ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 15 ರಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ವಿಜಯಪುರದಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಒಣಹವೆ ಇರಲಿದ್ದು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮೋಡ ಕವಿದ ವಾತಾವರಣವಿರಲಿದೆ, ಎರಡು ದಿನದ ಬಳಿಕ ಮಳೆ ಕಾಣಿಸಿಕೊಳ್ಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಎಚ್ಎಎಲ್ನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 16ರಿಂದ ಎರಡು ದಿನ ಮಳೆ, ಉಳಿದೆಡೆ ಒಣಹವೆ
ಹವಾಮಾನ ಇಲಾಖೆ ಪ್ರಕಾರ ಇದೇ 14ರ ವೇಳೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ 14 ಮತ್ತು 15ರಂದು ತಮಿಳುನಾಡಿನ 9 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ಮತ್ತು ಪೂರ್ವ ಮಾರುತಗಳ ವೇಗದಲ್ಲಿನ ಬದಲಾವಣೆಯಿಂದಾಗಿ ಇಂದು ಮತ್ತು ನಾಳೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮೇಲೆ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಮನಾಥಪುರಂ, ಪುದುಕೊಟ್ಟೈ ತಂಜಾವೂರು, ತಿರುವಾರೂರ್. ನಾಗಪಟ್ಟಣಂ, ಮೈಲಾಡುತುರೈ, ಕಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು ಜಿಲ್ಲೆಗಳು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶಗಳಲ್ಲಿ ಒಂದೋ ಎರಡೋ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ.
ಮುಂದಿನ 24 ಗಂಟೆಗಳ ಕಾಲ ಆಕಾಶವು ಭಾಗಶಃ ಮೋಡವಾಗಿರುತ್ತದೆ. ನಗರದ ಕೆಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 32-33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ