Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ

Facebook fraud: ರವಿ ಎಂಬ ವ್ಯಕ್ತಿಗೆ ವಂಚನೆ ಮಾಡಲು ಮುಂದಾದ ಮೇಘಾ ಅಲಿಯಾಸ್​ ಹರಿಣಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಆತನು ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿದ ಮೇಲೆ ವಂಚನೆಗಿಳಿದಿದ್ದಾಳೆ. ತಮ್ಮ ತಂದೆಗೆ 2 ಪೆಟ್ರೋಲ್ ಬಂಕ್ ಮತ್ತು ಬಾರ್ ಗಳು ಇರುವುದಾಗಿ ಹೇಳಿ, ಲಕ್ಷಾಂತರ ಹಣ ಪಡೆದು ವಂಚಿಸಿದ್ದಾಳೆ.

ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ
ಮೈಸೂರು: ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ಲಕ್ಷಾಂತರ ರೂ ವಂಚಿಸಿದ್ದ ಮೇಟಗಳ್ಳಿ ಯುವತಿ ಸೆರೆ
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:Mar 17, 2021 | 12:02 PM

ಮೈಸೂರು: ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿರುವ ಫೇಸ್‌ಬುಕ್​ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿ ವಂಚಿಸುವ ಪ್ರಕರಣಗಳು ದಿನೆದಿನೇ ಹೆಚ್ಚಾಗುತ್ತಿವೆ. ಉನ್ನತ ಪೊಲೀಸ್​ ಅಧಿಕಾರಿಗಳಿಂದ ಹಿಡಿದು ಆಡಳಿತಾರೂಢ ಜನಪ್ರತಿನಿಧಿಗಳಿಗೂ ಫೇಸ್‌ಬುಕ್​ನಲ್ಲಿ ವಂಚನೆ ಪ್ರಕರಣಗಳು ಕಾಡತೊಡಗಿವೆ. ತಾಜಾ ಪ್ರಕರಣದಲ್ಲಿ ಮೈಸೂರಿನಲ್ಲಿ ಯುವತಿಯೊಬ್ಬಳು ನಕಲಿ ಖಾತೆ ತೆರೆದು ಜನರ ಅಸಲಿ ಖಾತೆಗೆ ಕನ್ನಹಾಕಿದ್ದಾಳೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಮೇಘಾ ಅಲಿಯಾಸ್​ ಹರಿಣಿ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ.

ಮೇಘಾ ಅಲಿಯಾಸ್​ ಹರಿಣಿ ಫೇಸ್‌ಬುಕ್ ನಲ್ಲಿ ನಕಲಿ ಪ್ರೊಫೈಲ್ ಸೃಷ್ಟಿಸಿಕೊಂಡು ಯುವಕರಿಗೆ ವಂಚನೆ ಮಾಡುತ್ತಿದ್ದಳು. ಈ ವಂಚನೆ ಪುರಾಣದಲ್ಲಿ ಲಕ್ಷಾಂತರ ರೂಪಾಯಿ ಹಣ ಹಾಗೂ ಆಭರಣಗಳನ್ನು ಲಪಟಾಯಿಸಿರುವುದೂ ಪತ್ತೆಯಾಗಿದೆ. ಯುವತಿ ಚಿನ್ನು ಗೌಡ ಎಂಬ ಹೆಸರಿನಲ್ಲಿ ನಕಲಿ ಪ್ರೊಫೈಲ್‌ ಸೃಷ್ಟಿಸಿಕೊಂಡು ವಂಚನೆಯಲ್ಲಿ ತೊಡಗಿದ್ದಳು. ಮೇಟಗಳ್ಳಿ ಪೊಲೀಸರ ಸಕಾಲಿಕ ಕಾರ್ಯಾಚರಣೆ ಮೂಲಕ ಯುವತಿ ಈಗ ಪೊಲೀಸ್​ ಬಂಧನದಲ್ಲಿದ್ದಾಳೆ.

Facebook fraud in mysore

ಮೇಘಾ ಅಲಿಯಾಸ್​ ಹರಿಣಿ

ರವಿ ಎಂಬ ವ್ಯಕ್ತಿಗೆ ವಂಚನೆ ಮಾಡಲು ಮುಂದಾದ ಮೇಘಾ ಅಲಿಯಾಸ್​ ಹರಿಣಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ಆತನು ರಿಕ್ವೆಸ್ಟ್ ಅನ್ನು ಅಕ್ಸೆಪ್ಟ್ ಮಾಡಿದ ಮೇಲೆ ವಂಚನೆಗಿಳಿದಿದ್ದಾಳೆ. ಬೇರೆಯವರ ಫೋಟೋಗಳನ್ನು ತನ್ನದೇ ಫೋಟೋ ಎಂದು ಕಳುಹಿಸಿ ಪರಿಚಯ ಮಾಡಿಕೊಂಡಿದ್ದಾಳೆ. ತಮ್ಮ ತಂದೆಗೆ 2 ಪೆಟ್ರೋಲ್ ಬಂಕ್ ಮತ್ತು ಬಾರ್​ಗಳು ಇರುವುದಾಗಿ ಹೇಳಿ, ಲಕ್ಷಾಂತರ ಹಣ ಪಡೆದು ವಂಚಿಸಿದ್ದಾಳೆ. ಪ್ರಕರಣ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಇದನ್ನೂ ಓದಿ: ಫೇಸ್​ಬುಕ್​ ಸ್ನೇಹಿತನ ಜೊತೆ ಪ್ರೀತಿಗೆ ಬಿದ್ದಿದ್ದ ಯುವತಿ ಅವನದೇ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Published On - 11:03 am, Wed, 17 March 21

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ