ಹುಬ್ಬಳ್ಳಿಯಲ್ಲಿ ದಟ್ಟ ಮಂಜು: ವಿಮಾನಕ್ಕೆ ಲ್ಯಾಂಡಿಂಗ್‌ ಸಮಸ್ಯೆ, ಸಿಎಂ ಬೊಮ್ಮಾಯಿ ಹೇಳಿದ್ದೇನು?

| Updated By: ಸಾಧು ಶ್ರೀನಾಥ್​

Updated on: Dec 10, 2021 | 9:15 AM

ಹುಬ್ಬಳ್ಳಿಯಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇರುವ ವಿಮಾನ ಲ್ಯಾಂಡಿಂಗ್‌ಗೆ ಸಮಸ್ಯೆಯಾಗಿದೆ. ಸಿಎಂ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾರೆ. ಇಬ್ಬರೂ ನಾಯಕರು ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದಾರೆ.

ಹುಬ್ಬಳ್ಳಿಯಲ್ಲಿ ದಟ್ಟ ಮಂಜು: ವಿಮಾನಕ್ಕೆ ಲ್ಯಾಂಡಿಂಗ್‌ ಸಮಸ್ಯೆ, ಸಿಎಂ ಬೊಮ್ಮಾಯಿ ಹೇಳಿದ್ದೇನು?
ಹುಬ್ಬಳ್ಳಿಯಲ್ಲಿ ದಟ್ಟ ಮಂಜು: ವಿಮಾನಕ್ಕೆ ಲ್ಯಾಂಡಿಂಗ್‌ ಸಮಸ್ಯೆ, ಸಿಎಂ ಬೊಮ್ಮಾಯಿ ಹೇಳಿದ್ದೇನು?
Follow us on

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ದಟ್ಟ ಮಂಜು ಆವರಿಸಿರುವ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇರುವ ವಿಮಾನ ಲ್ಯಾಂಡಿಂಗ್‌ಗೆ ಸಮಸ್ಯೆಯಾಗಿದೆ. ಸಿಎಂ ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದಾರೆ. ಇಬ್ಬರೂ ನಾಯಕರು ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದಾರೆ. ಅರ್ಧ ಗಂಟೆ ಆದ್ರೂ ಲ್ಯಾಂಡಿಂಗ್‌ಗೆ ಕ್ಲಿಯರೆನ್ಸ್ ಸಿಕ್ಕಿಲ್ಲ. ಹೀಗಾಗಿ ಸಿ ಎಂ ಬೊಮ್ಮಾಯಿ, ಕೇಂದ್ರ ಸಚಿವರು ಇರುವ ಇಂಡಿಗೋ ವಿಮಾನ ಆಕಾಶದಲ್ಲೇ 3 ಸುತ್ತು ಸುತ್ತು ಹಾಕಿದೆ. ಇದರಿಂದ ಮೇಲೆಯೇ ಹಾರಾಟ ನಡೆಸಿದರೆ ಇಂಧನ ಖಾಲಿಯಾಗುವ ಆತಂಕ ಎದುರಾಗಿತ್ತು. ಈ ಆತಂಕದ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆದರೆ ಕೊನೆಯ ಘಳಿಗೆಯಲ್ಲಿ ವಿಮಾನ ಮಂಗಳೂರಿನತ್ತ ತೆರಳಿಲ್ಲ.

ಕೊನೆಗೂ ಸೇಫ್ ಆಗಿ ಲ್ಯಾಂಡ್‌ ಆಯ್ತು:
ತಾಜಾ ವರದಿಗಳ ಪ್ರಕಾರ ಅರ್ಧ ಘಂಟೆಯ ಬಳಿಕ ವಿಮಾನ ಲ್ಯಾಂಡ್ ಆಗಿದೆ. ನಾಲ್ಕೈದು ಸುತ್ತು ಆಕಾಶದಲ್ಲಿ ಸುತ್ತಾಡಿ ಸೇಫ್ ಆಗಿ ಲ್ಯಾಂಡ್‌ ಆಗಿದೆ. ದಟ್ಟ ಮಂಜು ಒಂದಷ್ಟು ಕರಗಿದ ಬಳಿಕ ಕ್ಲಿಯರೆನ್ಸ್ ಸಿಕ್ಕಿದೆ. ಸದ್ಯ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.

ಸಿಎಂ ಬೊಮ್ಮಾಯಿ ಅವರು ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಶಿಗ್ಗಾಂವಿಗೆ ಪ್ರಯಾಣ ಬೆಳೆಸಲಿದ್ದಾರೆ. ಪರಿಷತ್​ ಚುನಾವಣೆಯಲ್ಲಿ ಮತದಾನ ಮಾಡಲಿರುವ ಸಿಎಂ ಬೊಮ್ಮಾಯಿ, ಮತದಾನದ ನಂತರ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.​

ಪರಿಷತ್ ಏಲೆಕ್ಷನ್ ಹಿನ್ನೆಲೆ ಮತ ಹಾಕಲು ಶಿಗ್ಗಾಂವಿಗೆ ತೆರಳುತ್ತಿದ್ದೇನೆ:
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ವಿಮಾನ ತಡವಾಯಿತು ಎಂದರು. ಇವತ್ತು ಪರಿಷತ್ ಏಲೆಕ್ಷನ್ ಹಿನ್ನೆಲೆಯಲ್ಲಿ ಮತ ಹಾಕಲು ಶಿಗ್ಗಾಂವಿಗೆ ತೆರಳುತ್ತಿದ್ದೇನೆ. ಕ್ರಿಸಮಸ್ ಹಾಗೂ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸುವ ಬಗ್ಗೆ ಸದ್ಯಕ್ಕೆ ಇನ್ನೂ ತೀರ್ಮಾನ ಮಾಡಿಲ್ಲ. ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಆಗೇ ಆಗುತ್ತೆ. ಬೆಳಗಾವಿ ಅಧಿವೇಶ ಅಂದ್ರೆ ಈ ಭಾಗದ ಸಮಸ್ಯೆಗಳ ಮತ್ತು ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಆಗುತ್ತದೆ ಎಂದು ಹೇಳಿದರು.

Vidhanaparishat Election: ವಿಮಾನ ಲ್ಯಾಂಡಿಂಗ್​ ಸಮಸ್ಯೆ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು? |Tv9Kannada

ಇದನ್ನೂ ಓದಿ:

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಆರೋಗ್ಯ ವಿಚಾರಿಸಿದ ರಾಜ್ಯಪಾಲ ಗೆಹ್ಲೋಟ್ ಮತ್ತು ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ:

ಬೆಂಗಳೂರು ತಲುಪಿದ ಗ್ರೂಪ್​ ಕ್ಯಾಪ್ಟನ್ ವರುಣ್​ ಸಿಂಗ್​ ಅವರಿರುವ ಏರ್​ ಆಂಬುಲೆನ್ಸ್

Published On - 8:08 am, Fri, 10 December 21