ಡಿವೈಎಸ್​ಪಿ ಲಕ್ಷ್ಮೀ ಅನುಮಾನಾಸ್ಪದ ಸಾವು ಪ್ರಕರಣ; ಪೊಲೀಸರ ತನಿಖೆ ಎಲ್ಲಿಗೆ ಬಂತು? ವೈದ್ಯರ ವಿಸ್ತೃತ ವರದಿ ಏನು ಹೇಳುತ್ತಿದೆ?

ಲಕ್ಷ್ಮೀ ಮರಣೋತ್ತರ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ವೇಳೆ ಸಾವಿನ ಕಾರಣ ಬಯಲಾಗಿದ್ದು, ವೈದ್ಯರ ವಿಸ್ತೃತ ವರದಿಯಲ್ಲಿ ಉಲ್ಲೇಖವಾಗಿದೆ. ಉಲ್ಲೇಖಿತ ವಿಸ್ತೃತ ವರದಿಯನ್ನು ವೈದ್ಯರು ಪೊಲೀಸರಿಗೆ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಅನ್ನಪೂರ್ಣೇಶ್ವರಿ ನಗರ ಪೊಲೀಸರಿಗೆ ವರದಿ ಸಲ್ಲಿಸಿದ್ದಾರೆ.

ಡಿವೈಎಸ್​ಪಿ ಲಕ್ಷ್ಮೀ ಅನುಮಾನಾಸ್ಪದ ಸಾವು ಪ್ರಕರಣ; ಪೊಲೀಸರ ತನಿಖೆ ಎಲ್ಲಿಗೆ ಬಂತು? ವೈದ್ಯರ ವಿಸ್ತೃತ ವರದಿ ಏನು ಹೇಳುತ್ತಿದೆ?
ಡಿವೈಎಸ್​ಪಿ ಲಕ್ಷ್ಮೀ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jul 08, 2021 | 11:37 AM

ಬೆಂಗಳೂರು: 2020 ಡಿಸೆಂಬರ್ 17 ರಲ್ಲಿ ಡಿವೈಎಸ್​ಪಿ ಲಕ್ಷ್ಮೀ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಲಕ್ಷ್ಮೀ ಶವ ಪತ್ತೆಯಾಗಿತ್ತು. ಅನ್ನಪೂರ್ಣೇಶ್ವರಿ ನಗರದ ಗೆಳೆಯನ ಮನೆಯಲ್ಲಿ ಶವ ಪತ್ತೆಯಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಅನುಮಾನವಿತ್ತು. ಈ ಹಿನ್ನೆಲೆ 170c ಅಡಿಯಲ್ಲಿ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲಕ್ಷ್ಮೀ ಮರಣೋತ್ತರ ಪರಿಕ್ಷೆ ಹಾಗೂ ವೈದ್ಯಕೀಯ ಪರಿಕ್ಷೆಯಿಂದ ಇದೀಗ ಸಾವಿನ ಅಸಲಿ ಸತ್ಯ ಬಯಲಾಗಿದೆ.

ಲಕ್ಷ್ಮೀ ಮರಣೋತ್ತರ ಪರೀಕ್ಷೆ ಹಾಗೂ ವೈದ್ಯಕೀಯ ಪರೀಕ್ಷೆ ವೇಳೆ ಸಾವಿನ ಕಾರಣ ಬಯಲಾಗಿದ್ದು, ವೈದ್ಯರ ವಿಸ್ತೃತ ವರದಿಯಲ್ಲಿ ಉಲ್ಲೇಖವಾಗಿದೆ. ಉಲ್ಲೇಖಿತ ವಿಸ್ತೃತ ವರದಿಯನ್ನು ವೈದ್ಯರು ಪೊಲೀಸರಿಗೆ ನೀಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಅನ್ನಪೂರ್ಣೇಶ್ವರಿ ನಗರ ಪೊಲೀಸರಿಗೆ ವರದಿ ಸಲ್ಲಿಸಿದ್ದಾರೆ.

ತೀವ್ರವಾಗಿ ಮನನೊಂದಿದ್ದ ಡಿವೈಎಸ್​ಪಿ ಲಕ್ಷ್ಮೀ, ನೇಣು ಬಿಗಿದುಕೊಂಡಿದ್ದಾಗಿ ವರದಿಯಲ್ಲಿ ಉಲ್ಲೇಖವಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವಿಸ್ತೃತ ವರದಿಯನ್ನು ಪೊಲೀಸರಿಗೆ ನೀಡಲಾಗಿದೆ. ಆದರೆ ವೈದ್ಯರು ನೀಡಿದ ವಿಸ್ತೃತ ವರದಿಯಲ್ಲಿ ಪೊಲೀಸರಿಗೆ ಕೆಲ ಅನುಮಾನಗಳು ಶುರುವಾಗಿದೆ. ಹೀಗಾಗಿ ಅಂಶಗಳ ರೂಪದಲ್ಲಿ ಕೆಲವು ಸಂಗತಿಗಳನ್ನು ಉಲ್ಲೇಖಿಸುವಂತೆ ಪೊಲೀಸರು ಸೂಚಿಸಿದ್ದಾರೆ.

ಪ್ರಶ್ನೆಗಳನ್ನು ಕೋಟ್ ಮಾಡಿ ವೈದ್ಯರಿಗೆ ಕಳುಹಿಸಿದ ಪೊಲೀಸರು, ಪ್ರಶ್ನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ. ಸದ್ಯ ಕೇಳಿರುವ ಪ್ರಶ್ನೆಗಳಿಗೆ ಬರುವ ಉತ್ತರಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆ. ವರದಿ ಬಂದ ಬಳಿಕ ಕೊರ್ಟ್​ಗೆ ವರದಿ ಸಲ್ಲಿಸಲಿದ್ದಾರೆ.

ಇದನ್ನೂ ಓದಿ

DySP ಲಕ್ಷ್ಮೀ ಮರಣೋತ್ತರ ಪರೀಕ್ಷೆಗೆ ಸಮ್ಮತಿ ಸಹಿ ಹಾಕಲು ನಿರಾಕರಿಸಿದ ತಂದೆ..

DySP Lakshmi ದಾಂಪತ್ಯದಲ್ಲಿ ಎದ್ದ ಬಿರುಗಾಳಿ ಯಾವುದು? ಲಕ್ಷ್ಮೀ ಪ್ರೇಮ ವಿವಾಹದ ಇನ್​ಸೈಡ್ ಸ್ಟೋರಿ ಇಲ್ಲಿದೆ

(DySP Lakshmi Suspected Death Case; Here is the investigation details)

Published On - 11:28 am, Thu, 8 July 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?