AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ, ನವೆಂಬರ್ 15 ರಿಂದ 5 ದಿನಗಳ ಕಾಲ ಮಳೆ

ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 15 ರಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ವಿಜಯಪುರದಲ್ಲಿ 15.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ.

Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ, ನವೆಂಬರ್ 15 ರಿಂದ 5 ದಿನಗಳ ಕಾಲ ಮಳೆ
ಮಳೆImage Credit source: Udayavani
ನಯನಾ ರಾಜೀವ್
|

Updated on: Nov 13, 2023 | 7:27 AM

Share

ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 15 ರಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ವಿಜಯಪುರದಲ್ಲಿ 15.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮೋಡ ಕವಿದ ವಾತಾವರಣವಿರಲಿದೆ, ಎರಡು ದಿನದ ಬಳಿಕ ಮಳೆ ಕಾಣಿಸಿಕೊಳ್ಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಎಚ್​ಎಎಲ್​ನಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 16ರಿಂದ ಎರಡು ದಿನ ಮಳೆ, ಉಳಿದೆಡೆ ಒಣಹವೆ

ಹವಾಮಾನ ಇಲಾಖೆ ಪ್ರಕಾರ ಇದೇ 14ರ ವೇಳೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ 14 ಮತ್ತು 15ರಂದು ತಮಿಳುನಾಡಿನ 9 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಮತ್ತು ಪೂರ್ವ ಮಾರುತಗಳ ವೇಗದಲ್ಲಿನ ಬದಲಾವಣೆಯಿಂದಾಗಿ ಇಂದು ಮತ್ತು ನಾಳೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮೇಲೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಮನಾಥಪುರಂ, ಪುದುಕೊಟ್ಟೈ ತಂಜಾವೂರು, ತಿರುವಾರೂರ್. ನಾಗಪಟ್ಟಣಂ, ಮೈಲಾಡುತುರೈ, ಕಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಒಂದೋ ಎರಡೋ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ಮುಂದಿನ 24 ಗಂಟೆಗಳ ಕಾಲ ಆಕಾಶವು ಭಾಗಶಃ ಮೋಡವಾಗಿರುತ್ತದೆ. ನಗರದ ಕೆಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 32-33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ  ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಗದಗದಲ್ಲಿ ಎಂಎಲ್‌ಸಿ ಎಲೆಕ್ಷನ್ ಹೈಡ್ರಾಮಾ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಡಿಕೆಶಿಯನ್ನು ತಾನು ಸಿಎಂ ಎಂದು ಒಪ್ಪಲ್ಲ ಎಂದ ಕುಮಾರಸ್ವಾಮಿ: ಕಾರಣ ಇಲ್ಲಿದೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಮಾಂಜಾ ದಾರ ಬಳಸದಂತೆ ಬೆಳಗಾವಿ ಎಸ್​ಪಿ ರಾಮರಾಜನ್ ಖಡಕ್ ಎಚ್ಚರಿಕೆ
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಅಂಬೇಡ್ಕರ್ ಕಾಲೇಜು ಮತಗಟ್ಟೆ ಬಳಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಗಲಾಟೆ!
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ  ಹಿರಿಯ ಪತ್ರಕರ್ತನಿಗೆ ಸಿಸಿಬಿ ಗ್ರಿಲ್​​
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕೆಎಸ್ಒಯು ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಂದ ಹಣ ಪಡೆದು ಮಾಸ್ ಕಾಪಿ!
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ
ಕರ್ನಾಟಕ ಸ್ಟಿಂಗ್ ಸಮರ ಹೈಕಮಾಂಡ್ ಅಂಗಳಕ್ಕೆ