ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ
ಕರ್ನಾಟಕ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ.ಎ. ಸಲೀಂ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕ ಮಾಡಿದೆ. ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದಾರೆ. ಡಾ. ಎಂ. ಎ ಸಲೀಂ ಅವರು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಲಿದ್ದಾರೆ.

ಬೆಂಗಳೂರು, ಮೇ 21: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಕನ್ನಡಿಗ ಡಾ. ಎಂ ಎ ಸಲೀಂ (MA Salim) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ ಎ ಸಲೀಂ ಅವರು ಬುಧವಾರವೇ (ಮೇ.21) ಅಧಿಕಾರಿ ವಹಿಸಿಕೊಂಡಿದ್ದಾರೆ. ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್ ಮೋಹನ್ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಐಪಿಎಸ್ ಅಧಿಕಾರಿ, ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿರುವ ಡಾ. ಅಲೋಕ ಮೋಹನ್ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಿದ್ದಾರೆ.
ಡಾ. ಅಲೋಕ್ ಮೋಹನ್ ಅವರಿಗೆ ಗೌರವ ಪಥಸಂಚಲನ ಮೂಲಕ ಬೀಳ್ಕೊಡಲಾಗುತ್ತದೆ. ಅಲೋಕ್ ಮೋಹನ್ ಅವರ ಅವಧಿ ಏಪ್ರಿಲ್ಗೆ ಮುಕ್ತಾಯವಾಗಿದ್ದರೂ ಡಿಜಿಪಿಯಾಗಿ ಎರಡು ವರ್ಷದ ಅವಧಿ ಮುಗಿಸುವ ಉದ್ದೇಶದಿಂದ ಮೂರು ವಾರಗಳ ಕಾಲ ಅವರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿತ್ತು.
ಡಾ. ಎಂ. ಎ ಸಲೀಂ ಅವರು 1966ರ ಜೂನ್ 25 ರಂದು ಬೆಂಗಳೂರಿನ ಚಿಕ್ಕಬಾಣವರದಲ್ಲಿ ಜನಿಸಿದರು. 1998ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಟ್ರಾಫಿಕ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ.
ಇದನ್ನೂ ಓದಿ: ಪಹಲ್ಗಾಮ್ ದಾಳಿ ಬಗ್ಗೆ ಎನ್ಐಎ ತನಿಖೆ ಚುರುಕು: ಭರತ್ ಭೂಷಣ್ ಪತ್ನಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:46 pm, Wed, 21 May 25







