ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ನುಗ್ಗಿದ ಕಾರು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಬೈಕ್​ಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸುವಾಗ ಚಾಲಕ ಕಾರನ್ನು ಮನೆಗೆ ಗುದ್ದಿದ ಘಟನೆ ಪಟ್ಟಣದ ಸುಭಾಷ್ ನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್​ನಲ್ಲಿದ್ದ ಮಹಿಳೆ ಹಾಗೂ ಕಾರಿನಲ್ಲಿದ್ದ ಓರ್ವನಿಗೆ ಗಾಯಗಳಾಗಿದೆ.

ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ನುಗ್ಗಿದ ಕಾರು; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Updated on: Mar 20, 2021 | 8:41 PM

ನೆಲಮಂಗಲ: ಬೈಕ್​ಗೆ ಡಿಕ್ಕಿ ಹೊಡೆದು ಪರಾರಿಯಾಗಲು ಯತ್ನಿಸುವಾಗ ಚಾಲಕ ಕಾರನ್ನು ಮನೆಗೆ ಗುದ್ದಿದ ಘಟನೆ ಪಟ್ಟಣದ ಸುಭಾಷ್ ನಗರದಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್​ನಲ್ಲಿದ್ದ ಮಹಿಳೆ ಹಾಗೂ ಕಾರಿನಲ್ಲಿದ್ದ ಓರ್ವನಿಗೆ ಗಾಯಗಳಾಗಿದೆ. ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವಘಡದಲ್ಲಿ ನಾಗರಾಜು ಎಂಬುವವರಿಗೆ ಸೇರಿದ ಮನೆಯ ಗೇಟ್ ಸಂಪೂರ್ಣವಾಗಿ ಜಖಂಗೊಂಡಿದೆ.

NLM ACCIDENT CCTV 1

ಬೈಕ್​ಗೆ ಡಿಕ್ಕಿ ಹೊಡೆದು ಎಸ್ಕೇಪ್​ ಆಗೋವಾಗ ಮನೆಗೆ ಗುದ್ದಿದ ಕಾರು

ಸದ್ಯ, ಕಾರು ಚಾಲಕ ಸುನೀಲ್​ನನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಅಪಘಾತದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಅಪಘಾತದ ಭೀಕರ ದೃಶ್ಯ

ಸಿಸಿಬಿ ಕಚೇರಿ ಮುಂಭಾಗದಲ್ಲಿರುವ ಮೆಡಿಕಲ್ ಗೋದಾಮಿನಲ್ಲಿ ಬೆಂಕಿ
ಇತ್ತ, ಮೆಡಿಕಲ್ ಸಾಮಗ್ರಿ ಸಂಗ್ರಹಿಸಿದ್ದ ಗೋದಾಮಿನಲ್ಲಿ‌ ಬೆಂಕಿ ಕಾಣಿಸಿಕೊಂಡಿರುವ ಘಟನೆ ಚಾಮರಾಜಪೇಟೆಯಲ್ಲಿ ರುವ ಸಿಸಿಬಿ ಕಚೇರಿ ಮುಂಭಾಗದಲ್ಲಿ ವರದಿಯಾಗಿದೆ. ಶಾರ್ಟ್ ಸರ್ಕ್ಯೂಟ್​ನಿಂದ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಐದು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅದೃಷ್ಟವಶಾತ್​, ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 2 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಅದಿರು‌ ತೆಗೆಯೋದನ್ನು ಖಾಸಗಿಗೆ ವಹಿಸಲು ರಾಜ್ಯ ಸರ್ಕಾರ ಚಿಂತನೆ, ಕಾರಣವೇನು?

Published On - 8:39 pm, Sat, 20 March 21