ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಪೊಲೀಸ್ ವಾಹನ ಪಲ್ಟಿಯಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಾಳಕೆಂಪನದೊಡ್ಡಿ ಬಳಿ ನಡೆದಿದೆ. ಘಟನೆಯಲ್ಲಿ ಪಾಂಡವಪುರ ಠಾಣೆ ಸಿಪಿಐ ಪ್ರಭಾಕರ್, ಕಾನ್ಸ್ಟೇಬಲ್ ಹೇಮಂತ್ಗೆ ಗಾಯಗಳಾಗಿವೆ. ಮಳವಳ್ಳಿ ಕಡೆಯಿಂದ ಮದ್ದೂರು ಕಡೆಗೆ ತೆರಳುವ ವೇಳೆ ಪಾಂಡವಪುರ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರ ವಾಹನ ನಿಯಂತ್ರಣ ತಪ್ಪಿ ಮಳವಳ್ಳಿ-ಮದ್ದೂರು ಹೆದ್ದಾರಿ ಬದಿ ಇರುವ ನಾಲೆಗೆ ನುಗ್ಗಿ ಅವಘಡ ಸಂಭವಿಸಿದೆ. ಸದ್ಯ ಸ್ಥಳೀಯರು ಇಬ್ಬರು ಪೊಲೀಸರನ್ನು ರಕ್ಷಿಸಿ, ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿದ ಶಾಸಕ
ರಾಯಚೂರು ಜಿಲ್ಲೆ ಮಾನ್ವಿ ಶಾಸಕ ರಾಜಾ ವೆಂಕಟಪ್ಪನವರು ರಸ್ತೆ ಅಪಘಾತದಲ್ಲಿ ಗಾಯಗೊಂಡವರನ್ನ ತಮ್ಮ ಕಾರಿನಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಮಾನ್ವಿ ಪಟ್ಟಣದ ಹೊರವಲಯದಲ್ಲಿ ಕಾರು ಡಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡಿದ್ದರು. ಆ ವೇಳೆ ಅದೇ ಮಾರ್ಗವಾಗಿ ಹೋಗುತ್ತಿದ್ದ ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ ಘಟನೆ ತಿಳಿದ ಕೂಡಲೇ ಕಾರು ನಿಲ್ಲಿಸಿ ಆರೈಕೆ ಮಾಡಿ ಬಳಿಕ ತಮ್ಮದೇ ಕಾರಿನಲ್ಲಿ ಗಾಯಾಳುವನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮತ್ತಷ್ಟು ಅಪರಾಧ ಸುದ್ದಿಗಳ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ಅಕ್ರಮವಾಗಿ ಸಾಗಿಸುತ್ತಿದ್ದ ಅಕೇಶಿಯಾ ಮರದ ತುಂಡುಗಳು ಜಪ್ತಿ
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 12 ಲಕ್ಷ ಮೌಲ್ಯದ 2 ಲೋಡ್ ಅಕೇಶಿಯಾ ಮರದ ತುಂಡುಗಳನ್ನು ಜಪ್ತಿ ಮಾಡಲಾಗಿದೆ. ಕಾರ್ಗಲ್ನ ಎಂಪಿಎಂ ವ್ಯಾಪ್ತಿಯ ಅರಣ್ಯ ಸಿಬ್ಬಂದಿಯಿಂದಲೇ ಕೃತ್ಯ ನಡೆದಿದೆ. ಅರಣ್ಯ ಸಿಬ್ಬಂದಿ ಕೆ.ಮಂಜುನಾಥ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ಗೆ ಟ್ರಾಕ್ಟರ್ ಡಿಕ್ಕಿ ಬೈಕ್ ಸವಾರ ಸಾವು
ಚಾಮರಾಜನಗರ: ತಾಲೂಕಿನ ಮಲೆಯೂರು ಬಳಿ ಟ್ರ್ಯಾಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದ ಜಗದೀಶ್(27) ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Published On - 10:36 pm, Mon, 16 May 22