ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಕರ್ನಾಟಕಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಅವರು ತಂಗಲಿರುವ ಶಾಂಗ್ರೀಲಾ ಹೋಟೆಲ್ ಬಳಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಬಿಜೆಪಿ ಶಾಸಕರು, ಸಂಸದರ ಜತೆ ಸಭೆ ಬಳಿಕ ಜಡಿಎಸ್ ವರಿಷ್ಠ ಎಚ್ಡಿ ದೇವೇಗೌಡರನ್ನು ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಂಗಳೂರಿನ ಶಾಂಗ್ರೀಲಾ ಹೋಟೆಲ್ಗೆ ಮುರ್ಮು ಆಗಮಿಸಿದ್ದಾರೆ, ಅವರಿಗೆ ಹೋಟೆಲ್ ಬಳಿ ಆದಿವಾಸಿ ಕಲಾತಂಡಗಳು ಭರ್ಜರಿ ಸ್ವಾಗತ ಕೋರಿವೆ.
ಬಿಜೆಪಿ ಸಂಸದರು, ಶಾಸಕರ ಜೊತೆ ಸಭೆ ನಡೆಸುವ ದ್ರೌಪದಿ ಸಭೆಯಲ್ಲಿ ಮತಯಾಚಿಸಲಿದ್ದಾರೆ.
ರಾಷ್ಟ್ರಪತಿ ಚುನಾವಣೆ ಸಂಬಂಧ ಚರ್ಚೆ ದ್ರೌಪದಿ ಚರ್ಚೆ ನಡೆಸಲಿದ್ದಾರೆ, ಸಂಜೆ 6.30ರ ವೇಳೆಗೆ ಎಚ್ ಡಿ ದೇವೇಗೌಡ ನಿವಾಸಕ್ಕೆ ದ್ರೌಪದಿ ಮುರ್ಮು ಭೇಟಿ ಸಾಧ್ಯತೆ ಇದೆ. ದ್ರೌಪದಿ ಮುರ್ಮು ಅವರನ್ನು ಬರಮಾಡಿಕೊಳ್ಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಎಎಲ್ ಏರ್ಪೋರ್ಟ್ಗೆ ತೆರಳಿದ್ದಾರೆ.
ಮುರ್ಮು ಅವರು ಒಡಿಶಾ ರಾಜ್ಯ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾದ ಉಪಾಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು. ನಂತರ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ರಾಯ್ರಂಗಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಬಿಜೆಡಿ-ಬಿಜೆಪಿ ಮೈತ್ರಿ ಸರ್ಕಾರದಲ್ಲಿ ದ್ರೌಪದಿ ಸಚಿವೆಯೂ ಆಗಿದ್ದರು. 2007ರಲ್ಲಿ ಅತ್ಯುತ್ತಮ ಶಾಶಕಿ ಪ್ರಶಸ್ತಿಯೂ ಅವರಿಗೆ ಲಭಿಸಿತ್ತು. 2009ರಿಂದ ಅವರು ಬಿಜೆಪಿಯ ರಾಜ್ಯ ಪರಿಶಿಷ್ಟ ಪಂಗಡ ಮೋರ್ಚಾದ ಅಧ್ಯಕ್ಷೆಯಾಗಿ ಕಾರ್ಯ ನಿರ್ವಹಿಸಿದ್ದರು.
ಶಿಕ್ಷಣದ ಪೂರೈಸಿದ ಬಳಿಕ ಒಡಿಶಾ ಸರ್ಕಾರದ ನೀರಾವರಿ ಇಲಾಖೆಯಲ್ಲಿ ಕೆಲಸ, ಬಳಿಕ ಶಿಕ್ಷಕಿ ಹುದ್ದೆ ನಿರ್ವಹಿಸಿದ ಅನುಭವ ಹೊಂದಿದ್ದಾರೆ.
ಈ ನಡುವೆ 1997ರಲ್ಲಿ ಅವರು ಒಡಿಶಾದ ರಾಯ್ರಂಗಪುರ ನಗರಾಡಳಿತ ಸಂಸ್ಥೆಯ ಸದಸ್ಯರಾಗಿ ಚುನಾಯಿತರಾದರು. ಅದೇ ವರ್ಷ ನಗರಾಡಳಿತ ಸಂಸ್ಥೆಯ ಉಪಾಧ್ಯಕ್ಷೆಯಾಗಿದ್ದರು.
ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯ ಮತದಾರರೂ ಆಗಿರುವ ಶಾಸಕರ ಬಳಿ ಮತ ಯಾಚಿಸಲಿದ್ದಾರೆ.
Published On - 4:00 pm, Sun, 10 July 22