ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಬಿಜೆಪಿ ಮಾಜಿ ಎಂ​ಎಲ್​ಸಿ ಅಶ್ವಥ್ ನಾರಾಯಣ್ 12 ಕೋಟಿ ಸಾಲ ಕಟ್ಟಿಲ್ಲ -ಠೇವಣಿದಾರರ ಅಳಲು

ಈ ಹಗರಣದಲ್ಲಿ ಬಿಜೆಪಿಯ ಮಾಜಿ ಎಮ್ಎಲ್ಸಿ ಆಶ್ವಥ್ ನಾರಾಯಣ್ ಡೀಫಾಲ್ಟರ್ 12 ಕೋಟಿ ರೂಪಾಯಿ ಹಣ ಕಟ್ಟಿಲ್ಲ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು. ಸಿಎಂ ಯಡಿಯೂರಪ್ಪ ಈ ಬಗ್ಗೆ ಗಮನ ನೀಡಬೇಕೆಂದು ಡಾ ಶಂಕರ ಗುಹಾ ಮನವಿ ಮಾಡಿದ್ದಾರೆ.

ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಬಿಜೆಪಿ ಮಾಜಿ ಎಂ​ಎಲ್​ಸಿ ಅಶ್ವಥ್ ನಾರಾಯಣ್ 12 ಕೋಟಿ ಸಾಲ ಕಟ್ಟಿಲ್ಲ -ಠೇವಣಿದಾರರ ಅಳಲು
ಗುರು ರಾಘವೇಂದ್ರ ಬ್ಯಾಂಕ್
Follow us
TV9 Web
| Updated By: ಆಯೇಷಾ ಬಾನು

Updated on:Jul 12, 2021 | 2:20 PM

ಬೆಂಗಳೂರು: ನಗರದ ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಡಾ ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು ಪತ್ರಿಕಾಗೋಷ್ಟಿ ನಡೆಸಿದ್ರು. ಈ ಬ್ಯಾಂಕ್ ಹಗರಣ ಬೆಳಕಿಗೆ ಬಂದು ಎರಡು ವರ್ಷಗಳಾಗ್ತಾ ಬಂತು. ಇದನ್ನ ಸಿಐಡಿ ತನಿಖೆಗೆ ವಹಿಸಲಾಗಿದೆ. ಆದರೆ ಏನು ತನಿಖೆ ಆಗ್ತಾ ಇದೆ ಅನ್ನೊದು ಗೊತ್ತಿಲ್ಲ. ವಾಸ್ತವದಲ್ಲಿ ಸಿಐಡಿಗೆ ಇಷ್ಟು ದೊಡ್ಡ ಹಗರಣ ತನಿಖೆ ಮಾಡಲು ಸಾಮರ್ಥ್ಯ ಇಲ್ಲ. ಈಗಾಗಲೇ ಸುಮಾರು ಠೇವಣಿದಾರರು ಮೃತರಾಗಿದ್ದಾರೆ ಎಂದು ಹೇಳಿದ್ರು.

ಈ ಹಗರಣದಲ್ಲಿ ಬಿಜೆಪಿಯ ಮಾಜಿ ಎಮ್ಎಲ್​ಸಿ ಅಶ್ವಥ್ ನಾರಾಯಣ್ ಡೀಫಾಲ್ಟರ್ 12 ಕೋಟಿ ರೂಪಾಯಿ ಹಣ ಕಟ್ಟಿಲ್ಲ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು. ಸಿಎಂ ಯಡಿಯೂರಪ್ಪ ಈ ಬಗ್ಗೆ ಗಮನ ನೀಡಬೇಕೆಂದು ಡಾ ಶಂಕರ ಗುಹಾ ಮನವಿ ಮಾಡಿದ್ದಾರೆ. ತುರ್ತು ಕ್ರಮ ಜರುಗಿಸದೇ ಇದ್ರೆ ಆರ್ಬಿಐ ಚಲೋ ನಡೆಸಬೇಕಾಗುತ್ತೆ. ರಾಜಕೀಯ ಹಿತಾಸಕ್ತಿ ಬಿಟ್ಟು ಗ್ರಾಹಕರ ಪರವಾಗಿ ಕೆಲಸ ಮಾಡಬೇಕಿದೆ. ಕೇಂದ್ರ ಹಣಕಾಸು ಸಚಿವೆ ಕೂಡ ಬೇಜವಾಬ್ದಾರಿಯಾಗಿ ಪ್ರತಿಕ್ರಿಯಿಸಿದ್ದಾರೆ. ಆರ್​ಬಿಐ ಕೂಡ ಈ ವಂಚನೆಗಳನ್ನ ನೋಡಿಕೊಂಡು ಯಾಕೆ ಸುಮ್ಮನಿದೆ. ಆರ್​ಬಿಐ ತುರ್ತಾಗಿ ಕ್ರಮಕೈಗೊಳ್ಳಬೇಕಿದೆ. 25 ಸಾವಿರ ಜನ ಹಣವನ್ನ ಕಳೆದುಕೊಂಡಿದ್ದಾರೆ.

ಸಿಐಡಿ ಸ್ಟ್ರಾಂಗ್ ಕೇಸ್ ಮಾಡಿಲ್ಲ. 2130 ಕೋಟಿ ರೂಪಾಯಿ ಗ್ರಾಹಕರಿಗೆ ವಾಪಸ್ ಬರಬೇಕಿದೆ. ಆದರೆ ಆರ್ಬಿಐ ಮಾತ್ರ ಸ್ಪಷ್ಟ ಕ್ರಮ ಕೈಗೊಳ್ಳುತ್ತಿಲ್ಲ. ಈಗಾಗಲೇ ಹಣ ಕಳೆದುಕೊಂಡ ಹಲವರು ಸಾವನ್ನಪ್ಪಿದ್ದಾರೆ. ಆಡಿಟ್ ರಿಪೋರ್ಟ್ ನೆಪದಲ್ಲಿ ಸಮಯ ತಳ್ಳುತ್ತಿದ್ದಾರೆ. ವಿಳಂಬದ ಹಿಂದೆ ರಾಜಕೀಯ ಹಿತಾಸಕ್ತಿ ಕಾಣುತ್ತಿದೆ. ಸ್ಥಳೀಯ ರಾಜಕಾರಣಿಗಳ ವಿರುದ್ದ ಗಂಭೀರ ಆರೋಪ ಕೇಳಿ ಬರುತ್ತಿದೆ ಎಂದು ಡಾ ಶಂಕರ ಗುಹಾ ದ್ವಾರಕನಾಥ್ ಈ ಪ್ರಕರಣದ ಬಗ್ಗೆ ಗಮನ ಹರಿಸಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಖಾತೆಯಲ್ಲಿದ್ದ ಹಣದ ಬಗ್ಗೆ ಆತಂಕ: ಗುರು ರಾಘವೇಂದ್ರ ಬ್ಯಾಂಕ್ ವಿರುದ್ಧ ಠೇವಣಿದಾರರ ಪ್ರತಿಭಟನೆ

Published On - 2:07 pm, Mon, 12 July 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ