ಆರೋಗ್ಯ ಸಚಿವರ ಉಸ್ತುವಾರಿ ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ನಾಲ್ಕು ದಿನ ಕಟ್ಟುನಿಟ್ಟಿನ ಲಾಕ್‌ಡೌನ್
ಆರೋಗ್ಯ ಸಚಿವರ ಉಸ್ತುವಾರಿ ಜಿಲ್ಲೆ ಚಿಕ್ಕಬಳ್ಳಾಪುರ ನಾಲ್ಕು ದಿನ ಕಟ್ಟುನಿಟ್ಟಿನ ಲಾಕ್‌ಡೌನ್: ರಾಜ್ಯ ಆರೋಗ್ಯ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಸೂಚನೆ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾ ಅವರು ಈ ಆದೇಶ ಹೊರಡಿಸಿದ್ದಾರೆ.
ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿಗೆ ಅಂಟಿಕೊಂಡಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಕಾಟದಿಂದ 4 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಆದರೆ ಅದಕ್ಕೂ ಮುನ್ನ ಮೂರು ದಿನ ಗ್ಯಾಪ್ ನೀಡಲಾಗಿದೆ. ಮೇ 20ರಿಂದ ಮೇ 23ರವರೆಗೂ ಜಿಲ್ಲೆಯಾದ್ಯಂತ ಲಾಕ್‌ಡೌನ್ ಜಾರಿಯಲ್ಲಿರುತ್ತದೆ.
ರಾಜ್ಯ ಆರೋಗ್ಯ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಸೂಚನೆ ಮೇರೆಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾ ಅವರು ಈ ಆದೇಶ ಹೊರಡಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ 4 ದಿನಗಳ ಕಾಲ ಜಿಲ್ಲೆ ಸಂಪೂರ್ಣ ಲಾಕ್ ಡೌನ್ ಆಗಲಿದೆ. ಮೆಡಿಕಲ್ ಶಾಪ್ ಮತ್ತು ಆಸ್ಪತ್ರೆಗಳಿಗೆ ಮಾತ್ರ ಲಾಕ್ ಡೌನ್ ನಿಂದ ವಿನಾಯಿತಿ ಇರುತ್ತದೆ. ಹಾಲಿನ ಬೂತ್ ಗಳಿಗೆ ಬೆಳಗ್ಗೆ 6 ರಿಂದ 10 ಗಂಟೆವರೆಗೂ ಮಾತ್ರ ಅವಕಾಶ ನೀಡಲಾಗಿದೆ. ಜಿಲ್ಲೆಯಾದ್ಯಂತ ಕೃಷಿ, ಮೆಡಿಕಲ್, ಪುಡ್ ಪ್ರೋಸ್ಸಿಸಿಂಗ್, ಪಿ.ಪಿ.ಇ ಕಿಟ್ ಉತ್ಪಾದನಾ ಕೈಗಾರಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಅಂತರ್ ಜಿಲ್ಲೆ, ಅಂತರ್ ರಾಜ್ಯ ಜಿಲ್ಲೆಯ ಪ್ರಯಾಣ ಸಂಪೂರ್ಣ ಬಂದ್ ಆಗಲಿದೆ. ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಅವಕಾಶವಿರುತ್ತದೆ.
(due to coronavirus lockdown to be imposed in chikkaballapur district for 4 days says dc r latha)
Published On - 2:42 pm, Mon, 17 May 21