AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರಗಾಲ ಬೆಳೆ ಪರಿಹಾರ: ಇಂದು ರೈತರ ಖಾತೆಗೆ 2 ಸಾವಿರ ರೂ. ಜಮೆ

ರಾಜ್ಯ ಸರ್ಕಾರ ಬರಗಾಲದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ 2000 ರೂಪಾಯಿ ನೀಡಲು ನಿರ್ಧರಿಸಿದೆ. ಸರ್ಕಾರ ಶನಿವಾರ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 105 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇಂದು (ಜ.08) ರೈತರ ಖಾತೆಗಳಿಗೆ ಹಣ ಜಮಾವಣೆಯಾಗಲಿದೆ.

ಬರಗಾಲ ಬೆಳೆ ಪರಿಹಾರ: ಇಂದು ರೈತರ ಖಾತೆಗೆ 2 ಸಾವಿರ ರೂ. ಜಮೆ
ರೈತರು (ಸಾಂದರ್ಭಿಕ ಚಿತ್ರ)
ವಿವೇಕ ಬಿರಾದಾರ
|

Updated on: Jan 08, 2024 | 7:18 AM

Share

ಬೆಂಗಳೂರು, ಜನವರಿ 08: ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಸಮರ್ಪಕವಾಗಿ ಆಗಿಲ್ಲ. ಇದರಿಂದ ಬರಗಾಲ (Drought) ಆವರಿಸಿದೆ. ಈ ಬರಗಾಲದಿಂದ ಕೃಷಿಗೆ ನೀರಿಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆದ ಬೆಳೆ ಕೈಗೆ ಬಾರದೆ ನಷ್ಟ ಅನುಭವಿಸಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ (Karnataka Government) ಬರಗಾಲದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ 2000 ರೂಪಾಯಿ ನೀಡಲು ನಿರ್ಧರಿಸಿದೆ. ಸರ್ಕಾರ ಶನಿವಾರ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ (NDRF) 105 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇಂದು (ಸೋಮವಾರ ಜ.08) ರೈತರ ಖಾತೆಗಳಿಗೆ ಹಣ ಜಮಾವಣೆಯಾಗಲಿದೆ. ಎಂದು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವರ್ಷದ ಭೀಕರ ಬರಗಾಲದಿಂದ ರಾಜ್ಯದ ರೈತರು 30 ಸಾವಿರ ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಬರದಿಂದಾಗಿ 42 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆದ ಬೆಳೆ ನಷ್ಟವಾಗಿದೆ ಮತ್ತು ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಅಧಿಕೃತವಾಗಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು.

ಇದನ್ನೂ ಓದಿ: ಬರಗಾಲ, ಫೆಬ್ರವರಿ ಅಂತ್ಯದ ವೇಳೆಗೆ ಕುಡಿಯುವ ನೀರಿಗೆ ಹಾಹಾಕಾರ

ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಕೃಷ್ಣ ಬೈರೇಗೌಡ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಬರಗಾಲದಿಂದ ರಾಜ್ಯ ತತ್ತರಿಸಿದೆ. ಹೀಗಾಗಿ 18,177 ಕೋಟಿ ರೂ. ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು.

ಕೇವಲ 105 ಕೋಟಿ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು. ಈ ಮೊತ್ತವು ಒಟ್ಟು ಅಂದಾಜು ನಷ್ಟದ ಶೇ.1ರಷ್ಟು ಕೂಡ ಆಗಲ್ಲ. ಇದು ಭಿಕ್ಷೆಯೇ ಹೊರತು ಬೇರೇನೂ ಅಲ್ಲ. ಇದರಿಂದ ಎಷ್ಟು ರೈತರಿಗೆ ಪರಿಹಾರ ಸಿಗಲಿದೆ, ಮುಖ್ಯಮಂತ್ರಿಗಳಿಗೆ ರೈತರ ಮೇಲೆ ಕಾಳಜಿ ಇದ್ದರೆ ಸಂಪೂರ್ಣ ನಷ್ಟವನ್ನು ಭರಿಸಬೇಕು ಎಂದರು.

 ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ