ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯ ನಿವೃತ್ತಿ: ಪುತ್ರನ ವಿಡಿಯೋ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ
ನಾನು ನೀಡಿದ ಲಿಸ್ಟ್ನದ್ದು ಮಾತ್ರ ಮಾಡಿ ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ದೂರವಾಣಿ ಕರೆ ಮೂಲಕ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಸೂಚಿಸಿರುವ ವಿಡಿಯೋ ವೈರಲ್ ಆಗಿದ್ದು, ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಟೀಕೆ ನಡೆಸಲು ಆರಂಭವಿಸಿವೆ. ಈ ನಡುವೆ ವಿಡಿಯೋ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು, ನ.16: ನಾನು ನೀಡಿದ ಲಿಸ್ಟ್ನದ್ದು ಮಾತ್ರ ಮಾಡಿ ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಮಾಜಿ ಶಾಸಕ ಡಾ. ಯತೀಂದ್ರ (Dr.Yathindra) ಅವರು ಸೂಚಿಸಿರುವ ವಿಡಿಯೋ ವೈರಲ್ ಆಗಿದೆ. ಪುತ್ರನ ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ (Siddaramaiah), ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ಸಿಎಸ್‌ಆರ್ ಫಂಡ್ ವಿಚಾರವಾಗಿ ಯತೀಂದ್ರ ಮಾತಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ರಾಜಕೀಯ ಕಾರಣಕ್ಕಾಗಿ ವಿಪಕ್ಷಗಳು ಆರೋಪ ಮಾಡುತ್ತಿವೆ ಎಂದು ದೂರಿದರು.
ಇದನ್ನೂ ಓದಿ: ಕಾಂಗ್ರೆಸ್ ಸೆರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ: ವಿಡಿಯೋದೊಂದಿಗೆ ಕುಮಾರಸ್ವಾಮಿ ವಾಗ್ದಾಳಿ
ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ. ಐದು ಹೆಸರು ಅಂದರೆ ವರ್ಗವಣೆಯಾ? ಅದು ಸಿಎಸ್‌ಆರ್ ಲಿಸ್ಟ್. ಶಾಲೆ ಕಟ್ಟಡಗಳನ್ನು ಸಿಎಸ್‌ಆರ್ ಫಂಡ್ನಿಂದ ರಿಪೇರಿ ಮಾಡಿಸಲಾಗುತ್ತಿದೆ. ಅದರ ಬಗ್ಗೆ ಯತೀಂದ್ರ ಹೇಳಿದ್ದು. ಕುಮಾರಸ್ವಾಮಿ ರಾಜಕೀಯಕ್ಕೆ ಆರೋಪ ಮಾಡುತ್ತಾರೆ ಎಂದರು.
ಬಿಜೆಪಿ ಜೆಡಿಎಸ್ ಅವರಿಗೆ ಕೆಲಸ ಇಲ್ಲ: ಡಿಕೆ ಶಿವಕುಮಾರ್
ವೈರಲ್ ವಿಡಿಯೋದ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ಬಿಜೆಪಿ ಜೆಡಿಎಸ್ ಅವರಿಗೆ ಕೆಲಸ ಇಲ್ಲ. ಯತೀಂದ್ರ ಆಶ್ರಯ ಸಮಿತಿ ಅಧ್ಯಕ್ಷರಾಗಿದ್ದಾರೆ. ಜನ ಸಂಪರ್ಕ ಸಭೆ ನಡೆಸಿದ್ದಾರೆ. ಸಿಎಸ್‌ಆರ್ ಫಂಡ್ ವಿಚಾರವಾಗಿ ಮಾತನಾಡಿದ್ದಾರೆ. ಸ್ಕೂಲ್ಗಳ ವಿಚಾರವಾಗಿ ಮಹದೇವ್ ಅವರ ಜೊತೆ ಮಾತನಾಡಿದ್ದಾರೆ ಎಂದರು.
ಇದನ್ನೂ ಓದಿ: ಯತೀಂದ್ರ ವಿರುದ್ಧ ಕಾನೂನು ಕ್ರಮ ಜರುಗಿಸಿ ಸಿಎಂ ಸಿದ್ದರಾಮಯ್ಯ ಒಂದು ನಿದರ್ಶನ ಮೆರೆಯಲಿ: ಡಾ ಸಿಎನ್ ಅಶ್ವಥ್ ನಾರಾಯಣ
ಯತೀಂದ್ರ ಅವರು ಎಲ್ಲಿ ಅಧಿಕಾರಿಗಳ ವರ್ಗಾವಣೆ ಬಗ್ಗೆ ಮಾತನಾಡಿದ್ದಾರೆ? ಅವರ ಬಗ್ಗೆ ಮಾತಾಡಿ ಯತೀಂದ್ರ ಅವರನ್ನ ದೊಡ್ಡವರನ್ನಾಗಿ ಮಾಡುತ್ತಿದ್ದಾರೆ, ಮಾಡಲಿ ಬಿಡಿ. ಬೇರೆ ಕೆಲಸ ಇಲ್ಲ ಇವರಿಗೆ ಎಂದು ಬಿಜೆಪಿ ಜೆಡಿಎಸ್ ವಿರುದ್ಧ ಆಕ್ರೋಶ ಹೊರ ಹಾಕಿದರು.
ಕುಮಾರಸ್ವಾಮಿ ಅವರು ಹತಾಶರಾಗಿದ್ದಾರೆ. ಕುಮಾರಸ್ವಾಮಿ ಅವರಿಗೆ ಅನುಭವ, ಅದಕ್ಕೆ ಹಾಗೆ ಟ್ವೀಟ್ ಮಾಡಿದ್ದಾರೆ. ಮಾಡಲಿ ಬಿಡಿ. ಯತೀಂದ್ರ ಎಲ್ಲಿ ವರ್ಗಾವಣೆ ಬಗ್ಗೆ ಮಾತಾಡಿದ್ದಾರೆ ಹೇಳಿ? ವಿಡಿಯೋ ನಾನು ನೋಡಿದ್ದೇನೆ. ಒಬ್ಬ ಮಾಜಿ ಶಾಸಕ ನಾಲ್ಕೈದು ಅಧಿಕಾರಿಗಳ ವರ್ಗಾವಣೆ ಕೇಳಿದರೆ ಏನ್ ತಪ್ಪು? ನನ್ನ ಕ್ಷೇತ್ರದಲ್ಲಿ ನನ್ನ ಸಹೋದರ ಕೆಲವು ಕೆಲಸ ಅಟೆಂಡ್ ಮಾಡುತ್ತಾರೆ. ಜನ ಮನೆ, ಹಸು ಕುರಿ ಬೇಕಾಂತಾರೆ. ಅದನ್ನು ಸುರೇಶ್ ಅಟೆಂಡ್ ಮಾಡುತ್ತಾರೆ. ನಾನು ನಂತರ ಸಹಿ ಹಾಕುತ್ತೇನೆ. ನಾನು ಬಗುರ್ ಹುಕುಂ ಸಮಿತಿ ಅಧ್ಯಕ್ಷ ಆಗಿದ್ದೇನೆ. ಎಲ್ಲಾ ನೋಡೋದಕ್ಕೆ ಆಗಲ್ಲ ಎಂದರು.
ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂಗೆ ದಾರಿ ತಪ್ಪಿಸುತ್ತಿದ್ದಾರೆ ಅನ್ನೋ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಮುಖ್ಯಮಂತ್ರಿ ಅವರಿಗೆ 40 ವರ್ಷಗಳ ರಾಜಕೀಯ ಅನುಭವ ಇದೆ. ಯಾರು ದಾರಿ ತಪ್ಪಿಸಲು ಆಗಲ್ಲ ಎಂದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ