ಬೆಂಗಳೂರು: ನಾಳೆಯಿಂದ SSLC ಪರೀಕ್ಷೆ ಆರಂಭವಾಗುತ್ತಿರೋ ಹಿನ್ನೆಲೆಯಲ್ಲಿ ಪೂರ್ವಸಿದ್ಧತಾ ತಯಾರಿಯ ಬಗ್ಗೆ ಇಂದು ಅಧಿಕಾರಿಗಳ ಜೊತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ವೀಡಿಯೋ ಸಂವಾದ ನಡೆಸಿದರು. ಒಬ್ಬೇ ಒಬ್ಬ ವಿದ್ಯಾಥಿ೯ಗೂ ಸೋಂಕು ತಗಲದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸಚಿವರು ಖಡಕ್ ಸೂಚನೆ ನೀಡಿದ್ದಾರೆ.
‘ಸರ್ಕಾರದ ನಿರ್ಧಾರವನ್ನು ಇಡೀ ದೇಶ ಎದುರು ನೋಡ್ತಿದೆ’
ಪರೀಕ್ಷೆ ನಡೆಸುವ ರಾಜ್ಯ ಸಕಾ೯ರದ ನಿಧಾ೯ರವನ್ನು ಇಡೀ ದೇಶವೇ ಎದುರು ನೋಡುತ್ತಿದೆ. ಹೀಗಾಗಿ ಇದನ್ನು ಒಂದು ಸವಾಲಾಗಿ ಸ್ವೀಕರಿಸಿ ಜಾಗರೂಕತೆಯಿಂದ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಸರ್ಕಾರ ನೀಡಿರುವ ಸೂಚನೆಗಳನ್ನು ಚಾಚೂತಪ್ಪದೆ ಜಾರಿಗೊಳಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಮನೆಯಿಂದ ಬರುವ ಪ್ರತಿಯೊಬ್ಬ ವಿದ್ಯಾಥಿ೯ ಪರೀಕ್ಷೆ ಬರೆದು ಮನೆಗೆ ಹಿಂದಿರುಗುವ ತನಕ ಅವರನ್ನು ಕ್ಷೇಮವಾಗಿ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಎಲ್ಲ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿ ಸಮನ್ವಯದಿಂದ ಕೆಲಸ ಮಾಡಬೇಕು.
ಸಾವ೯ಜನಿಕ ಸಾರಿಗೆ ಲಭ್ಯವಿಲ್ಲದ ಕಡೆ ಮಕ್ಕಳಿಗೆ ವಾಹನ ವ್ಯವಸ್ಥೆ ಕಲ್ಪಿಸಿಕೊಡಬೇಕು. ಪರೀಕ್ಷಾ ಕೇಂದ್ರಗಳ ಕೊಠಡಿ , ಶೌಚಾಲಯ ಇತ್ಯಾದಿ ಸ್ಥಳಗಳನ್ನು ಸ್ಯಾನಿಟೈಸ್ ಮಾಡಿಸಬೇಕು ಎಂದು ಸಹ ಹೇಳಿದ್ದಾರೆ. ಪ್ರತಿ ವಿದ್ಯಾಥಿ೯ಗೆ ಮಾಸ್ಕ್ ನೀಡಿವುದರ ಜೊತೆಗೆ ಕೊಠಡಿಯಲ್ಲಿ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳು ಳಗ್ಗೆ ಹಸಿವಿನಿಂದ ಬಳಲದಂತೆ ಪ್ರತಿ ಮಗುವಿಗೂ ಚಿಕ್ಕ ಬಿಸ್ಕೆಟ್ ಪ್ಯಾಕೆಟ್ ನೀಡಬೇಕು.
ಒಂದು ವೇಳೆ ಯಾರಿಗಾದರೂ ಸೋಂಕಿನ ಸೂಚನೆ ಕಂಡು ಬಂದಲ್ಲಿ..
ಇದಕ್ಕಾಗಿ ಜಿಲ್ಲಾಡಳಿತದಿಂದ ಹಣ ಭರಿಸಿ ಎಂದು ಆದೇಶಿಸಿದ್ದಾರೆ. ಪ್ರತಿಯೊಬ್ಬ ವಿದ್ಯಾಥಿ೯ಯನ್ನ ಥಮ೯ಲ್ ಸ್ಕ್ಯಾನಿಂಗ್ ಮೂಲಕ ಸ್ಕ್ರೀನ್ ಮಾಡಿ ಒಳಬಿಡಬೇಕು. ಒಂದು ವೇಳೆ ಜ್ವರ ಸಹಿತ ಇತರೆ ಸೋಂಕು ಕಂಡುಬಂದಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲು ಕ್ರಮ ಕೈಗೊಳ್ಳಿ. ಪೋಷಕರಿಗೆ ಆತಂಕಗಳಿಲ್ಲದಂತೆ ಜಿಲ್ಲಾಡಳಿತಗಳು ಮಾಧ್ಯಮಗಳ ಮೂಲಕ ಸಕಾ೯ರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.
ಜೊತೆಗೆ ರಾಜ್ಯದ ಹಲವಾರು ಕಡೆ ಕ್ವಾರಂಟೈನ್ ಪ್ರದೇಶಗಳಿವೆ. ಅಲ್ಲಿ ಪರೀಕ್ಷೆ ಬರೆಯುವ ಮಕ್ಕಳ ಬಗ್ಗೆ ಗರಿಷ್ಠ ಪ್ರಮಾಣದ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಆ ಮಕ್ಕಳಲ್ಲಿ ಯಾರಿಗಾದರೂ ಸೋಂಕಿನ ಸೂಚನೆ ಕಂಡು ಬಂದಲ್ಲಿ ತಕ್ಷಣವೇ ಪರೀಕ್ಷಾ ಕೇಂದ್ರದ ಬಳಿಯಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಅಥವಾ ಹತ್ತಿರದ ಕೋವಿಡ್ ಕೇರ್ ಸೆಂಟರ್‌ಗಳಿಗೆ ಕರೆದೊಯ್ದು ಪರೀಕ್ಷೆ ನಡೆಸಬೇಕು ಎಂದು ಹೇಳುವ ಮೂಲಕ SSLC ಪರೀಕ್ಷೆ ಸುಸೂತ್ರವಾಗಿ ನಡೆಸುವುದಕ್ಕೆ ಸಜ್ಜಾಗಲು ಡಾ. ಸುಧಾಕರ್ ತಮ್ಮ ಅಧಿಕಾರಿವರ್ಗಕ್ಕೆ ತಾಕೀತು ಮಾಡಿದ್ದಾರೆ.
Published On - 7:24 pm, Wed, 24 June 20