ಗಣಿನಾಡಲ್ಲಿ ನಿರ್ವಹಣೆ ಇಲ್ಲದೆ ಕೆಟ್ಟುನಿಂತ ಶುದ್ದ ನೀರಿನ ಘಟಕಗಳು, ಜನರಿಗೆ ಪ್ಲೋರೈಡ್ ನೀರೇ ಗತಿ..!

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 1701 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಅವುಗಳಲ್ಲಿ 1088 ಶುದ್ಧ ಕುಡಿಯುವ ನೀರಿನ ಘಟಕಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

ಗಣಿನಾಡಲ್ಲಿ ನಿರ್ವಹಣೆ ಇಲ್ಲದೆ ಕೆಟ್ಟುನಿಂತ ಶುದ್ದ ನೀರಿನ ಘಟಕಗಳು, ಜನರಿಗೆ ಪ್ಲೋರೈಡ್ ನೀರೇ ಗತಿ..!
ಕೆಟ್ಟುನಿಂತ ಶುದ್ದ ನೀರಿನ ಘಟಕ
Follow us
ಪೃಥ್ವಿಶಂಕರ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 17, 2021 | 11:29 AM

ಬಳ್ಳಾರಿ: ರಾಜ್ಯ ಸರ್ಕಾರ ಗ್ರಾಮೀಣ ಭಾಗದ ಜನರು ಪ್ಲೊರೈಡ್ ನೀರು ಕುಡಿಯಬಾರದು ಅನ್ನೋ ಕಾರಣಕ್ಕೆ ಕೋಟ್ಯಂತರ ರೂಪಾಯಿ ಅನುದಾನದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳನ್ನ ಸ್ಥಾಪಿಸಿದೆ. ಶುದ್ದ ಕುಡಿಯುವ ನೀರಿನ ಘಟಕಗಳೇನೂ ಆರಂಭಗೊಂಡಿವೆ. ಆದ್ರೆ ಸಮರ್ಪಕ ನಿರ್ವಹಣೆ ಇಲ್ಲದೇ ಕಾರಣ ಗಣಿನಾಡಿನ ಗ್ರಾಮೀಣ ಭಾಗದ ಜನರೇ ಪ್ಲೋರೈಡ್ ನೀರೇ ಕುಡಿಯುವಂತಾಗಿದೆ.

ತುಂಗಾಭದ್ರಾ ಜಲಾಶಯ. ಬಳ್ಳಾರಿ ಜಿಲ್ಲೆಯ ಜೀವನಾಡಿಯಾಗಿದ್ರೂ, ಬಹುತೇಕ ತಾಲೂಕಗಳ ಗ್ರಾಮಗಳಿಗೆ ಜಲಾಶಯ ನೀರಿನ ಸೌಲಭ್ಯ ಇನ್ನೂ ಸಿಕ್ಕಿಲ್ಲ. ಹೀಗಾಗಿ ಗ್ರಾಮೀಣ ಭಾಗದ ಬಹುತೇಕ ಜನರು ಬೋರ್ ವೆಲ್ ನೀರನ್ನೇ ಕುಡಿಯುತ್ತಿದ್ದಾರೆ. ಆದ್ರೆ ಅದರಲ್ಲಿ ಪ್ಲೋರೈಡ್ ಅಂಶ ಹೆಚ್ಚಾಗಿರುವುದರಿಂದ ಸರ್ಕಾರ ಗ್ರಾಮೀಣ ಪ್ರದೇಶಗಳ ಶುದ್ಧ ಕುಡಿಯುವ ನೀರಿನ ಆರ್‌ಒ ಪ್ಲಾಂಟ್‌ಗಳನ್ನ ಅಳವಡಿಸಿದೆ.

ಸಮರ್ಪಕ ನಿರ್ವಹಣೆ ಇಲ್ಲದೇ ಬಹುತೇಕ ಶುದ್ದ ಕುಡಿಯುವ ನೀರಿನ ಘಟಕಗಳು ಹಳ್ಳ ಹಿಡಿದಿವೆ. ಜನರಿಗೆ ಬೋರ್‌ವೆಲ್ ನೀರೇ ಗತಿಯಾಗಿದೆ. ಆದ್ರೆ ಬೋರ್‌ವೆಲ್ ನೀರಿನಲ್ಲಿ ಪ್ಲೋರೈಡ್ ಅಂಶ ಹೆಚ್ಚಾಗಿರುವುದರಿಂದ ಜನರು ಆನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹೀಗಾಗಿ ಗ್ರಾಮಸ್ಥರು, ನೀರಿನ ಘಟಕಗಳನ್ನ ಸಮರ್ಪಕವಾಗಿ ನಿರ್ವಹಣೆ ಮಾಡದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಅಂತಾ ಒತ್ತಾಯಿಸಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 1701 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಅವುಗಳಲ್ಲಿ 1088 ಶುದ್ಧ ಕುಡಿಯುವ ನೀರಿನ ಘಟಕಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಉಳಿದ ಘಟಕಗಳು ರಿಪೇರಿ ಹಂತದಲ್ಲಿದ್ದು, ಬೀಗ ಹಾಕಲಾಗಿದೆ. ಇದೀಗ ಜಿಲ್ಲಾ ಪಂಚಾಯತ್ ಸರ್ಮಪಕ ನಿರ್ವಹಣೆ ಮಾಡದ ಕಂಪನಿಗಳನ್ನ ಬ್ಲಾಕ್ ಲಿಸ್ಟ್‌ಗೆ ಸೇರಿಸಲು ಚಿಂತನೆ ನಡೆಸಿದೆ.

ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಒಂದೊಂದು ಶುದ್ದ ಕುಡಿಯುವ ನೀರಿನ ಘಟಕಗಳನ್ನ ಸ್ಥಾಪಿಸಿ, ಅವುಗಳನ್ನ ನಿರ್ವಹಣೆ ಮಾಡದೇ ಬೀಗ ಹಾಕಿದ್ರೆ ಹೇಗೆ? ಸರ್ಕಾರದ ಅನುದಾನ ಹೋಮ ಮಾಡಿದಂತಾಗುತ್ತದೆ. ಹೀಗಾಗಿ ಸರ್ಕಾರ ಶುದ್ಧ ಕುಡಿಯುವ ನೀರಿನ ಘಟಕಗಳನ್ನ ಸ್ಥಾಪಿಸಿ ಕೈತೊಳೆದುಕೊಳ್ಳುವ ಬದಲು ಅವುಗಳನ್ನ ಸಮರ್ಪಕ ನಿರ್ವಹಣೆ ಮೂಲಕ ಜನರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾಗಿದೆ.

Published On - 8:20 am, Sun, 17 January 21

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ