Karnataka Weather: ಕರ್ನಾಟಕ ಹವಾಮಾನ ವರದಿ: ಚಳಿ ಶುರು, ಮುಂದಿನ ವಾರ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಶುರುವಾಗಿದೆ, ಹಾಗೆಯೇ ಒಣಹವೆ ಕೂಡ ಮುಂದುವರೆದಿದೆ. ಚಳಿ ಜತೆ ಜತೆಗೆ ಗರಿಷ್ಠ ತಾಪಮಾನದಲ್ಲಿ ಕೂಡ ಏರಿಕೆಯಾಗುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಅಕ್ಟೋಬರ್ 29 ರಿಂದ ನವೆಂಬರ್ 1ರವರೆಗೆ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Weather: ಕರ್ನಾಟಕ ಹವಾಮಾನ ವರದಿ: ಚಳಿ ಶುರು, ಮುಂದಿನ ವಾರ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಚಳಿ
Image Credit source: The News Minute

Updated on: Oct 26, 2023 | 8:00 AM

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಚಳಿ ಶುರುವಾಗಿದೆ, ಹಾಗೆಯೇ ಒಣಹವೆ ಕೂಡ ಮುಂದುವರೆದಿದೆ. ಚಳಿ ಜತೆ ಜತೆಗೆ ಗರಿಷ್ಠ ತಾಪಮಾನದಲ್ಲಿ ಕೂಡ ಏರಿಕೆಯಾಗುತ್ತಿರುವುದು ಜನರನ್ನು ಆತಂಕಕ್ಕೆ ದೂಡಿದೆ. ಅಕ್ಟೋಬರ್ 29 ರಿಂದ ನವೆಂಬರ್ 1ರವರೆಗೆ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಮಾನ್ಯಕ್ಕಿಂತ 1-2 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಗದಗ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ಕೋಲಾರ, ವಿಜಯನಗರ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗಲಿದೆ.

ಕಾರವಾರದಲ್ಲಿ 35.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಚಿಕ್ಕನಹಳ್ಳಿಯಲ್ಲಿ 14.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದಾದ್ಯಂತ ಒಣಹವೆ, ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್​ನಷ್ಟು ಏರಿಕೆ ಸಾಧ್ಯತೆ

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಉಷ್ಣಾಂಶ ಹೆಚ್ಚಿರಲಿದೆ. ಎಚ್​ಎಎಲ್​ನಲ್ಲಿ 30.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us