AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಕಚೇರಿಗೆ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ಕಾದಿದೆ ಸಂಕಷ್ಟ!

ಕಚೇರಿ ಶಿಸ್ತಿನ ಬಗ್ಗೆ ಕರ್ನಾಟಕ ಸರ್ಕಾರಿ ನೌಕರರಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದೆ. ಮುಖ್ಯವಾಗಿ, ನೌಕರರು ಹರಿದ ಜೀನ್ಸ್, ಸ್ಲೀವ್​ಲೆಸ್ ಡ್ರೆಸ್‌ನಂತಹ ಅಸಭ್ಯ ಬಟ್ಟೆಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಕಚೇರಿಗೆ ಹೋಗುವ ಸರ್ಕಾರಿ ನೌಕರರಿಗೆ ಇನ್ಮುಂದೆ ಕಾದಿದೆ ಸಂಕಷ್ಟ!
ಸಾಂದರ್ಭಿಕ ಚಿತ್ರImage Credit source: Yesstyle
ಗಣಪತಿ ಶರ್ಮಾ
|

Updated on: Dec 20, 2025 | 9:46 AM

Share

ಬೆಂಗಳೂರು, ಡಿಸೆಂಬರ್ 20: ರಾಜ್ಯ ಸರ್ಕಾರಿ ನೌಕರರು ಸಭ್ಯ ಬಟ್ಟೆಗಳನ್ನು (Decent Clothes) ಧರಿಸಿಕೊಂಡು ಕಚೇರಿಗೆ ಬರಬೇಕು. ಸರ್ಕಾರದ ಖ್ಯಾತಿಗೆ ಧಕ್ಕೆ ತರುವ ಬಟ್ಟೆಗಳನ್ನು ಧರಿಸಿ ಕಚೇರಿಗೆ ಬಂದರೆ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ಕಟ್ಟುನಿಟ್ಟಿನ ಸೂತ್ತೋಲೆ ಹೊರಡಿಸಿದೆ. ವಿವಿಧ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಮುಖ್ಯಮಂತ್ರಿ ಕಚೇರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಇತರರಿಗೆ ಈ ಸಂದೇಶವನ್ನು ಕಳುಹಿಸಿದ್ದು, ಸರ್ಕಾರಿ ಕಚೇರಿಗೆ ಕರ್ತವ್ಯಕ್ಕೆ ಹಾಜರಾಗುವಾಗ ಹೇಗಿರಬೇಕು, ಏನು ಮಾಡಬೇಕು ಮತ್ತು ಏನು ಮಾಡಬಾರದು ಎಂಬ ಕೆಲಸಗಳನ್ನು ಪಟ್ಟಿ ಮಾಡಿದೆ.

ಕೆಲವು ನೌಕರರು ಅಸಭ್ಯವಾಗಿ ಉಡುಗೆ ತೊಟ್ಟುಕೊಂಡು ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಾರೆ ಎಂದು ಸಾರ್ವಜನಿಕರು ಮತ್ತು ಕೆಲವು ಸಂಸ್ಥೆಗಳಿಂದ ಇಲಾಖೆಗೆ ದೂರುಗಳು ಬಂದಿವೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ನೌಕರರಿಗೆ ಯೋಗ್ಯವಾದ ಬಟ್ಟೆಗಳನ್ನು ಧರಿಸಲು ಹೇಳಲಾಗಿದ್ದರೂ, ಅನೇಕರು ಸೂಚನೆಗಳನ್ನು ಪಾಲಿಸುತ್ತಿಲ್ಲ. ನಾವು ಅದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

ಸ್ಲೀವ್​ಲೆಸ್ ಡ್ರೆಸ್, ಹರಿದ ಜೀನ್ಸ್ ಹಾಕೊಂಡು ಬರ್ಬೇಡಿ

ಕಾರ್ಪೊರೇಟ್ ಕಚೇರಿಗಳಂತೆ ಸರ್ಕಾರಿ ನೌಕರರಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ. ಆದಾಗ್ಯೂ, ಕೆಲವರು ಕಾಲೇಜು ಹೋಗುವವರು ಧರಿಸುವಂತಹ ಉಡುಗೆ ತೊಡುತ್ತಾರೆ, ಇದು ಸ್ವೀಕಾರಾರ್ಹವಲ್ಲ. ಹರಿದ ಜೀನ್ಸ್, ಸ್ಲೀವ್​ಲೆಸ್ ಡ್ರೆಸ್ ಮತ್ತು ತುಂಬಾ ಬಿಗಿಯಾದ ಬಟ್ಟೆಗಳನ್ನು ಧರಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ನೌಕರರ ಸಂಘ ಸ್ವಾಗತ

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸುತ್ತೋಲೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಸ್ವಾಗತಿಸಿದ್ದಾರೆ. ಸರ್ಕಾರಿ ನೌಕರರು ಧರಿಸುವ ಉಡುಗೆ ತೊಡುಗೆ ಇತರರಿಗೆ ಮುಜುಗರ ಉಂಟುಮಾಡಬಾರದು. ಸರ್ಕಾರಿ ಕಚೇರಿಗಳಲ್ಲಿ ಸಭ್ಯತೆಯನ್ನು ಕಾಪಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದ್ವೇಷ ಭಾಷಣ ವಿಧೇಯಕ ರಿಜೆಕ್ಟ್​ ಮಾಡಲು ಸಾಕಾಗಲಿದೆಯಾ ಆ ಒಂದು ಕಾರಣ! ರಾಜ್ಯಪಾಲರಿಗೆ ಸಲ್ಲಿಕೆಯಾದ ಪತ್ರದಲ್ಲೇನಿದೆ?

ಸರ್ಕಾರಿ ನೌಕರರ ಚಲನವಲನಗಳನ್ನು ಟ್ರ್ಯಾಕ್ ಮಾಡಲು ಸರ್ಕಾರ ಲೆಡ್ಜರ್​ಗಳು ಮತ್ತು ಮೂವ್​ಮೆಂಟ್ ರಿಜಿಸ್ಟರ್ ಅನ್ನು ಅಳವಡಿಸಿದೆ. ಸರ್ಕಾರಿ ನೌಕರರು ಕಚೇರಿಗೆ ಪ್ರವೇಶಿಸುವಾಗ ಮತ್ತು ಹೊರಡುವಾಗ ಈ ಲೆಡ್ಜರ್‌ಗಳಲ್ಲಿ ನಮೂದು ಮಾಡಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಆದರೆ ಅನೇಕರು ಈ ನಿಯಮವನ್ನು ಪಾಲಿಸುತ್ತಿಲ್ಲ. ಉದ್ಯೋಗಿಯೊಬ್ಬರು ಬೆಳಿಗ್ಗೆ 10:10 ರೊಳಗೆ ಕಚೇರಿಯಲ್ಲಿರಬೇಕು ಮತ್ತು ಕೆಲಸದ ಸಮಯ ಮುಗಿಯುವವರೆಗೆ ತಮ್ಮ ಸ್ಥಾನದಲ್ಲಿರಬೇಕು. ಅವರು ಅಧಿಕೃತ ಕರ್ತವ್ಯದ ಮೇಲೆ ಹೊರಗೆ ಹೋಗುತ್ತಿದ್ದರೆ, ಅದನ್ನು ರಿಜಿಸ್ಟರ್‌ನಲ್ಲಿ ನಮೂದಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ
ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
‘ಕಾಕ್ರೂಚ್’ಗಳ ಪ್ರತಿಭಟನೆಗೆ ನಟ ಪ್ರಕಾಶ್ ರೈ ಸಾಥ್: ವಿಡಿಯೋ
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ರಸ್ತೆ ಬದಿ ಅಂಗಡಿಯಲ್ಲಿ 1 ಟೀ ಕುಡಿದು 2 ಸಾವಿರ ರೂ. ಕೊಟ್ಟ DCM ಪರಮೇಶ್ವರ್
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಗೃಹಲಕ್ಷ್ಮೀ, ಗೃಹಜ್ಯೋತಿಗೆ ಹೊಸ ಅರ್ಜಿಗೆ ಏನೇನು ದಾಖಲೆ ಬೇಕು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಸಹೋದರನಿಗೆ ಕೆಪಿಸಿಸಿ ಆಧ್ಯಕ್ಷ ಸ್ಥಾನ ತಪ್ಪಿದಕ್ಕೆ ಸಾಹುಕಾರ್ ಹೇಳಿದ್ದೇನು?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕುಮಾರಸ್ವಾಮಿಯ ವಿಡಿಯೋ ರಿಲೀಸ್ ಮಾಡಿದ ಕಾಂಗ್ರೆಸ್ ಶಾಸಕ, ವಿಡಿಯೋನಲ್ಲೇನಿದೆ?
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಕಿರುಕುಳ ತಾಳಲಾರದೇ ಅಧಿಕಾರಿಯ ಮುಖಕ್ಕೆ ರಾಜೀನಾಮೆ ಬಿಸಾಕಿದ ಲೇಡಿ ಸಿಬ್ಬಂದಿ
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಬೆಂಗಳೂರಿನಲ್ಲಿ ಒಂದೇ ಒಂದು ಮಳೆಗೆ ತುಂಬಿ ಹರಿಯುತ್ತಿರೋ ಹಳ್ಳ ಕೊಳ್ಳಗಳು!
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ಮಂಡ್ಯದಲ್ಲಿ ಮುನಿಸು ಮರೆತ ಮೈತ್ರಿ ನಾಯಕರು
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!
ರಾಯಚೂರಿನಲ್ಲಿ ವರುಣನ ಆರ್ಭಟ: ಜಲಾವೃತಗೊಂಡ ರಸ್ತೆಗಳು!