Karnataka Weather: ಕರ್ನಾಟಕ ಹವಾಮಾನ ವರದಿ: ಚಳಿ ಶುರು, ಮುಂದಿನ ವಾರ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಶುರುವಾಗಿದೆ, ಹಾಗೆಯೇ ಒಣಹವೆ ಕೂಡ ಮುಂದುವರೆದಿದೆ. ಚಳಿ ಜತೆ ಜತೆಗೆ ಗರಿಷ್ಠ ತಾಪಮಾನದಲ್ಲಿ ಕೂಡ ಏರಿಕೆಯಾಗುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಅಕ್ಟೋಬರ್ 29 ರಿಂದ ನವೆಂಬರ್ 1ರವರೆಗೆ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಚಳಿImage Credit source: The News Minute
Follow us
ನಯನಾ ರಾಜೀವ್
|

Updated on: Oct 26, 2023 | 8:00 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಶುರುವಾಗಿದೆ, ಹಾಗೆಯೇ ಒಣಹವೆ ಕೂಡ ಮುಂದುವರೆದಿದೆ. ಚಳಿ ಜತೆ ಜತೆಗೆ ಗರಿಷ್ಠ ತಾಪಮಾನದಲ್ಲಿ ಕೂಡ ಏರಿಕೆಯಾಗುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಅಕ್ಟೋಬರ್ 29 ರಿಂದ ನವೆಂಬರ್ 1ರವರೆಗೆ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ.

ಕಾರವಾರದಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಚಿಕ್ಕನಹಳ್ಳಿಯಲ್ಲಿ 14.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಒಣಹವೆ, ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಏರಿಕೆ ಸಾಧ್ಯತೆ

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಉಷ್ಣಾಂಶ ಹೆಚ್ಚಿರಲಿದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ

ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್

ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್