
ಬೆಂಗಳೂರು, (ಜೂನ್ 29): ಕರ್ನಾಟಕ ಬಿಜೆಪಿಯಲ್ಲಿ (Karnataka BJP) ಮತ್ತೆ ನಾಯಕಯತ್ವ ಬದಲಾವಣೆ ಚರ್ಚೆ ಮುನ್ನಲೆಗೆ ಬಂದಿದೆ. ಇದಕ್ಕೆ ಪೂಕರವೆಂಬಂತೆ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರರನ್ನು (BY VIjayendra) ಕೆಳಗಿಳಿಸಲು ದೆಹಲಿ ನಾಯಕರಲ್ಲಿ ಒತ್ತಾಯ ಮಾಡಿರುವ ಡಿವಿ ಸದಾನಂದ ಗೌಡ (DV Sadanandagowda) ಅವರದ್ದು ಎನ್ನಲಾದ ಆಡಿಯೋ ವೈರಲ್ (Audio Viral) ಆಗಿದೆ. ಬಿಜೆಪಿ ದೆಹಲಿ ಮಟ್ಟದ ನಾಯಕ ಪ್ರದೀಪ್ ಎಂಬುವವರ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿ ನಡೆಸಿದ ಸಂಭಾಷಣೆ ಇದಾಗಿದ್ದು, ಇದರಲ್ಲಿ ಮೂರು ತಿಂಗಳ ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಿ ಎಂದು ಇದರಲ್ಲಿ ಬೇಡಿಕೆ ಇಡಲಾಗಿದೆ. ಈ ಆಡಿಯೋ ಇದೀಗ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಮತ್ತೆ ಬಣ ಬಡಿದಾಟ ಶುರುವಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅವರು ಇನ್ನು ಮೂರು ತಿಂಗಳಲ್ಲಿ ಮೂರು ವರ್ಷ ಪೂರೈಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಅವಧಿ ಮೂರು ವರ್ಷ ಇರುವುದು ಬಿಜೆಪಿಯಲ್ಲಿ ನಡೆದುಕೊಂಡು ಬಂದ ನಿಯಮವಾಗಿದೆ. ಇದೇ ಸಂದರ್ಭದಲ್ಲಿ ದೆಹಲಿ ಮಟ್ಟದ ನಾಯಕರೊಬ್ಬರ ಜೊತೆಗೆ ಡಿವಿ ಸದಾನಂದ ಗೌಡ ಅವರು ಮಾತನಾಡಿದ್ದಾರೆ ಎಂಬ ಆಡಿಯೋ ಹೊರಬಂದಿದ್ದು, ಡಿವಿ ಸದಾನಂದಗೌಡ ಅವರ ಧ್ವನಿಯನ್ನೇ ಹೋಲುವಂತಹ ಆಡಿಯೋ ಇದಾಗಿದೆ. ಹೀಗಾಗಿ ಸದ್ಯ ಬಿಜೆಪಿ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ.
ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್ ವರೆಗೂ ವಿಜಯೇಂದ್ರ ಮುಂದುವರೆಯಲು ಬಿಡಿ, ಬಳಿಕ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿ ಎಂಬುವುದು ಆಡಿಯೋದಲ್ಲಿ ಉಲ್ಲೇಖವಾಗಿದೆ. ಈಗಲೇ ತೆಗೆದು ಹಾಕಿದ್ರೆ ಬಿಜೆಪಿ ಮತ್ತೆ ಲಿಂಗಾಯತ ವಿರೋಧಿ ಅಂತ ಟೀಕೆಗೆ ಗುರಿ ಆಗುವ ಅಪಾಯ ಇದೆ. ಇದು ಪಕ್ಷಕ್ಕೆ ಡ್ಯಾಮೇಜ್ ಆಗಬಹುದು. ಹಾಗಾಗಿ ಮುಂದಿನ ಅಕ್ಟೋಬರ್ ವರೆಗೂ ಕಾದು ವಿಜಯೇಂದ್ರ ಅವರನ್ನು ಪದವಿಯಿಂದ ತೆಗೆಯುವಂತೆ ಮನವಿ ಮಾಡಲಾಗಿದೆ.
ಬಿವೈ ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಮೂರು ವರ್ಷ ಪೂರ್ಣಗೊಳಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಗೊಂದಲ ಮಾಡಿಕೊಳ್ಳುವುದು ಯಾಕೆ? ಎರಡು ತಿಂಗಳ ಒಳಗಾಗಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕಾಗಿದೆ. ಎರಡು ತಿಂಗಳಲ್ಲಿ ಅವರ ಅವಧಿ ಕೂಡಾ ಮುಕ್ತಾಯವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಯಾರೂ ಇದನ್ನು ಪ್ರಶ್ನೆ ಮಾಡುವುದಿಲ್ಲ. ಪಕ್ಷದಲ್ಲಿ ಮುಂದುವರಿಯಬೇಕೆಂದು ಯಾವುದೇ ಷರತ್ತು ಇಲ್ಲ. ಹಾಗಾಗಿ ಯೋಜನಾಬದ್ಧವಾಗಿ ಅಕ್ಟೋಬರ್‌ನಲ್ಲಿ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ. ಈ ಕೆಲಸ ಮಾಡಿದರೆ, ಲಿಂಗಾಯತರು ಸ್ವಲ್ಪ ವಿರೋಧ ಮಾಡಬಹುದು. ಆದರೆ ಯೋಗ್ಯರನ್ನು ನಾವು ರಾಜ್ಯಾಧ್ಯಕ್ಷರನ್ನಾಗಿ ಮಾಡಿದರೆ ಎಲ್ಲಾ ವಿರೋಧಗಳು ತಣ್ಣಗಾಗಲಿದೆ. ಇದು ನನ್ನ ಅಭಿಪ್ರಾಯವಾಗಿದೆ.
ಬೇರೆ ಉತ್ತಮ ಅವಕಾಶಗಳು ಇದ್ದರೆ ನಾನು ಪಕ್ಷದ ನಿರ್ಧಾರಕ್ಕೆ ಬದ್ಧವಾಗಿದ್ದೇನೆ. ನಾನು ದೇವರಲ್ಲಿ ನಂಬಿಕೆ ಇಟ್ಟಿದ್ದೇನೆ. ನನ್ನನ್ನು ಜನರು ಒಪ್ಪಿಕೊಂಡಿದ್ದಾರೆ. ಬಸ್ ನಿಲ್ದಾಣದಲ್ಲಿ ಕಾಣಿಸಿಕೊಂಡರೂ 25-30 ಆಟೋ ಚಾಲಕರು ಬಂದು ಮಾತನಾಡಿಸುತ್ತಾರೆ. ನಾನು ಆ ರೀತಿಯ ಸಂಪರ್ಕ ಇಟ್ಟಿದ್ದೇನೆ ಎಂದು ಪ್ರದೀಪ್ ಎಂಬುವವರ ಜೊತೆಗೆ ಮಾತನಾಡಿದ ಆಡಿಯೋನಲ್ಲಿದೆ.
ಇನ್ನು ಈ ಆಡಿಯೋ ವೈರಲ್ ಆಗುತ್ತಿದ್ದಂತೆಯೇ ಈ ಬಗ್ಗೆ ಮಾತನಾಡಿರುವ ನೀಡಿರುವ ಡಿವಿಎಸ್, ಆಡಿಯೋ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ಆಡಿಯೋ ಬಗ್ಗೆ ನನಗೆ ಗೊತ್ತಿಲ್ಲ, ಹಾಗಾಗಿ ಉತ್ತರ ಕೊಡುವುದಿಲ್ಲ. ಆಡಿಯೋ ಬಗ್ಗೆ ಸತ್ಯ ಸಂಗತಿ ಹೊರಬರಲಿ. ನನ್ನ ಬಗ್ಗೆ ಬಹಳ ದಿನದಿಂದ ಚರ್ಚೆ ಆಗುತ್ತಿತ್ತು. ಕೋರ್ ಕಮಿಟಿ ಸಭೆಯಲ್ಲಿ ಕೆಲವು ಮಾತುಗಳನ್ನು ಹೇಳಿದ್ದೇನೆ. ಕೇಂದ್ರ ನಾಯಕರು, ರಾಜ್ಯ ನಾಯಕರು ಕೇಳಿದ್ರೆ ಉತ್ತರ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಇನ್ನು ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕಿತ್ತು ಬಿಸಾಕಿ ಅನ್ನೋ ಆಡಿಯೋ ವೈರಲ್ ಆಗುತ್ತಿದ್ದಂತೆಯೇ ಯಡಿಯೂರಪ್ಪ ಬಣದ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ದಾಣವಣಗೆರೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಬಿಎಸ್ವೈ ಬಣದ ಪ್ರಮುಖ ನಾಯಕ ಎಂಪಿ ರೇಣುಕಾಚಾರ್ಯ, ಯಡಿಯೂರಪ್ಪ ನವರ ಅಶೀರ್ವಾದ ದಿಂದ ಕೆಲವರು ಸಿಎಂ ಆಗಿದ್ದಾರೆ, ಸಚಿವರು ಆಗಿದ್ದಾರೆ. ಏನಾದರೂ ಪಿತೂರಿ ನಡೆಸಿದರೆ ನಾವು ಸುಮ್ಮನೆ ಕೂರುವುದಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಎರಡು ವರ್ಷ ಪೂರೈಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಯಡಿಯೂರಪ್ಪ ಪಕ್ಷ ಸಂಘಟನೆ ಮಾಡದಿದ್ರೆ ಈಗ ಮಾತನಾಡುವವರು ಇರುತ್ತಿರಲಿಲ್ಲ . ಆವರ ಮಗ ಅಂತಾ ಹೇಳುತ್ತಿಲ್ಲ ಅವರು ಜಾತ್ಯತೀತ ವ್ಯಕ್ತಿ . ರಾಜ್ಯದಲ್ಲಿ ಅನೇಕ ಹೋರಾಟವನ್ನು ವಿಜಯೇಂದ್ರ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೊನ್ನೆ ನಡೆದ ಪರಿಷತ್ ಚುನಾವಣೆಯಲ್ಲಿ ವಿಜಯೇಂದ್ರಗೆ ಅವರಿಗೆ ಕೆಟ್ಟ ಹೆಸರು ತರಲು ಅಡ್ಡ ಮತದಾನ ಮಾಡಿದ್ದಾರೆ . ತಾಕತ್ತು ಇದ್ದರೆ ಯಡಿಯೂರಪ್ಪ ಬಿಜೆಪಿಗೆ ಅವಶ್ಯಕತೆ ಇಲ್ಲ ಅಂತಾ ಹೇಳಲಿ ನೋಡೋಣಾ. ಇನ್ನೂ ಮುಂದೆ ವಿಜಯೇಂದ್ರ ಬಗ್ಗೆ ಅವಹೇಳನವಾಗಿ ಮಾತಾಡಿದ್ರೆ ಸಹಿಸುವುದಿಲ್ಲ. ಯಡಿಯೂರಪ್ಪ ಕಟ್ಟಿದ್ದ ಪಕ್ಷಕ್ಕೆ ಇವರೆಲ್ಲ ಬಂದು ಈಗ ಆವರ ಕುಟುಂಬ ಆವರ ಬಗ್ಗೆ ಮಾತಾಡುತ್ತಾರೆ ಇದು ಒಳ್ಕೆಯದೆಲ್ಲ. 2028ಕ್ಕೆ ಆವರ ಮುಖಂಡತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ. ರಾಷ್ಟ್ರೀಯ ನಾಯಕರು ಬದಲಾವಣೆ ಮಾಡಲ್ಲ ಅವರೇ ಮುಂದುವರೆಯುತ್ತಾರೆ. ವಿಜಯೇಂದ್ರ ಅವರೇ ಮುಂದುವರೆಯಬೇಕು. ಇಲ್ಲದಿದ್ರೆ ನಾವು ಸಂಘಟನೆ ಮಾಡಿ ಹೋರಾಡುತ್ತೇವೆ.
ಆಂತರಿಕ ವಿಚಾರವನ್ನು ಮಾತಾಡಬಾರದು ಅಂತಾ ಮೌನವಾಗಿದ್ದೆ. ವಿಜಯೇಂದ್ರ ಬಗ್ಗೆ ಮಾತಾಡ್ರಿ ನಾವು ಅದೇ ತರ ಉತ್ತರ ಕೊಡುತ್ತೇವೆ .ಕುಮಾರ್ ಬಂಗಾರಪ್ಪ ನನ್ನು ಕರೆತಂದು ಶಾಸಕರನ್ನಾಗಿ ಮಾಡಿದ್ದು ವಿಜಯೇಂದ್ರ ಯಡಿಯೂರಪ್ಪ. ಯಡಿಯೂರಪ್ಪ ವಿಜಯೇಂದ್ರರವರ ಬೆಂಬಲ ಇಲ್ಲದೆ ಸೊರಬದಲ್ಲಿ ಗೆದ್ದು ತೋರಿಸಲಿ. ಕುಮಾರ್ ಬಂಗಾರಪ್ಪ ಜಿಲ್ಲಾ ಪಂಚಾಯತಿ ಸದಸ್ಯ ಆಗಲು ಯೋಗ್ಯತೆ ಇಲ್ಲ ಎಂದು ಕಿಡಿಕಾರಿದರು.