ಹಣದ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ..
ಹಣದ ವಿಚಾರಕ್ಕೆ ಕುಡಿದ ಮತ್ತಿನಲ್ಲಿ ಇಬ್ಬರು ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದೆ. ಇಂತಹ ಭೀಕರ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ: ಹಣ ಅಂದ್ರೆ ಹೆಣಾನೂ ಬಾಯಿ ಬಿಡುತ್ತೆ ಎಂಬ ಗಾದೆ ಮಾತಿದೆ. ಹಣಕ್ಕಾಗಿ ಜನ ಯಾವ ಕೆಲಸ ಮಾಡಲೂ ಹಿಂದೆ ಮುಂದೆ ನೋಡಲ್ಲ. ಅದರಂತೆಯೇ ಹಣದ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ ಕಂಡಿದೆ. ಹಣಕ್ಕಾಗಿ ಇಬ್ಬರು ಸ್ನೇಹಿತರ ನಡುವೆ ಶುರುವಾಗಿದ್ದ ಜಗಳ ಕೊನೆಗೆ ಒಬ್ಬರು ಪ್ರಾಣ ಕಳೆದುಕೊಳ್ಳುವಂತಹ ಸ್ಥಿತಿಗೆ ತಂದು ನಿಲ್ಲಿಸಿದೆ.
ಕೋಲಾರ ಜಿಲ್ಲೆಯ ಮಾಲೂರು ಪಟ್ಟದ ಹಳೇ ಸರ್ಕಸ್ ಮೈದಾನದಲ್ಲಿ ಇಂತಹದೊಂದು ಭೀಕರ ಘಟನೆ ನಡೆದಿದ್ದು ಕೋಲಾರದ ಜನ ಬೆಚ್ಚಿ ಬಿದ್ದಿದ್ದಾರೆ. ಚೈನ್ ಬಾಬು (40) ಕೊಲೆಯಾದ ವ್ಯಕ್ತಿ. ಕಳೆದ ರಾತ್ರಿ ಕುಡಿದ ಮತ್ತಿನಲ್ಲಿ ಹಣದ ವಿಚಾರಕ್ಕೆ ಚೈನ್ ಬಾಬು ಮತ್ತು ಜಿಮ್ ಶಶಿ ನಡುವೆ ಗಲಾಟೆ ಶುರುವಾಗಿತ್ತು.
ಈ ವೇಳೆ ಇಬ್ಬರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಕೊನೆಗೆ ರೊಚ್ಚಿಗೆದ್ದ ಜಿಮ್ ಶಶಿ ಮಚ್ಚಿನಿಂದ ಭೀಕರವಾಗಿ ಕೊಚ್ಚಿ ಚೈನ್ ಬಾಬು ಹತ್ಯೆ ಮಾಡಿದ್ದಾನೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಜಿಮ್ ಶಶಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Published On - 8:52 am, Sun, 20 December 20