಗಿರುತ್ತೇನೆ, ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ಎಲ್ಲ 543 ಕ್ಷೇತ್ರಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಅಭ್ಯರ್ಥಿ: ಡಾ ಕೆ ಸುಧಾಕರ್
|

Updated on: Feb 05, 2024 | 5:10 PM

ಚಿಕ್ಕಬಳ್ಳಾಪುರ: ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಡಾ ಕೆ ಸುಧಾಕರ್ (Dr K Sudhakar) ಲೋಕಸಭಾ ಚುನಾವಣೆಯಲ್ಲಿ (Lok Sabha polls) ಚಿಕ್ಕಬಳ್ಳಾಪುರದಿಂದ ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೀರಾ ಅಂತ ಕೇಳಿದಾಗೆಲ್ಲ ಬಹಳ ಎಚ್ಚರಿಕೆಯಿಂದ ಮತ್ತು ಡಿಪ್ಲೊಮ್ಯಾಟಿಕ್ ಆಗಿ ಮಾತಾಡುತ್ತಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳು ಅದೇ ಪ್ರಶ್ನೆ ಪುನರಾವರ್ತಿಸಿದಾಗ ಅವರು ನೀಡಿದ ಪ್ರತಿಕ್ರಿಯೆ ಪಕ್ಷದ ವರಿಷ್ಠರನ್ನು ಮೆಚ್ಚಿಸುವ ಪ್ರಯತ್ನದಂತಿತ್ತು. ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಗಳು ನೆಪಕ್ಕೆ ಮಾತ್ರ, ಲೋಕ ಸಭೆಯ ಎಲ್ಲ 543 ಕ್ಷೇತ್ರಗಳಲ್ಲೂ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಕಾರ್ಯನಿರ್ವಹಿಸಲಿರುವ ನರೇಂದ್ರ ಮೋದಿಯವರೇ (PM Narendra Modi) ಅಭ್ಯರ್ಥಿ ಎಂದು ಸುಧಾಕರ್ ಹೇಳಿದರು. ತಾನು ಚಿಕ್ಕಬಳ್ಳಾಪುರದಿಂದ ಸ್ಪರ್ಧಿಸುವ ಬಯಕೆ ಎಲ್ಲೂ ವ್ಯಕ್ರಪಡಿಸಿಲ್ಲ; ಆದರೆ ತಾವೇ ಸ್ಪರ್ಧಿಸಬೇಕೆಂದು ಒಂದೇ ಸಮನೆ ಆಗ್ರಹಿಸುತ್ತಿರುವ ಅಭಿಮಾನಿ ಮತ್ತು ಬೆಂಬಲಿಗರನ್ನು ಸಮಾಧಾನಪಡಿಸಲು ಸ್ಪರ್ಧಿಸುತ್ತೇನೆ ಅಂತ ಹೇಳಬೇಕಾಗುತ್ತದೆ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ಹೊಂದಾಣಿಕೆಯಾಗಿದೆ. ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಣಯಕ್ಕೆ ತಾನು ಬದ್ಧನಾಗಿರುತ್ತೇನೆ, ಅವಕಾಶ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us