Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿವಿಎಸ್​ಗೆ ಟಿಕೆಟ್ ಮಿಸ್: ಜೆಪಿ ನಡ್ಡಾ ಕರೆ ಮಾಡಿ ಹೇಳಿದ್ದೇನು? ಎಳೆ-ಎಳೆಯಾಗಿ ಬಿಚ್ಚಿಟ್ಟ ಸದಾನಂದಗೌಡ

2 ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದ ಮಾಜಿ ಸಿಎಂ ಡಿ.ವಿ ಸದಾನಂದಗೌಡ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಮಿಸ್ ಆಗಿದೆ. ಸದಾನಂದಗೌಡ ಬದಲಿಗೆ ಬೇರೆಯವರಿಗೆ ಟಿಕೆಟ್ ನೀಡುತ್ತಿರುವುದಾಗಿ ಖುದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕರೆ ಮಾಡಿ ಹೇಳಿದ್ದಾರೆ. ಹಾಗಾದ್ರೆ, ನಡ್ಡಾ ಕರೆ ಮಾಡಿ ಏನು ಹೇಳಿದ್ರು ಎನ್ನುವುದನ್ನು ಸ್ವತಃ ಸದಾನಂದಗೌಡ ಟಿವಿ9 ಜೊತೆ ಹಂಚಿಕೊಂಡಿದ್ದಾರೆ. 

ಡಿವಿಎಸ್​ಗೆ ಟಿಕೆಟ್ ಮಿಸ್: ಜೆಪಿ ನಡ್ಡಾ ಕರೆ ಮಾಡಿ ಹೇಳಿದ್ದೇನು? ಎಳೆ-ಎಳೆಯಾಗಿ ಬಿಚ್ಚಿಟ್ಟ ಸದಾನಂದಗೌಡ
ಸದಾನಂದಗೌಡ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 13, 2024 | 10:54 PM

ಬೆಂಗಳೂರು, ಮಾರ್ಚ್​​ 13: ಭಾರಿ ಚರ್ಚೆಗೆ ಕಾರಣವಾಗಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ (Bangalore North Constituency) ಬಿಜೆಪಿ ಟಿಕೆಟ್​ ಹಾಲಿ ಸಂಸದ ಡಿ.ವಿ. ಸದಾನಂದ ಗೌಡ (DV Sadananda Gowda) ಅವರಿಗೆ ಮಿಸ್‌ ಆಗಿದೆ. ಸದಾನಂದಗೌಡ ಬದಲಿಗೆ ಬೇರೆಯವರಿಗೆ ಟಿಕೆಟ್ ನೀಡುತ್ತಿರುವುದಾಗಿ ಖುದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕರೆ ಮಾಡಿ ಹೇಳಿದ್ದಾರೆ. ಹಾಗಾದ್ರೆ, ನಡ್ಡಾ ಕರೆ ಮಾಡಿ ಏನು ಹೇಳಿದ್ರು ಎನ್ನುವುದನ್ನು ಸ್ವತಃ ಸದಾನಂದಗೌಡ ಟಿವಿ9 ಜೊತೆ ಹಂಚಿಕೊಂಡಿದ್ದಾರೆ.

ಸದಾನಂದಗೌಡಗೆ ಜೆ.ಪಿ.ನಡ್ಡಾ ಕರೆ 

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ವಿಚಾರವಾಗಿ ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕರೆ ಮಾಡಿದ್ದರು. ಬೆಂಗಳೂರು ಉತ್ತರಕ್ಕೆ ಹೊಸ ಹೆಸರು ನಿಶ್ಚಯ ಮಾಡಿದ್ದೇವೆಂದರು. ಒಂದೇ ಹೆಸರಿದ್ದರೂ ಯಾಕೆ ಬದಲಾವಣೆ ಎಂದು ನಡ್ಡಾಗೆ ಪ್ರಶ್ನಿಸಿದೆ. ಕೆಲ ತಂತ್ರಗಾರಿಕೆ ಕಾರಣಕ್ಕೆ ಬದಲಾವಣೆ ಮಾಡಿದ್ದೇವೆಂದು ಹೇಳಿದರು. ನಂತರ ಬಿಜೆಪಿ ಅಧ್ಯಕ್ಷ ನಡ್ಡಾರನ್ನು ಏನು ಪ್ರಶ್ನೆ ಮಾಡಲು ಹೋಗಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸದಾನಂದಗೌಡಗೆ ಕರೆ ಮಾಡಿ ಬಿಗ್‌ ಶಾಕ್ ಕೊಟ್ಟ ಅಮಿತ್ ಶಾ, ಕುತೂಹಲ ಮೂಡಿಸಿದ ಡಿವಿಎಸ್ ನಡೆ!

ನನಗೆ ಟಿಕೆಟ್ ನಿರಾಕರಿಸಿರುವ ಬಗ್ಗೆ ವಿಶ್ಲೇಷಣೆ ಮಾಡಲು ಹೋಗಲ್ಲ. ರಾಜಕೀಯ ಜೀವನದಿಂದ ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ. ಚುನಾವಣಾ ರಾಜಕೀಯದಿಂದ ದೂರವಿರುವೆ ಅಷ್ಟೇ. ಚುನಾವಣಾ ರಾಜಕೀಯದಿಂದ ದೂರಾಗುವುರಿಂದ ನನಗೆ ನೋವಿಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರಬೇಕು ಎಂದು ನನ್ನ ಮನಸ್ಸಿನಲ್ಲಿದೆ ಎಂದಿದ್ದಾರೆ.

ಇದನ್ನೂ ಓದಿ: ಶೋಭಾ ಕರಂದ್ಲಾಜೆಗೆ ಬೆಂಗಳೂರು ಉತ್ತರ ಟಿಕೆಟ್: ಭುಗಿಲೆದ್ದ ಆಕ್ರೋಶ, ಶಾಸಕ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ

ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿ ಆಗಬೇಕು. ನಂತರ ನನ್ನ ತೀರ್ಮಾನವನ್ನು ನಾನು ಮಾಡುತ್ತೇನೆ. ಪಕ್ಷದಲ್ಲಿ ನಾನು ಎಲ್ಲಾ ಹುದ್ದೆ ಅಲಂಕರಿಸಿದ್ದೇನೆ. ಪ್ರಧಾನಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆ ಬಿಟ್ಟು ಬೇರೆ ಎಲ್ಲಾ ಹುದ್ದೆಗಳು ನನಗೆ ಬಂದಿವೆ. ಸಾಯುವವರೆಗೂ ಶವದ ಮೇಲೆ ಬಿಜೆಪಿ ಧ್ವಜ ಬೇಕು ಎಂಬ ಆಸೆ ನನಗೆ ಇಲ್ಲ. ಬೆಂಗಳೂರು ಉತ್ತರಕ್ಕೆ ಯಾರು ಅಭ್ಯರ್ಥಿ ಆಗಬೇಕು ಅಂತಾ ನಾನು ಹೇಳಲು ಹೋಗುವುದಿಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?