Karnataka Weather: ಕರ್ನಾಟಕದಾದ್ಯಂತ ಒಣಹವೆ, ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಏರಿಕೆ ಸಾಧ್ಯತೆ

|

Updated on: Oct 25, 2023 | 7:22 AM

ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಅಕ್ಟೋಬರ್ 29-30ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕದಾದ್ಯಂತ ಒಣಹವೆ, ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಏರಿಕೆ ಸಾಧ್ಯತೆ
ತಾಪಮಾನ
Image Credit source: Axial Financial Group
Follow us on

ಕರ್ನಾಟಕದಾದ್ಯಂತ ಒಣಹವೆ ಇರಲಿದ್ದು, ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಅಕ್ಟೋಬರ್ 29-30ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕಾರವಾರದಲ್ಲಿ 37.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಚಿಕ್ಕನಹಳ್ಳಿಯಲ್ಲಿ 14.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ವಿಜಯಪುರ, ದಕ್ಷಿಣ ಒಳನಾಡಿನ ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: Karnataka Rain: ರಾಜ್ಯಾದ್ಯಂತ ಒಣಹವೆ, ಅಕ್ಟೋಬರ್ 29ರಿಂದ ಎರಡು ದಿನಗಳ ಕಾಲ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಕೆಲವು ಕಡೆಗಳಲ್ಲಿ ಮಂಜು ಮುಸುಕುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ