ಶಿವಮೊಗ್ಗ: ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು ಚಾಲಕ

ಶಿವಮೊಗ್ಗದಲ್ಲಿ ಟ್ರಾಫಿಕ್ ಪೊಲೀಸರ ತಪಾಸಣೆ ವೇಳೆ ಚಾಲಕನೊಬ್ಬ ಪೊಲೀಸ್ ಅಧಿಕಾರಿಯನ್ನು ಕಾರಿನ ಬಂಪರ್‌ ಮೇಲೆ ಹತ್ತಿಸಿಕೊಂಡು 100 ಮೀಟರ್‌ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿದ್ದಾನೆ. ಈ ಘಟನೆಯಲ್ಲಿ ಪೊಲೀಸ್ ಅಧಿಕಾರಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಮಿಥುನ್ ಜಗದಾಳೆ ಎಂಬಾತನನ್ನು ಬಂಧಿಸಲಾಗಿದ್ದು, ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗ ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು ಚಾಲಕ
ಶಿವಮೊಗ್ಗ: ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹೊತ್ತೋಯ್ದ ಕಾರು ಚಾಲಕ
Follow us
Basavaraj Yaraganavi
| Updated By: ವಿವೇಕ ಬಿರಾದಾರ

Updated on:Oct 25, 2024 | 1:27 PM

ಶಿವಮೊಗ್ಗ, ಅಕ್ಟೋಬರ್​ 24: ತಪಾಸಣೆ ಮಾಡುವ ವೇಳೆ ಕಾರು ಗುದ್ದಿ ಬ್ಯಾನೆಟ್‍ ಮೇಲೆ ಪೊಲೀಸ್​ ಸಿಬ್ಬಂದಿಯನ್ನು (Police Officer) ಹತ್ತಿಸಿಕೊಂಡು ಚಾಲಕ ನೂರು ಮೀಟರ್​ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿರುವಂತಹ ಘಟನೆ ನಗರದ ಸಹ್ಯಾದ್ರಿ ಕಾಲೇಜು ಬಳಿ ನಡೆದಿದೆ. ಜಿಲ್ಲೆಯ ಭದ್ರಾವತಿಯ ಹೊಸಮನೆ ಬಡಾವಣೆ ನಿವಾಸಿ ಮಿಥುನ್ ಜಗದಾಳೆ ಎಂಬಾತರನ್ನು ಬಂಧಿಸಲಾಗಿದೆ. ಸದ್ಯ ಕಾರು ವಶಕ್ಕೆ ಪಡೆದುಕೊಂಡಿದ್ದು, ಶಿವಮೊಗ್ಗ ಪೂರ್ವ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೂರ್ವ ಠಾಣೆ ಟ್ರಾಫಿಕ್​ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ತಪಾಸಣೆ ವೇಳೆ ಕಾರಿನ ಮುಂದೆ ಬಂದು ಕಾರು ನಿಲ್ಲಿಸುವಂತೆ ಟ್ರಾಫಿಕ್ ಸಿಬ್ಬಂದಿ ಸೂಚಿಸುತ್ತಿದ್ದರು. ಕಾರು ತಡೆಯದೇ ಸಿಬ್ಬಂದಿ ಮೇಲೆ ಚಾಲಕ ಹತ್ತಿಸಲು ಮುಂದಾಗಿದ್ದಾನೆ. ಕಾರಿನ ಬ್ಯಾನೆಟ್‍ ಮೇಲೆ ಸಿಬ್ಬಂದಿ ಬಿದ್ದರು ಚಾಲಕ ನೂರು ಮೀಟರ್​ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿದ್ದಾನೆ. ಸ್ವಲ್ಪದಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಕುರಿತು ಕರ್ನಾಟಕ ಪೋರ್ಟ್ಫೋಲಿಯೋ ಟ್ವಿಟ್​ ಮಾಡಿದೆ.

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ: ಬೆಸ್ಕಾಂ ಅಧಿಕಾರಿಗೆ ಲೋಕಾಯುಕ್ತ ಬಲೆಗೆ

ದೇವನಹಳ್ಳಿ: ಖಾಸಗಿ ಬಡಾವಣೆಗೆ ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು ‘ ಲೋಕಾಯುಕ್ತ ಬಲೆಗೆ ಬೆಸ್ಕಾಂ ಜೆಇ ನಾಗೇಶ್ ಬಿದಿದ್ದಾರೆ. ಲಂಚಕ್ಕೆ ಬೇಡಿಕೆಯಿಟ್ಟು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಬೆಂಗಳೂರು ಪೂರ್ವ ತಾಲೂಕಿನ ಆವಲಹಳ್ಳಿಯ ಬೆಸ್ಕಾಂ ಎಇಇ ರಮೇಶ್ ಬಾಬು ಮತ್ತು ಜೆಇ ನಾಗೇಶ್​ರಿಂದ ಬೊಮ್ಮನಹಳ್ಳಿ ಗ್ರಾಮದ ಜಮೀನಿನ ಲೇಔಟ್​ಗೆ ವಿದ್ಯುತ್ ಸಂಪರ್ಕ ನೀಡಲು ಲಂಚಕ್ಕೆ ಬೇಡಿಕೆ ಇಡಲಾಗಿತ್ತು.

ಇದನ್ನೂ ಓದಿ: ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ ಬೆನ್ನಲ್ಲೇ ಬೆಂಗಳೂರಲ್ಲಿ ವಾಲಿದ ಮತ್ತೊಂದು ಕಟ್ಟಡ

ವಿಜಯಕುಮಾರ್ ಎಂಬುವವರ ಬಳಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಅದೇ ರೀತಿ ಇಂದು ಬೊಮ್ಮನಹಳ್ಳಿಯ ಮಾರ್ಟ್ ಬಳಿ ಲಂಚ ಸ್ವೀಕರಿಸುವ ವೇಳೆ ಲೋಕಾ ಬಲೆಗೆ ನಾಗೇಶ್‌ ಬಿದಿದ್ದಾರೆ. ಲಂಚ ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಅಧಿಕಾರಿ ಸಿಕ್ಕಬಿದಿದ್ದಾರೆ. ಲೋಕಾಯುಕ್ತ ಅಧಿಕಾರಿ ಪವನ್ ನೆಜ್ಜೂರು ನೇತೃತ್ವದಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:35 pm, Thu, 24 October 24