ಬೆಂಗಳೂರಿನ ಮೆಡಿಕಲ್​ ಶಾಪ್​ನಲ್ಲಿ ಡ್ರಗ್ಸ್ ಮಾರಾಟ: ಮಹಿಳೆ ಗಂಭೀರ ಆರೋಪ, ಜಿ.ಪರಮೇಶ್ವರ್ ಹೇಳಿದ್ದೇನು?

ಬೆಂಗಳೂರಿನಲ್ಲಿ ಮೆಡಿಕಲ್‌ ಅಂಗಡಿಗಳಲ್ಲಿ ಮಾದಕ ವಸ್ತುಗಳು ಮತ್ತು ಮಾತ್ರೆಗಳು ಸುಲಭವಾಗಿ ಲಭ್ಯವಿದ್ದು, ಇದರಿಂದ ಬಡ ಮಕ್ಕಳು ವ್ಯಸನಕ್ಕೆ ಒಳಗಾಗುತ್ತಿದ್ದಾರೆ ಎಂದು ಓರ್ವ ಮಹಿಳೆ ಆರೋಪಿಸಿದ್ದಾರೆ. ಇನ್ನು ಮೈಸೂರಿನಲ್ಲಿ ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೆಡಿಕಲ್​ ಶಾಪ್​ಗಳಲ್ಲಿ ಮಾತ್ರೆಗಳ ಮೂಲಕ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ ಎಂದಿದ್ದಾರೆ.

ಬೆಂಗಳೂರಿನ ಮೆಡಿಕಲ್​ ಶಾಪ್​ನಲ್ಲಿ ಡ್ರಗ್ಸ್ ಮಾರಾಟ: ಮಹಿಳೆ ಗಂಭೀರ ಆರೋಪ, ಜಿ.ಪರಮೇಶ್ವರ್ ಹೇಳಿದ್ದೇನು?
ಬೆಂಗಳೂರಿನ ಮೆಡಿಕಲ್​ ಶಾಪ್​ನಲ್ಲಿ ಡ್ರಗ್ಸ್ ಮಾರಾಟ: ಮಹಿಳೆ ಗಂಭೀರ ಆರೋಪ, ಜಿ.ಪರಮೇಶ್ವರ್ ಹೇಳಿದ್ದೇನು?
Follow us
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ

Updated on:Nov 18, 2024 | 1:48 PM

ಬೆಂಗಳೂರು, ನವೆಂಬರ್​ 18: ನಗರದಲ್ಲಿ ಮೆಡಿಕಲ್​ಗಳಲ್ಲಿ ಮಾದಕ ವಸ್ತು (Drugs), ಮತ್ತು ಬರುವ ಟ್ಯಾಬ್ಲೆಟ್, ಸಿರಿಂಜ್​​ ಲಭ್ಯವಾಗುತ್ತಿವೆ. ಇದರಿಂದ ಬಡ ಮಕ್ಕಳು ದಾರಿ ತಪ್ಪುತ್ತಿದ್ದಾರೆ. ಪೊಲೀಸರು ಸೂಕ್ತ ಕ್ರಮ ತರಗೆದುಕೊಳ್ಳುತ್ತಿಲ್ಲ. ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಓರ್ವ ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಹಿಳೆ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

ಸರ್ಕಾರ ವಿರುದ್ಧ ಮಹಿಳೆ ಕಿಡಿ

ಬೆಂಗಳೂರಿನ ತಿಲಕ್​ ನಗರ, ಆರಭ್ ನಗರ, ಬಿಸ್ಲಿಲ್ಲಾನಗರ, ಗೊರಂಪನ್​ಪಾಳ್ಯಾ, ಸಿದ್ದಾಪುರ, 9 ಬ್ಲಾಕ್ ಸುತ್ತಾನ್​ಪುರ್​ ನಗರದಲ್ಲಿ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ ಎಂದು ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಅಂಚೆ ಇಲಾಖೆ ಮೂಲಕ ಬೆಂಗಳೂರಿಗೆ ಬರ್ತಾಯಿದೆ ವಿದೇಶಿ ಡ್ರಗ್ಸ್​: 21 ಕೋಟಿ ರೂ ಮೌಲ್ಯದ ಡ್ರಗ್ಸ್ ವಶಕ್ಕೆ

ಮಕ್ಕಳು ಗಾಂಜಾ ಸೇವನೆ ಮಾಡುತ್ತಿದ್ದಾರೆ. ಮೆಡಿಕಲ್​ನಿಂದ ಮತ್ತು ಬರುವ ಟ್ಯಾಬ್ಲೆಟ್ ತೆಗೆದು ಸೇವನೆ ಮಾಡುತ್ತಿದ್ದಾರೆ. ಡ್ರಗ್ಸ್ ಮಟ್ಟ ಹಾಕುವಲ್ಲಿ ಪೊಲೀಸರು, ಸರ್ಕಾರ ವಿಫಲವಾಗುತ್ತಿದೆ ಎಂದು ವಿಡಿಯೋ ಮಾಡಿ ಮಹಿಳೆ ಆರೋಪಿಸಿದ್ದಾರೆ.

ಮೆಡಿಕಲ್​ ಶಾಪ್​ನಲ್ಲಿ ಡ್ರಗ್ಸ್ ಮಾರಾಟ ಒಪ್ಪಿಕೊಂಡ ಗೃಹ ಸಚಿವ

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ, ಗೃಹ ಸಚಿವ ಡಾ.ಜಿ.ಪರಮೇಶ್ವರ್​, ಮೆಡಿಕಲ್​ ಶಾಪ್​ಗಳಲ್ಲಿ ಮಾತ್ರೆಗಳ ಮೂಲಕ ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ. ಡ್ರಗ್ಸ್​ ವಿರುದ್ಧದ ಕಾರ್ಯಾಚರಣೆಯಲ್ಲಿ ವಿಶ್ರಮಿಸುವ ಪ್ರಶ್ನೆಯೇ ಇಲ್ಲ. ಇಡೀ ದೇಶದಲ್ಲಿ ಡ್ರಗ್ಸ್ ಮಾರಾಟ ಇದೆ ಎಂದು ಹೇಳಿದ್ದಾರೆ.​​​

ಡ್ರಗ್ಸ್​ ವಿರುದ್ಧ ನಮ್ಮ ಸರ್ಕಾರ ಸಮರ ಸಾರಿದೆ

ಆನೇಕಲ್ ಭಾಗದಲ್ಲಿ ಹೆಚ್ಚು ಡ್ರಗ್ಸ್ ಜಪ್ತಿ ಮಾಡಲಾಗುತ್ತಿದೆ. ಹೊರರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಡ್ರಗ್ಸ್​ ಪೂರೈಕೆ ಆಗುತ್ತಿದೆ. ಇದನ್ನು ನಮ್ಮ ಪೊಲೀಸರು ಪತ್ತೆ ಕ್ರಮಕೈಗೊಳ್ಳುತ್ತಿದ್ದಾರೆ. ಮೆಡಿಕಲ್ ಶಾಪ್​ಗಳಲ್ಲೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಡ್ರಗ್ಸ್​ ವಿರುದ್ಧ ನಮ್ಮ ಸರ್ಕಾರ ಸಮರ ಸಾರಿದೆ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಲೋಕಾಯುಕ್ತ ದಾಳಿ: ಸರ್ಕಾರಿ ಕಚೇರಿಯಲ್ಲಿ ಡ್ರಗ್ಸ್, ಗಾಂಜಾ, ಲಿಕ್ಕರ್​​​ ಬಾಟಲ್​ ಪತ್ತೆ

ಮಹಾರಾಷ್ಟ್ರದಲ್ಲಿ ಬಂದರುಗಳ ಮೂಲಕ ಹೆಚ್ಚು ಡ್ರಗ್ಸ್​​​​ ಬರುತ್ತಿದೆ. ಪ್ರತಿದಿನ ಯಾವುದೋ ರೂಪದಲ್ಲಿ ಡ್ರಗ್ಸ್ ಪೂರೈಕೆ ಆಗುತ್ತಿದೆ. ಏರ್​​ಪೋರ್ಟ್​ ಮೂಲಕವೂ ಡ್ರಗ್ಸ್ ಪೂರೈಕೆ ಆಗುತ್ತಿದೆ. ಆಂಧ್ರದ ವಿಶಾಖಪಟ್ಟಣದಲ್ಲಿ ಸಾವಿರ ಕೆಜಿ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:23 pm, Mon, 18 November 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ