ಮಾರಕಾಸ್ತ್ರಗಳಿಂದ ಕೊಚ್ಚಿ ಚಾಲಕನ ಕೊಲೆ
ಬೆಳಗ್ಗೆ ವಾಕಿಂಗ್ಗೆ ಹೋದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.
ಬೆಳಗಾವಿ: ಕಾರು ಚಾಲಕ ಜಯಪಾಲ್ ಗರಾನೆ (35) ಮೇಲೆ ಗುರುವಾರ ತಡರಾತ್ರಿ ಮಾರಕಾಸ್ತ್ರಗಳಿಂದ ಬರ್ಬರ ಹತ್ಯೆ ಮಾಡಿದ ಘಟನೆ ನಗರದ ಅಂಬೇಡ್ಕರ್ ಗಲ್ಲಿಯಲ್ಲಿ ನಡೆದಿದ್ದು, ಕೊಲೆಗೆ ಕಾರಣ ಇನ್ನು ತಿಳಿದುಬಂದಿಲ್ಲ.
ರಾತ್ರಿ 12.30ರ ಸುಮಾರಿಗೆ ಮನೆಯಿಂದ ಸಂಬಂಧಿಕರ ಮದುವೆ ಅರಿಶಿನ ಕಾರ್ಯಕ್ರಮಕ್ಕೆ ಜಯಪಾಲ್ ಗರಾನೆ ತೆರಳಿದ್ದರು. ಕಾರ್ಯಕ್ರಮವನ್ನು ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆಗೆ ಚಾಲಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕೊಲೆ ಮಾಡಿದ್ದಾರ.
ಬೆಳಗ್ಗೆ ವಾಕಿಂಗ್ಗೆ ಹೋದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಶಹಾಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯೂ ಇಯರ್ ಗುರಿಯಾಗಿಸಿಕೊಂಡು ಡ್ರಗ್ಸ್ ದಂಧೆ: ಸಿಸಿಬಿ ಬಲೆಗೆ ಸಿಕ್ಕಿ ಬಿದ್ದ ಮಿಕಗಳು
Published On - 2:50 pm, Thu, 17 December 20