AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ದೀಪಾವಳಿ ಗಿಫ್ಟ್: ಬರ ಪರಿಹಾರ ಹೆಚ್ಚಳ, ಮೊದಲ ಕಂತಿನಲ್ಲಿ 2500 ರೂ. ರಿಲೀಸ್

ದೀಪಾವಳಿ ಹೊತ್ತಿನಲ್ಲೇ ರಾಜ್ಯದ ರೈತರಿಗೆ ಸಿಎಂ ಡಿಕೆ ಶಿವಕುಮಾರ್‌ ಬಂಪರ್‌ ಉಡುಗೊರೆ ನೀಡಿದ್ದಾರೆ. ಈ ಹಿಂದೆ 2,500 ರೂ. ಇದ್ದ ಬರ ಪರಿಹಾರದ ಮೊತ್ತವನ್ನ 5,000 ರೂ.ಗೆ ಹೆಚ್ಚಿಸಿರುವುದಾಗಿ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಅಲ್ಲದೇ ಇಂದು (ನವೆಂಬರ್ 05) ಅಧಿಕೃತವಾಗಿ ರೈತರ ಅಕೌಂಟ್​​​​​​ಗೆ ಬರ ಪರಿಹಾರ ಹಣವನ್ನು ಜಮೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ.

ರೈತರಿಗೆ ದೀಪಾವಳಿ ಗಿಫ್ಟ್: ಬರ ಪರಿಹಾರ ಹೆಚ್ಚಳ, ಮೊದಲ ಕಂತಿನಲ್ಲಿ 2500 ರೂ. ರಿಲೀಸ್
Dk Shivakumar
ರಮೇಶ್ ಬಿ. ಜವಳಗೇರಾ
|

Updated on:Nov 05, 2026 | 2:43 PM

Share

ಬೆಂಗಳೂರು, (ನವೆಂಬರ್ 05):  ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯದ ರೈತರಿಗೆ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೀಡಲಾಗುತ್ತಿದ್ದ ಮಧ್ಯಂತರ ಪರಿಹಾರದ ಮೊತ್ತವನ್ನು ದ್ವಿಗುಣಗೊಳಿಸಲಾಗಿದೆ. ಈ ಹಿಂದೆ ಘೋಷಿಸಿದ್ದ 2,500ಕ್ಕೆ ಹೆಚ್ಚುವರಿಯಾಗಿ ಮತ್ತೊಂದು 2,500 ಸೇರಿಸಿ ಪ್ರತಿ ರೈತನಿಗೆ ಒಟ್ಟು 5,000 ನೀಡುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.  ಇಂದು (ನವೆಂಬರ್ 05) ವಿಧಾನಸೌಧದಲ್ಲಿ ಡಿಕೆ ಶಿವಕುಮಾರ್ , ಯಾದಗಿರಿ ಜಿಲ್ಲೆಯ ರೈತರ ಖಾತೆಗೆ ಹಣ ಜಮೆ ಮಾಡುವ ಮೂಲಕ ಬರ ಪರಿಹಾರ ವಿತರಣೆಗೆ ಚಾಲನೆ ನೀಡಿದರು.

ಎರಡೂ ಎಕರೆಗಿಂತ ಹೆಚ್ಚಿದ್ದರೂ 5000 ರೂ.

ಬಟನ್ ಕ್ಲಿಕ್ ಮಾಡುವ ಮೂಲಕ ಕೊದಲ ಕಂತು 2500 ರೈತರ ಖಾತೆಗೆ ಡಿಬಿಟಿ ಹಣ ಪಾವತಿಗೆ ಚಾಲನೆ ನೀಡಿದರು. ಇದರೊಂದಿಗೆ ಪ್ರತಿ ಎಕರೆಗೆ 2500 ನಿಗದಿ ಮಾಡಿದ್ದು, ಎರಡು ಜಮೀನು ಎಕರೆಗಿಂತ ಹೆಚ್ಚು ಇದ್ದರೂ ಸಹ 5 ಸಾವಿರ ಫಿಕ್ಸ್ ಮಾಡಲಾಗಿದೆ. ಹೀಗಾಗಿ   ಎರಡು ಎಕರೆಗಿಂತ ಹೆಚ್ಚು ಜಮೀನು ಹೊಂದಿರುವ ರೈತರಿಗೂ ಹೆಚ್ಚುವರಿ ಹಣ ಸಿಗುವುದಿಲ್ಲ. ಜಮೀನಿನ ವಿಸ್ತೀರ್ಣ ಎಷ್ಟೇ ಇದ್ದರೂ ಒಬ್ಬ ರೈತನಿಗೆ ಒಟ್ಟು 5,000 ಮಾತ್ರ ಪರಿಹಾರವಾಗಿ ದೊರೆಯಲಿದೆ. ಮೊದಲ ಕಂತಿನಲ್ಲಿ 2,500 ಹಾಗೂ ನಂತರದ ಕಂತಿನಲ್ಲಿ ಉಳಿದ 2,500 ಪಾವತಿಯಾಗಲಿದೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು 2,500 ರೂ. ಬರ ಪರಿಹಾರ ಕೊಡುತ್ತಿದ್ದೇವೆ. ನಾವು ಹೇಳಿದಂತೆ 1,250 ಕೋಟಿ ರೂ. ಹಣ ಹಾಕುತ್ತಿದ್ದೇವೆ. ಡಿಬಿಟಿ ಮೂಲಕ ರೈತರ ಖಾತೆಗೆ ನೇರವಾಗಿ ಹಣ ಹೋಗಲಿದೆ. ದೀಪಾವಳಿ ಮುಗಿದ ಬಳಿಕ ಇನ್ನೂ 2,500 ರೂ. ಕೊಡುತ್ತೇವೆ. ಪ್ರತಿ ರೈತನಿಗೆ ಒಟ್ಟು 5,000 ರೂ. ನೀಡಲಾಗುತ್ತೆ ಎಂದರು.

57 ಲಕ್ಷ ರೈತರಿಗೆ ಪರಿಹಾರದ ಲಾಭ

ಇನ್ನೂ ಡಿಸಿಎಂ ಪರಮೇಶ್ವರ್‌ ಮಾತನಾಡಿ, ವಿಧಾನಸಭೆಯಲ್ಲಿ ನಾವು ಪ್ರತಿ ಎಕರೆಗೆ ಹೇಳಿರಲಿಲ್ಲ, ನಾವು ಪ್ರತಿ ರೈತನಿಗೆ ಅಂತ ಹೇಳಿದ್ದು, ಅದರರಂತೆ ಪ್ರತಿ ರೈತನಿಗೆ ಕೊಡುತ್ತೇವೆ. 57 ಲಕ್ಷ ರೈತರಿಗೆ ಫಲಾನುಭವಿಗಳು ಇದ್ದಾರೆ. ಮೊದಲ ಕಂತಿನ ಇನ್ಪುಟ್ ಸಬ್ಸಿಡಿ 2,500 ಹಣ ಬಿಡುಗಡೆ ಮಾಡಿದ್ದೇವೆ. ಇನ್ನೂ ಸ್ವಲ್ಪ ದಿನದ ನಂತರ ಎರಡನೇ ಕಂತಿನಲ್ಲಿ ಮತ್ತೆ 2,500 ರೂ. ಹಣ ಬಿಡುಗಡೆ ಮಾಡಲಿದ್ದೇವೆ. ಆ ಮೂಲಕ ಪ್ರತಿ ರೈತನಿಗೆ 5,000 ರೂ. ಪರಿಹಾರ ಸಿಗಲಿದೆ. ಒಟ್ಟು ಒಬ್ಬ ರೈತರಿಗೆ 5,000 ರೂ. ಇನ್ಪುಟ್ ಸಬ್ಸಿಡಿ ಪರಿಹಾರ ಬಿಡುಗಡೆ ಆಗಲಿದೆ.2 ಎಕ್ಕರೆಗಿಂತ ಜಾಸ್ತಿ ಭೂಮಿ ಇದ್ದರೂ 5 ಸಾವಿರ ಹಣ ಮಾತ್ರ ಸಿಗಲಿದೆ ಎಂದು‌ ಸ್ಪಷ್ಷಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:33 pm, Thu, 5 November 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​
ಪ್ರಿಯಾಂಕ್​​ ಖರ್ಗೆ ಹೇಳಿಕೆ ಖಂಡಿಸಿ ಜೆಡಿಎಸ್​​ನಿಂದ ಫ್ಲೆಕ್ಸ್​​
ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ
ಕಬ್ಬು ಬೆಳೆಗಾರರಿಂದ ಜೈಲ್ ಭರೋ ಚಳವಳಿ: ಬೆಳಗಾವಿಯಲ್ಲಿ ಹೈಡ್ರಾಮಾ
ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಏಳನೇ ದಿನವೂ ಸಾವಿರಾರು ಭಕ್ತರು
ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರ: ಏಳನೇ ದಿನವೂ ಸಾವಿರಾರು ಭಕ್ತರು
‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ: ವಿಡಿಯೋ
‘ರಾಮಾಯಣ’ ಸಿನಿಮಾ ನೋಡಿದ ಯಶ್ ಅಭಿಮಾನಿಗಳ ಖುಷಿಗೆ ಪಾರವೇ ಇಲ್ಲ: ವಿಡಿಯೋ
ನಂಜನಗೂಡಿನ ಆಕಳ ಸುತ್ತಮುತ್ತ ನಾಲ್ಕು ಹುಲಿಗಳ ಓಡಾಟ
ನಂಜನಗೂಡಿನ ಆಕಳ ಸುತ್ತಮುತ್ತ ನಾಲ್ಕು ಹುಲಿಗಳ ಓಡಾಟ
ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು
ಬೆಂಗಳೂರಲ್ಲಿ ಸುರಿದ ಧಾರಾಕಾರ ಮಳೆ: ಬಾರ್​​ಗೆ ನುಗ್ಗಿದ ನೀರು
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
‘ರಾಮಾಯಣ’ ಸಿನಿಮಾನ ಸಂಭ್ರಮಿಸಿದ ಫ್ಯಾನ್ಸ್; ಯಶ್ ನಟನೆಗೆ ಫುಲ್ ಮಾರ್ಕ್ಸ್
ಸೌಂದರ್ಯಾ-ಧನುಷ್​​ಗೆ ಓಪನ್ ಆಯ್ತು ಬಿಗ್ ಬಾಸ್ ಮುಖ್ಯದ್ವಾರ
ಸೌಂದರ್ಯಾ-ಧನುಷ್​​ಗೆ ಓಪನ್ ಆಯ್ತು ಬಿಗ್ ಬಾಸ್ ಮುಖ್ಯದ್ವಾರ
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ
ಶಾಲಾ ಕಟ್ಟಡದಲ್ಲಿ ಭಾರೀ ಪ್ರಮಾಣದ ಪಟಾಕಿ ಅಕ್ರಮ ದಾಸ್ತಾನು, ಜಪ್ತಿ