
ಬೆಂಗಳೂರು: ಕೆ.ಆರ್.ಮಾರ್ಕೆಟ್ನ ಖಾಸಿಗ ಕಾಂಪ್ಲೆಕ್ಸ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡದ 4ನೇ ಮಹಡಿಯಲ್ಲಿರುವ ಟ್ರಾನ್ಸ್ ಪೋರ್ಟ್ ಕಚೇರಿಯಲ್ಲಿ ಕಾಣಿಸಿಕೊಂಡ ಬೆಂಕಿ ಸ್ಥಳೀಯರಲ್ಲಿ ಭಾರಿ ಅತಂಕ ಸೃಷ್ಟಿಸಿದೆ. ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಕಚೇರಿಯಲ್ಲಿ ದಟ್ಟ ಹೊಗೆ ಆವರಿಸಿದೆ.
ಹೀಗಾಗಿ ಬೆಂಕಿ ನಂದಿಸಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಯುಪಿಎಸ್ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.