ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ಮಗುಚಿ ಬಿದ್ದು 12 ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಆಲನಹಳ್ಳಿ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳು ಹುಣಸೂರು ತಾಲೂಕಿನ ಗೋಹಳ್ಳಿ ಗ್ರಾಮದವರು ಎಂದು ಮೂಲಗಳಿಂದ ತಿಳಿದು ಬಂದಿದೆ.
ಆಟೋದಲ್ಲಿದ್ದ ಜನರು ನಂಜನಗೂಡು ದೇವಸ್ಥಾನಕ್ಕೆಂದು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಚಾಲಕನಿಗೆ ನಿಯಂತ್ರಣ ತಪ್ಪಿ ಆಟೋ ಮಗುಚಿ ಬಿದ್ದಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 12 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ ಡಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಆಟೋಗೆ ಡಿಕ್ಕಿ ತಪ್ಪಿಸಲು ಹೋಗಿ ಖಾಸಗಿ ಬಸ್ ಪಲ್ಟಿ, 7 ಮಂದಿ ಸ್ಥಳದಲ್ಲೇ ಸಾವು