ತಾಂತ್ರಿಕ ಸಮಸ್ಯೆ: ಮೆಟ್ರೋ ಹಳದಿ ಮಾರ್ಗದ ರೈಲಿನ ಸಂಚಾರದಲ್ಲಿ ವ್ಯತ್ಯಯ

ಒಂದು ರೈಲಿನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆ ಮೆಟ್ರೋ ಹಳದಿ ಮಾರ್ಗದ ರೈಲು ಸಂಚಾರದಲ್ಲಿ ವ್ಯತ್ಯಯ ಕಂಡುಬಂದಿದೆ. ಪ್ರತಿ 19 ನಿಮಿಷಗಳ ಬದಲಾಗಿ 25 ನಿಮಿಷಗಳಿಗೆ ಒಂದರಂತೆ ರೈಲು ಸಂಚರಿಸುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಅಧಿಕಾರಿಗಳ ಮಾಹಿತಿ ನೀಡಿದ್ದಾರೆ.

ತಾಂತ್ರಿಕ ಸಮಸ್ಯೆ: ಮೆಟ್ರೋ ಹಳದಿ ಮಾರ್ಗದ ರೈಲಿನ ಸಂಚಾರದಲ್ಲಿ ವ್ಯತ್ಯಯ
ನಮ್ಮ ಮೆಟ್ರೋ

Updated on: Oct 12, 2025 | 12:52 PM

ಬೆಂಗಳೂರು, ಅಕ್ಟೋಬರ್​ 12: ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲು (Namma Metro) ಸಂಚಾರದಲ್ಲಿ ವ್ಯತ್ಯಯ ಕಂಡುಬಂದಿದೆ. ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರ ನಡುವೆ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು, ಹಳದಿ ಮಾರ್ಗದಲ್ಲಿ ಸಂಚರಿಸುವ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನಲೆ ಸಮಸ್ಯೆ ಆಗಿದೆ. ಹೀಗಾಗಿ ಹಳದಿ ಮಾರ್ಗದಲ್ಲಿ ಪ್ರತಿ 25 ನಿಮಿಷಕ್ಕೊಮ್ಮೆ ರೈಲು ಸಂಚರಿಸುತ್ತಿದೆ. ಸಾಮಾನ್ಯವಾಗಿ ಪ್ರತಿದಿನ ಪ್ರತಿ 19 ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸುತ್ತಿದ್ದವು.

ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರದ ನಡುವಿನ ಹಳದಿ ಮಾರ್ಗದಲ್ಲಿ ಒಟ್ಟು 4 ರೈಲುಗಳು ಸಂಚಾರ ನಡೆಸುತ್ತಿದ್ದವು. ಆ ಪೈಕಿ 1 ರೈಲಿನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿರುವ ಕಾರಣ ಈಗ 3 ಮೆಟ್ರೋ ರೈಲುಗಳು ಮಾತ್ರ ಓಡಾಟ ನಡೆಸುತ್ತಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

BMRCL ಮಾಹಿತಿ

ಶೀಘ್ರ 5ನೇ ರೈಲಿನ ಸಂಚಾರ

ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟಿಸಲ್ಪಟ್ಟಿದ್ದ ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಶೀಘ್ರ ಮತ್ತೊಂದು ಹೊಸ ರೈಲಿನ ಸೇರ್ಪಡೆ ಆಗಲಿದೆ. ಆ ಮೂಲಕ ಸಂಚರಿಸಲಿರುವ ರೈಲುಗಳ ಸಂಖ್ಯೆಯನ್ನು 5ಕ್ಕೆ ಏರಿಸಲು BMRCL ಮುಂದಾಗಿದೆ. ಆರಂಭದಲ್ಲಿ 3 ಮೆಟ್ರೋ ರೈಲುಗಳಷ್ಟೇ ಈ ಮಾರ್ಗದಲ್ಲಿ ಸಂಚಾರ ನಡೆಸುತ್ತಿದ್ದವು. ಆ ಬಳಿಕ ಸೆಪ್ಟೆಂಬರ್ 10ರಂದು ರೈಲಿನ ಸಂಖ್ಯೆಯನ್ನು ನಾಲ್ಕಕ್ಕೆ ಏರಿಸಲಾಗಿತ್ತು. ಹೊಸದಾಗಿ ಸೇರ್ಪಡೆಯಾಗಲಿರುವ 5ನೇ ರೈಲಿನ ಬೊಗಿಗಳು ಕೋಲ್ಕತ್ತಾದ ಟೀಟಾಘರ್ ರೈಲ್ವೇ ಸಿಸ್ಟಮ್ ಲಿಮಿಟೆಡ್​ನಿಂದ ಹೊರಟು ಸೆಪ್ಟೆಂಬರ್ 19 ರಂದೇ ಬೆಂಗಳೂರನ್ನು ಈಗಾಗಲೇ ತಲುಪಿವೆ. ಎಲ್ಲಾ ಬೋಗಿಗಳ ಜೋಡಣೆಯಾದ ಬಳಿಕ 20 ದಿನಗಳ ಪರೀಕ್ಷೆ ನಡೆದು ಅಂತಿಮವಾಗಿ ರೈಲಿನ ಸಂಚಾರ ಅಧಿಕೃತವಾಗಿ ಆರಂಭವಾಗಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:29 pm, Sun, 12 October 25