Draupadi Murmu Karnataka Visit: ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಭೇಟಿ: ಬಿಗಿ ಬಂದೋಬಸ್ತ್​

ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅವರು ತಂಗಲಿರುವ ಶಾಂಗ್ರೀಲಾ ಹೋಟೆಲ್​ ಬಳಿ ಬಿಗಿ ಬಂದೋಬಸ್ತ್​ ಕಲ್ಪಿಸಲಾಗಿದೆ. ಬಿಜೆಪಿ ಶಾಸಕರು, ಸಂಸದರ ಜತೆ ಸಭೆ ಬಳಿಕ ಜಡಿಎಸ್ ವರಿಷ್ಠ ಎಚ್​ಡಿ ದೇವೇಗೌಡರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Draupadi Murmu Karnataka Visit: ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಭೇಟಿ: ಬಿಗಿ ಬಂದೋಬಸ್ತ್​
Draupadi Murmu
Follow us
TV9 Web
| Updated By: ನಯನಾ ರಾಜೀವ್

Updated on:Jul 10, 2022 | 4:11 PM

ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅವರು ತಂಗಲಿರುವ ಶಾಂಗ್ರೀಲಾ ಹೋಟೆಲ್​ ಬಳಿ ಬಿಗಿ ಬಂದೋಬಸ್ತ್​ ಕಲ್ಪಿಸಲಾಗಿದೆ. ಬಿಜೆಪಿ ಶಾಸಕರು, ಸಂಸದರ ಜತೆ ಸಭೆ ಬಳಿಕ ಜಡಿಎಸ್ ವರಿಷ್ಠ ಎಚ್​ಡಿ ದೇವೇಗೌಡರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಬೆಂಗಳೂರಿನ ಶಾಂಗ್ರೀಲಾ ಹೋಟೆಲ್​ಗೆ ಮುರ್ಮು ಆಗಮಿಸಿದ್ದಾರೆ, ಅವರಿಗೆ ಹೋಟೆಲ್​ ಬಳಿ ಆದಿವಾಸಿ ಕಲಾತಂಡಗಳು ಭರ್ಜರಿ ಸ್ವಾಗತ ಕೋರಿವೆ. ಬಿಜೆಪಿ ಸಂಸದರು, ಶಾಸಕರ ಜೊತೆ ಸಭೆ ನಡೆಸುವ ದ್ರೌಪದಿ ಸಭೆಯಲ್ಲಿ ಮತಯಾಚಿಸಲಿದ್ದಾರೆ.

ರಾಷ್ಟ್ರಪತಿ ಚುನಾವಣೆ ಸಂಬಂಧ ಚರ್ಚೆ ದ್ರೌಪದಿ ಚರ್ಚೆ ನಡೆಸಲಿದ್ದಾರೆ, ಸಂಜೆ 6.30ರ ವೇಳೆಗೆ ಎಚ್ ಡಿ ದೇವೇಗೌಡ ನಿವಾಸಕ್ಕೆ ದ್ರೌಪದಿ ಮುರ್ಮು ಭೇಟಿ ಸಾಧ್ಯತೆ ಇದೆ. ದ್ರೌಪದಿ ಮುರ್ಮು ಅವರನ್ನು ಬರಮಾಡಿಕೊಳ್ಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್​ಎಎಲ್​ ಏರ್​ಪೋರ್ಟ್​ಗೆ ತೆರಳಿದ್ದಾರೆ.

ಮುರ್ಮು ಅವರು ಒಡಿಶಾ ರಾಜ್ಯ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ರಾಯ್ರಂಗಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಡಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ದ್ರೌಪದಿ ಸಚಿವೆಯೂ ಆಗಿದ್ದರು. 2007ರಲ್ಲಿ ಅತ್ಯುತ್ತಮ ಶಾಶಕಿ ಪ್ರಶಸ್ತಿಯೂ ಅವರಿಗೆ ಲಭಿಸಿತ್ತು. 2009ರಿಂದ ಅವರು ಬಿಜೆಪಿಯ ರಾಜ್ಯ ಪರಿಶಿಷ್ಟ ಪಂಗಡ ಮೋರ್ಚಾದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು.

ಶಿಕ್ಷಣದ ಪೂರೈಸಿದ ಬಳಿಕ ಒಡಿಶಾ ಸರ್ಕಾರದ ನೀರಾವರಿ ಇಲಾಖೆಯಲ್ಲಿ ಕೆಲಸ, ಬಳಿಕ ಶಿಕ್ಷಕಿ ಹುದ್ದೆ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಈ ನಡುವೆ 1997ರಲ್ಲಿ ಅವರು ಒಡಿಶಾದ ರಾಯ್ರಂಗಪುರ ನಗರಾಡಳಿತ ಸಂಸ್ಥೆಯ ಸದಸ್ಯರಾಗಿ ಚುನಾಯಿತರಾದರು. ಅದೇ ವರ್ಷ ನಗರಾಡಳಿತ ಸಂಸ್ಥೆಯ ಉಪಾಧ್ಯಕ್ಷೆಯಾಗಿದ್ದರು.

ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯ ಮತದಾರರೂ ಆಗಿರುವ ಶಾಸಕರ ಬಳಿ ಮತ ಯಾಚಿಸಲಿದ್ದಾರೆ.

Published On - 4:00 pm, Sun, 10 July 22

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ