ಕಾಂಗ್ರೆಸ್ ಕೇವಲ ಆರೋಪ ಮಾಡ್ತಿದೆ, ಜೆಡಿಎಸ್ ಕ್ವಾರಂಟೈನ್​​ನಲ್ಲಿದೆ, ಯಡಿಯೂರಪ್ಪ ಸರ್ಕಾರ ಮಾತ್ರ ಫೀಲ್ಡ್​​ನಲ್ಲಿದೆ: ಅರುಣ್ ಸಿಂಗ್ ವ್ಯಾಖ್ಯಾನ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಸಂಪುಟದ ಸಚಿವರ ಜೊತೆ ಅರುಣ್​ ಸಿಂಗ್ ಇಂದು ಸಂಜೆ ಸಭೆ ನಡೆಸಲಿದ್ದಾರೆ. ಹಾಗಾಗಿ ಇದುವರೆಗೆ ಬಿಜೆಪಿ ಕಚೇರಿಗೆ 31 ಸಚಿವರು ಆಗಮಿಸಿದ್ಬೆಂದಾರೆ. ಆದರೆ ಸಚಿವ ಸಿ.ಪಿ.ಯೋಗೇಶ್ವರ್ ಸಭೆಗೆ ಇನ್ನೂ ಬಂದಿಲ್ಲ. ನಿನ್ನೆ ಹೈದರಾಬಾದ್‌ಗೆ ತೆರಳಿದ್ದ ಸಚಿವ ಸಿ.ಪಿ.ಯೋಗೇಶ್ವರ್ ಅವರು ಹೈದರಾಬಾದ್‌ನಿಂದ ದೆಹಲಿಗೆ ತೆರಳಿದ್ದರು.

ಕಾಂಗ್ರೆಸ್ ಕೇವಲ ಆರೋಪ ಮಾಡ್ತಿದೆ, ಜೆಡಿಎಸ್ ಕ್ವಾರಂಟೈನ್​​ನಲ್ಲಿದೆ, ಯಡಿಯೂರಪ್ಪ ಸರ್ಕಾರ ಮಾತ್ರ  ಫೀಲ್ಡ್​​ನಲ್ಲಿದೆ: ಅರುಣ್ ಸಿಂಗ್ ವ್ಯಾಖ್ಯಾನ
ಅರುಣ್​ ಸಿಂಗ್​
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jun 16, 2021 | 6:00 PM

ಬೆಂಗಳೂರು: ನಾನು 3 ದಿನಗಳ ರಾಜ್ಯ ಪ್ರವಾಸಕ್ಕೆ ಬಂದಿದ್ದೇನೆ. ಈ ಸಂಧರ್ಭದಲ್ಲಿ ಪಕ್ಷ ಸಂಘಟನೆ, ರಾಜ್ಯದಲ್ಲಿ ಕೊವಿಡ್ ನಿರ್ವಹಣೆ ವಿಚಾರದ ಬಗ್ಗೆ ಚರ್ಚಿಸುತ್ತೇನೆ. ಕೊವಿಡ್ ವಿಚಾರದ ಬಗ್ಗೆ ಸಿಎಂ ಮತ್ತು ಸಚಿವರ ಜತೆ ಚರ್ಚಿಸುವೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಪಕ್ಷದ ವಿದ್ಯಮಾನಗಳ ಕೆಲಸ ಇದೆ. ಮೂರು ದಿನಗಳ ಕಾರ್ಯಕ್ರಮ ಇದೆ. ಶಾಸಕರು, ಸಚಿವರ ಜೊತೆ ಪ್ರತ್ಯೇಕವಾಗಿ ಚರ್ಚಿಸುತ್ತೇನೆ. BSY ನೇತೃತ್ವದಲ್ಲಿ ಸರ್ಕಾರ ಸಮರ್ಥವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಇದನ್ನು ಪದೇಪದೆ ಹೇಳುವ ಅಗತ್ಯವಿಲ್ಲ ಎಂದು ಅರುಣ್ ಸಿಂಗ್ ಪುನರುಚ್ಚರಿಸಿದರು.

ಸರ್ಕಾರದ ಕೊರೊನಾ ಸಾಂಕ್ರಾಮಿಕ ನಿರ್ವಹಣೆಯಲ್ಲಿ ಹಗಲು ರಾತ್ರಿ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರ ಒಂದು ಲಕ್ಷ ರೂ. ಪರಿಹಾರ ಕೊಟ್ಟಿದೆ. ಮಾಧ್ಯಮಗಳ ಮುಂದೆ ಇದೆಲ್ಲ ಹೇಳಿಕೆ ನೀಡಬಾರದು. ಪದೇ ಪದೇ ಹೇಳುವ ಅಗತ್ಯ ಇಲ್ಲ. ಯಡಿಯೂರಪ್ಪ ನೇತೃತ್ವದಲ್ಲಿ ಒಳ್ಳೆಯ ಕೆಲಸ ಆಗ್ತಿದೆ. ಪಕ್ಷದ ಕಾರ್ಯಕರ್ತರು, ಶಾಸಕರು, ಸಚಿವರು ಎಲ್ಲರೂ ಒಂದೇ ಅಂತಾ ಅರುಣ್ ಸಿಂಗ್ ಹೇಳಿದರು.

ಕಾಂಗ್ರೆಸ್ ಕೇವಲ ಆರೋಪ ಮಾಡ್ತಿದೆ, ಜೆಡಿಎಸ್ ಕ್ವಾರಂಟೈನ್​​ನಲ್ಲಿದೆ

ಕೊವಿಡ್ ವಿಚಾರದಲ್ಲಿ ವಿಪಕ್ಷ ಕಾಂಗ್ರೆಸ್‌ನಿಂದ ಟೀಕೆಯಷ್ಟೇ ಕೇಳಿಬರುತ್ತಿದೆ. ಕಾಂಗ್ರೆಸ್ ಕೇವಲ ಆರೋಪ ಮಾಡ್ತಿದೆ. ಯಡಿಯೂರಪ್ಪ ಸರ್ಕಾರ ಮಾತ್ರ ಫೀಲ್ಡ್ ನಲ್ಲಿದೆ. ಜೆಡಿಎಸ್ ಕ್ವಾರಂಟೈನ್ ನಲ್ಲಿದೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದಲ್ಲಿನ ಹಾಲಿ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದರು.

ದೆಹಲಿಗೆ ಹೋಗಿಲ್ಲ. ವೈಯಕ್ತಿಕ ಕೆಲಸಕ್ಕೆ ಹೈದರಾಬಾದ್‌ಗೆ ಹೋಗಿದ್ದೆ: ಸಭೆಗೆ ಮುನ್ನ ಸಚಿವ ಸಿ.ಪಿ.ಯೋಗೇಶ್ವರ್

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಸಂಪುಟದ ಸಚಿವರ ಜೊತೆ ಅರುಣ್​ ಸಿಂಗ್ ಇಂದು ಸಂಜೆ ಸಭೆ ನಡೆಸಲಿದ್ದಾರೆ. ಹಾಗಾಗಿ ಇದುವರೆಗೆ ಬಿಜೆಪಿ ಕಚೇರಿಗೆ 31 ಸಚಿವರು ಆಗಮಿಸಿದ್ದಾರೆ. ಆದರೆ ಸಚಿವ ಸಿ.ಪಿ.ಯೋಗೇಶ್ವರ್ ಸಭೆಗೆ ಇನ್ನೂ ಬಂದಿಲ್ಲ. ನಿನ್ನೆ ಹೈದರಾಬಾದ್‌ಗೆ ತೆರಳಿದ್ದ ಸಚಿವ ಸಿ.ಪಿ.ಯೋಗೇಶ್ವರ್ ಅವರು ಹೈದರಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಅಲ್ಲಿಂದ ನೇರವಾಗಿ ಅರುಣ್​ ಸಿಂಗ್ ಸಭೆಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಬೆಗಳೂರಿಗೆ ವಾಪಸಾಗುತ್ತಿದ್ದಂತೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜಕೀಯವಾಗಿ ನಾನು ಏನೂ ಮಾತನಾಡಲ್ಲ. ನಾನು ದೆಹಲಿಗೆ ಹೋಗಿಲ್ಲ. ವೈಯಕ್ತಿಕ ಕೆಲಸಕ್ಕೆ ಹೈದರಾಬಾದ್‌ಗೆ ಹೋಗಿದ್ದೆ ಎಂದು ಏರ್​ಪೋರ್ಟ್‌ನಲ್ಲಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ಅರುಣ್ ಸಿಂಗ್ ಜತೆ ಸಭೆಗೂ ಮುನ್ನ ವಲಸಿಗ ಸಚಿವರ ಸಭೆ:

ಬೆಂಗಳೂರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಆಗಮನ ಹಿನ್ನೆಲೆ ಅರುಣ್ ಸಿಂಗ್ ಜತೆ ಸಭೆಗೂ ಮುನ್ನ ವಲಸಿಗ ಸಚಿವರು ಸಭೆ ನಡೆಸಿದರು. ಸಚಿವ ಬಿ.ಸಿ. ಪಾಟೀಲ್ ನಿವಾಸದಲ್ಲಿ ವಲಸಿಗ ಸಚಿವರ ಸಭೆ ನಡೆಯಿತು. ಸಚಿವರಾದ ಡಾ.ಕೆ. ಸುಧಾಕರ್, ಎಸ್.ಟಿ. ಸೋಮಶೇಖರ್​, ಶಿವರಾಂ ಹೆಬ್ಬಾರ್, ಆನಂದ್​ ಸಿಂಗ್ ಮತ್ತಿತರರು ಭಾಗಿಯಾಗಿದ್ದರು.

ಸಚಿವ ಈಶ್ವರಪ್ಪ ಹೇಳಿಕೆಗೆ ಎಂಟಿಬಿ ನಾಗರಾಜ್​ ತಿರುಗೇಟು:

ವಲಸಿಗರಿಂದ ರಾಜ್ಯ ಬಿಜೆಪಿಯಲ್ಲಿ ಹೀಗಾಗಿದೆ ಎಂದು ಸಚಿವ ಕೆ ಎಸ್​ ಈಶ್ವರಪ್ಪ ಹೇಳಿಕೆ ನೀಡುವ ವಿಚಾರವಾಗಿ ಎಂಟಿಬಿ ನಾಗರಾಜ್​ ತಿರುಗೇಟು ನೀಡಿದ್ದಾರೆ. ನಾವು 17 ಜನರು ಬಿಜೆಪಿಗೆ ಬಂದಿದ್ದರಿಂದ ಸಮಸ್ಯೆಯಾಗಿಲ್ಲ. ನಾವು ಬಂದಿದ್ದರಿಂದಲೇ ಬಿಜೆಪಿ ಸರ್ಕಾರ ರಚನೆಯಾಗಿದೆ. 17 ಶಾಸಕರು ವಲಸೆ ಬರದಿದ್ದರೆ ಸರ್ಕಾರ ಎಲ್ಲಿ ರಚಿಸುತ್ತಿದ್ದರು? ಎಂದು ಪ್ರಶ್ನಿಸಿದ್ದಾರೆ.

(during corona times congress limited to criticizing jds is in quarantine describes karnataka bjp in charge arun singh in bangalore)

Published On - 5:40 pm, Wed, 16 June 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್