AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರ ಲೋಕಸಭಾ ಚುನಾವಣೆ ಧರ್ಮ ಯುದ್ಧ ಇದ್ದಂತೆ; ಡಾ.ಮಂಜುನಾಥ್​

ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು(ಮಾ.13) ಬಿಡುಗಡೆಯಾಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ​ ಡಾ. ಸಿ.ಎನ್​ ಮಂಜುನಾಥ್ (C. N. Manjunath) ಅವರಿಗೆ ಟಿಕೆಟ್​ ಘೋಷಣೆ ಮಾಡಿದೆ. ಈ ಹಿನ್ನಲೆ ಇಂದು(ಮಾ.16) ದೆಹಲಿಯಲ್ಲಿ ಅಮಿತ್​ ಶಾ ಅವರನ್ನು ಭೇಟಿ ಮಾಡಿದ್ದಾರೆ.

2024ರ ಲೋಕಸಭಾ ಚುನಾವಣೆ ಧರ್ಮ ಯುದ್ಧ ಇದ್ದಂತೆ; ಡಾ.ಮಂಜುನಾಥ್​
ಡಾ.ಮಂಜುನಾಥ್​
ಹರೀಶ್ ಜಿ.ಆರ್​.
| Edited By: |

Updated on: Mar 16, 2024 | 8:31 PM

Share

ನವದೆಹಲಿ, ಮಾ.16: ನಾನು ರಾಜಕೀಯಕ್ಕೆ ಬಂದಿರುವುದು ರಾಜಕೀಯ ಮಾಡುವುದಕ್ಕೆ ಅಲ್ಲ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ(BJP) ಅಭ್ಯರ್ಥಿ ಡಾ.ಮಂಜುನಾಥ್(Dr.C.N Manjunath) ಹೇಳಿದರು. ದೆಹಲಿಯಲ್ಲಿ ಕೇಂದ್ರ ಸಚಿವ ಅಮಿತ್​ ಶಾರನ್ನು ಭೇಟಿಯಾಗಿ ಮಾತನಾಡಿದ ಅವರು,  ‘ ಇದೊಂದು ಸೌಹಾರ್ದಯುತ ಭೇಟಿಯಾಗಿದೆ. ಇದುವರೆಗೂ ನಾನು ಅಮಿತ್​ ಶಾರನ್ನು ನೋಡಿರಲಿಲ್ಲ. ಇಂದು(ಮಾ.16) ಭೇಟಿಯಾಗಿ ಲೋಕಸಭಾ ಚುನಾವಣೆಗೆ ಅವರ ಸಹಕಾರ ಕೇಳಿದ್ದೇನೆ ಎಂದರು.

ಮಾ.18 ರಂದು ಅಧಿಕೃತವಾಗಿ BJP ಸೇರುತಿದ್ದೇನೆ

ಸೋಮವಾರ(ಮಾ.18)ದಂದು ಬೆಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರುತಿದ್ದೇನೆ. ವೈಯಕ್ತಿಕವಾಗಿ ಯಾರನ್ನೂ ಟೀಕಿಸಲ್ಲ, ಇದೊಂದು ಧರ್ಮಯುದ್ಧ ಇದ್ದಂತೆ. ಜಿಡಿಎಸ್​​ ಬಿಜೆಪಿ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಹೋದಲೆಲ್ಲಾ ಪಾಸಿಟಿವ್​ ಪ್ರತಿಕ್ರಿಯೆ​ ಬರುತ್ತಿದೆ ಎಂದು ದೆಹಲಿಯಲ್ಲಿ ಡಾ. ಮಂಜುನಾಥ್​ ಹೇಳಿದರು.

ಇದನ್ನೂ ಓದಿ:ನನ್ನ ಮೊದಲ ಮತ ದೇಶಕ್ಕಾಗಿ: ಲೋಕಸಭಾ ಚುನಾವಣೆ ಹಿನ್ನೆಲೆ ಅಭಿಯಾನ ಆರಂಭಿಸಿದ ಚುನಾವಣಾ ಆಯೋಗ

ಇನ್ನು ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಮಾ.13 ರಂದು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿ​ ಡಾ. ಸಿ.ಎನ್​ ಮಂಜುನಾಥ್ ಅವರಿಗೆ ಟಿಕೆಟ್​ ಘೋಷಣೆ ಮಾಡಿದೆ. ಆ ಬಳಿಕ ಮಾತನಾಡಿದ್ದ ಅವರು, ‘ಅಧಿಕೃತವಾಗಿ ಬಿಜೆಪಿ ಸೇರುತ್ತೇನೆ. ಯಡಿಯೂರಪ್ಪನವರ ಜೊತೆಗೆ ಚರ್ಚೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ಅಂದರೇನೇ ರಾಜಕೀಯ. ಆದರೆ, ನಾನು ರಾಜಕೀಯ ಮಾಡಲ್ಲ ಎಂದರು. ಚುನಾವಣೆಗೆ ನಿಂತ ಮೇಲೆ ಎಲ್ಲವೂ ಬಂದೇ ಬರುತ್ತದೆ. ಪ್ರಧಾನಿ ಮೋದಿಯವರ ಜನಪ್ರಿಯತೆ ಹಾಗೂ ಬಿಎಸ್​ ಯಡಿಯೂರಪ್ಪ ಅವರ ನಾಯಕತ್ವ, ಹೆಚ್​​ ಡಿ ದೇವೇಗೌಡ ಮತ್ತು HD ಕುಮಾರಸ್ವಾಮಿ ಅವರ ಸಲಹೆಯಂತೆ ಕೆಲಸ ಮಾಡುತ್ತೇನೆ. ಎಲ್ಲ ರೀತಿಯಲ್ಲಿ ಚುನಾವಣೆ ಎದುರಿಸಲು ನಾನು ಸಿದ್ಧನಾಗಿದ್ದೇನೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಇಂದು ದೆಹಲಿಯಲ್ಲಿ ಅಮಿತ್​​ ಶಾ ಅವರನ್ನು ಭೇಟಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್