ಕಾರ್ಗಿಲ್​​ ಯುದ್ಧದಲ್ಲಿ ಹುತಾತ್ಮ ಡೆಪ್ಯುಟಿ ಕಮಾಂಡೆಂಟ್ ಪತ್ನಿ ಕರ್ನಾಟಕದ ರಾಜ್ಯಪಾಲೆ: ಸುಧಾ ಯಾದವ್ ವ್ಯಕ್ತಿಚಿತ್ರ

Dr. Sudha Yadav Profile: ಬರೋಬ್ಬರಿ ಐದು ವರ್ಷಗಳ ಬಳಿಕ ಕರ್ನಾಟಕದ ರಾಜ್ಯಪಾಲರನ್ನು ಬದಲಾವಣೆ ಮಾಡಲಾಗಿದೆ. 2021ರಲ್ಲಿ ಕರ್ನಾಟಕದ ರಾಜ್ಯಪಾಲರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಅವರ ಸ್ಥಾನಕ್ಕೆ ಡಾ. ಸುಧಾ ಯಾದವ್ ಅವರನ್ನು ನೇಮಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಇನ್ನು ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲ ಎನಿಸಿಕೊಂಡ ಸುಧಾ ಯಾದವ್ ಯಾರು? ಎಲ್ಲಿಯವರು? ಎನ್ನುವ ಅವರ ವ್ಯಕ್ತಿಚಿತ್ರ ಇಲ್ಲಿದೆ.

ಕಾರ್ಗಿಲ್​​ ಯುದ್ಧದಲ್ಲಿ ಹುತಾತ್ಮ ಡೆಪ್ಯುಟಿ ಕಮಾಂಡೆಂಟ್ ಪತ್ನಿ ಕರ್ನಾಟಕದ ರಾಜ್ಯಪಾಲೆ: ಸುಧಾ ಯಾದವ್ ವ್ಯಕ್ತಿಚಿತ್ರ
ಸುಧಾ ಯಾದವ್
Image Credit source: tv9 kannada
Edited By:

Updated on: Oct 12, 2026 | 11:02 PM

ಮುಖ್ಯಾಂಶಗಳು

  • ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ
  • 1994ರಿಂದ 2004ರವರೆಗೆ ಸಂಸದರಾಗಿ ಸೇವೆ
  • ಹುತಾತ್ಮ ಡೆಪ್ಯುಟಿ ಕಮಾಂಡೆಂಟ್ ಪತ್ನಿ

ಬೆಂಗಳೂರು, ಅಕ್ಟೋಬರ್​​ 12: ಬಿಜೆಪಿಯ ಹಿರಿಯ ಮಹಿಳಾ ನಾಯಕಿ, ಮಾಜಿ ಸಂಸದೆ ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಿ ರಾಷ್ಟ್ರಪತಿ ಇಂದು (ಅಕ್ಟೋಬರ್ 12) ಆದೇಶ ಹೊರಡಿಸಿದ್ದಾರೆ. ಆ ಮೂಲಕ ಸುಧಾ ಯಾದವ್​ ಅವರು ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲರಾಗಿದ್ದಾರೆ. ಹಾಗಾದರೆ ಸುಧಾ ಯಾದವ್​​ ಯಾರು, ಅವರ ರಾಜಕೀಯ ಹಿನ್ನೆಲೆ ಏನು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಸುಧಾ ಯಾದವ್ ಯಾರು?

ಹರಿಯಾಣದ ರೇವಾರಿ ಜಿಲ್ಲೆಯ ಮೊಟ್ಲಾ ಕಲನ್ ಗ್ರಾಮದಲ್ಲಿ 1965ರ ಅಕ್ಟೋಬರ್​​ 16ರಂದು ಸುಧಾ ಯಾದವ್​​​​ ಜನಿಸುತ್ತಾರೆ. ಅವರು ಐಐಟಿ ರೂರ್ಕಿಯಿಂದ ಎಂಎಸ್ಸಿ ಪದವಿ ಪಡೆದಿದ್ದು, ರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಕೂಡ ಪಡೆದಿದ್ದಾರೆ.

ಇದನ್ನೂ ಓದಿ: 6 ರಾಜ್ಯಗಳಿಗೆ ಹೊಸ ರಾಜ್ಯಪಾಲರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ನೇಮಕ

ಸುಧಾ ಯಾದವ್ ಅವರ ಪತಿ ಸುಖಬೀರ್ ಸಿಂಗ್ ಯಾದವ್ ಅವರು ಬಿಎಸ್‌ಎಫ್​ಯಲ್ಲಿ ಡೆಪ್ಯುಟಿ ಕಮಾಂಡೆಂಟ್ ಆಗಿ ಸೇವೆ ಸಲ್ಲಿಸಿದ್ದರು. 1999ರ ಕಾರ್ಗಿಲ್ ಯುದ್ಧದಲ್ಲಿ ಅವರು ಹುತಾತ್ಮರಾದರು. ಪತಿಯ ನಿಧನದ ಬಳಿಕ ಸುಧಾ ಯಾದವ್ ಸಾರ್ವಜನಿಕ ಜೀವನದಲ್ಲಿ ಗುರುತಿಸಿಕೊಂಡಿದ್ದು, ಆ ಬಳಿಕ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಸ್ಥಾನವನ್ನು ಗಳಿಸಿದರು.

ಸುಧಾ ಯಾದವ್​ ಅವರ ರಾಜಕೀಯ ಹಿನ್ನೆಲೆ

ಸುಧಾ ಯಾದವ್ ಅವರು ಭಾರತೀಯ ಜನತಾ ಪಕ್ಷದ ಹಿರಿಯ ಮಹಿಳಾ ನಾಯಕಿಯಾಗಿದ್ದು, ಮಾಜಿ ಲೋಕಸಭಾ ಸಂಸದರಾಗಿದ್ದಾರೆ. ಅವರು 1994ರಿಂದ 2004ರವರೆಗೆ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ. ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಇವರು, ತಮ್ಮ ಮೊದಲ ಚುನಾವಣೆಯಲ್ಲೇ ಗಮನಾರ್ಹ ಗೆಲುವು ಸಾಧಿಸಿದ್ದರು. 1999ರ ಚುನಾವಣೆಯಲ್ಲಿ ಹರಿಯಾಣದ ಕಾಂಗ್ರೆಸ್ ನಾಯಕ ರಾವ್ ಇಂದ್ರಜಿತ್ ಸಿಂಗ್ ಅವರನ್ನು ಸೋಲಿಸಿದ್ದರು.

ಸುಷ್ಮಾ ಬಳಿಕ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದ ಏಕೈಕ ಮಹಿಳಾ ನಾಯಕಿ

ಇನ್ನು ಸುಧಾ ಯಾದವ್ ಅವರು ಪ್ರಸ್ತುತ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿದ್ದಾರೆ. ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರ ನಿಧನದ ಬಳಿಕ ಪಕ್ಷದ ಸಂಸದೀಯ ಮಂಡಳಿಯಲ್ಲಿ ಸ್ಥಾನ ಪಡೆದ ಏಕೈಕ ಮಹಿಳಾ ನಾಯಕಿ ಎಂಬ ಹೆಗ್ಗಳಿಕೆ ಇವರಿಗಿದೆ. 2015ರಲ್ಲಿ ಅವರನ್ನು ಬಿಜೆಪಿ ಒಬಿಸಿ ಮೋರ್ಚಾದ ಪ್ರಭಾರಿಯಾಗಿ ನೇಮಕ ಮಾಡಲಾಗಿತ್ತು. 2022ರ ಆಗಸ್ಟ್‌ನಲ್ಲಿ ಬಿಜೆಪಿ ಸಂಸದೀಯ ಮಂಡಳಿ ಹಾಗೂ ಕೇಂದ್ರ ಚುನಾವಣಾ ಸಮಿತಿಗೂ ಅವರನ್ನು ನೇಮಕ ಮಾಡಲಾಗಿತ್ತು.

Sudha Yadav Appointed As New Governor of Karnataka | ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ನೇಮಕ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:45 pm, Mon, 12 October 26

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us