ಬೆಳ್ಳಂಬೆಳಿಗ್ಗೆ ಆರ್ ಟಿಒ ಇನ್ಸ್ಪೆಕ್ಟರ್ ನಿಂದ ಅವಘಡವೊಂದು ಸಂಭವಿಸಿದೆ. ಚಂದಾಪುರ ಆರ್ ಟಿಒ ಇನ್ಸ್ಪೆಕ್ಟರ್ ಆಗಿರುವ ಮಂಜುನಾಥ್ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸುತ್ತಿದ್ದು, ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದಿದ್ದಾನೆ.
ಬೆಳ್ಳಿಗೆ 11 ಗಂಟೆಯ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದ ಟಿಸಿಎಸ್ ಕಂಪನಿ ಬಳಿ ಈ ಘಟನೆ ಸಂಭವಿಸಿದ, ಅಲ್ಲೆ ನಿಂತಿದ್ದ ಆಟೋಗೆ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಆಟೋದಲ್ಲಿದ್ದ ಚಾಲಕ ಇಮ್ರಾನ್ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಖಂಡಿಸಿ ಆಟೋ ಚಾಲಕರಿಂದ ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಲಾಗುತ್ತಿದೆ. ಸದ್ಯ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಘಟನೆಯನ್ನು ಪರಿಶೀಲಿಸಿ ಮೈಮೇಲೆ ಪ್ರಜ್ಞೆ ಇಲ್ಲದಂತೆ ವರ್ತಿಸಿದ ಆರ್ ಟಿಒ ಇನ್ಸ್ಪೆಕ್ಟರ್ ಮಂಜುನಾಥ್ ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.