ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಕೇಸ್: ಕೆಜೆ ಜಾರ್ಜ್​ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಇಡೀ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸುದ್ದು ಮಾಡಿತ್ತು. ಈ ಪ್ರಕರಣ ಸಚಿವ ಕೆಜೆ ಜಾರ್ಜ್​ ಕುತ್ತಿಗೆ ಸುತ್ತಿಕೊಂಡಿತ್ತು. ಬಳಿಕ ಹೈಕೋರ್ಟ್​ ಈ ಕೇಸ್​ನಲ್ಲಿ ಜಾರ್ಜ್​ ಪಾತ್ರವಿಲ್ಲ ಎಂದು ಆದೇಶ ಹೊರಡಿಸಿತ್ತು. ಇದೀಗ ಇದೇ ಆದೇಶವನ್ನು ಸುಪ್ರೀಂಕೋರ್ಟ್​ ಎತ್ತಿ ಹಿಡಿದಿದೆ. ಇದರೊಂದಿಗೆ ಸಚಿವ ಕೆ.ಜೆ ಜಾರ್ಜ್ ಗೆ ಬಿಗ್ ರಿಲೀಫ್ ಸಿಕ್ಕಂತಾಗಿದ್ದು, ಆರೋಪ ಮಾಡಿದ್ದ ಬಿಜೆಪಿಗೆ ಮುಖಭಂಗವಾದಂತಾಗಿದೆ.

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಕೇಸ್: ಕೆಜೆ ಜಾರ್ಜ್​ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್
ಗಣಪತಿ ಆತ್ಮಹತ್ಯೆ ಪ್ರಕರಣ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: ರಮೇಶ್ ಬಿ. ಜವಳಗೇರಾ

Updated on:Aug 27, 2024 | 4:48 PM

ನವದೆಹಲಿ/ಬೆಂಗಳೂರು, (ಆಗಸ್ಟ್ 27): ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್‌ ಅವರ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಈಗ ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ.ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದ್ದವು. ಬಳಿಕ ಹೈಕೋರ್ಟ್​ ಸಹ ಜಾರ್ಜ್​ ಅವರ ಪಾತ್ರವಿಲ್ಲ ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಮೃತ ಗಣಪತಿಯವರ ಸಹೋದರಿ ಸಬೀತಾ, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು (ಆಗಸ್ಟ್ 27) ಈ ಅರ್ಜಿ ವಿಚಾರಣೆ ನಡೆಸಿದ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ನೇತೃತ್ವದ ದ್ವಿಸದಸ್ಯ ಪೀಠ, ಹೈಕೋರ್ಟ್​ನ ಆದೇಶವನ್ನು ಎತ್ತಿಹಿಡಿದಿದೆ.

ಈ ಮೂಲಕ ಸಬೀತಾ ಸಲ್ಲಿಸಿದ್ದ ಅರ್ಜಿಯನ್ನು  ಕೋರ್ಟ್​ ವಜಾ ಮಾಡಿದೆ. ಈ ಮೂಲಕ ಸಚಿವ ಕೆಜೆ ಜಾರ್ಜ್​​ಗೆ ಬಿಗ್ ರಿಲೀಫ್ ಸಿಕ್ಕಿದೆ. ಹಾಗೇ ಈ ಪ್ರಕರಣದಲ್ಲಿ ಕೇಳಿಬಂದಿದ್ದ ಇಬ್ಬರು ಅಧಿಕಾರಿಗಳಿಗೂ ರಿಲೀಫ್ ಸಿಕ್ಕಿದೆ. IAS ಅಧಿಕಾರಿ A.M.ಪ್ರಸಾದ್‌, IPS ಅಧಿಕಾರಿ ಪ್ರಣಬ್‌ ಮೊಹಂತಿ ಸುಪ್ರೀಕೋರ್ಟ್​ ಆದೇಶದಿಂದ ನಿರಾಳರಾಗಿದ್ದಾರೆ.

ಇದನ್ನೂ ಓದಿ: ರಾಜಭವನ-ಸರ್ಕಾರ ಸಂಘರ್ಷ: ರಾಜ್ಯಪಾಲರಿಂದ 11 ಮಸೂದೆ ವಾಪಸ್

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖೆ ನಡೆಸಿದ್ದ ಸಿಬಿಐ / ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್ ಸಲ್ಲಿಸಿದ್ದವು. ದಿವಂಗತ ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ. ಜೆ. ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದ್ದವು. ಈ ಸಂಬಂಧ ಕೆ. ಜೆ. ಜಾರ್ಜ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಪ್ರತಿವಾದಿಗಳ ದೂರನ್ನು ತಳ್ಳಿಹಾಕಿತ್ತು. ಇದನ್ನು ಪ್ರಶ್ನೆ ಮಾಡಿ ಗಣಮತಿ ಅವರ ಸಹೋದರಿ ಸಬೀತಾ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಆದ್ರೆ, ಸುಪ್ರೀಂರ್ಟ್​ ಸಹ ಸಬೀತಾ ಅವರ ಅರ್ಜಿಯನ್ನು ವಜಾ ಮಾಡಿದೆ.

ಪ್ರಕರಣ ಹಿನ್ನೆಲೆ: ಮಂಗಳೂರು ಐಜಿಪಿ ಕಚೇರಿಯಲ್ಲಿ ಡಿವೈಎಸ್ಪಿ ಆಗಿದ್ದ ಗಣಪತಿ ಅವರು ಮೂಲತಃ ಕೊಡಗಿನವರು. 2016 ಜುಲೈ 7 ರಂದು ಮಡಿಕೇರಿಯ ವಿನಾಯಕ ಲಾಡ್ಜ್‌ನ ಕೊಠಡಿ ಸಂಖ್ಯೆ 315ರಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ಶರಣಾಗುವ ಮುನ್ನ ಕೊಡಗಿನ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದ ಗಣಪತಿ ಅವರು, ಅಂದಿನ ಗೃಹ ಸಚಿವ ಕೆ. ಜೆ. ಜಾರ್ಜ್‌ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಹಾಗೂ ಎ. ಎಂ. ಪ್ರಸಾದ್ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನನ್ನ ಸಾವಿಗೆ ಈ ಮೂವರೇ ಕಾರಣ ಎಂದು ಅವರು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:50 pm, Tue, 27 August 24

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್