AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka: ಕರ್ನಾಟಕದಲ್ಲಿ ಇ-ಪ್ರಸಾದ ಸೇವೆ ಆರಂಭ, ಬೇರೆ ರಾಜ್ಯಗಳ ಭಕ್ತರಿಂದಲೂ ಪ್ರಸಾದಕ್ಕೆ ಬೇಡಿಕೆ

ಕರ್ನಾಟಕದಲ್ಲಿ ಇ-ಪ್ರಸಾದ ಸೇವೆ ಆರಂಭಗೊಂಡಿದೆ. ಧಾರ್ಮಿಕ ದತ್ತಿ ಇಲಾಖೆಯು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯ ಮತ್ತು ಸುಳ್ಯ ತಾಲೂಕಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ ರಾಜ್ಯದ 14 ದೇವಾಲಯಗಳಲ್ಲಿ ಇ-ಪ್ರಸಾದ ಸೇವೆ ಆರಂಭಿಸಿದ್ದು, ದೇವಸ್ಥಾನಗಳಿಗೆ ತೆರಳಲು ಸಾಧ್ಯವಾಗದ ಭಕ್ತರು http://www.csc.devalaya.com ವೆಬ್‌ಸೈಟ್‌ ಮೂಲಕ ಮನೆ ಬಾಗಿಲಿಗೆ ಪ್ರಸಾದವನ್ನು ತರಿಸಿಕೊಳ್ಳಬಹುದು. ಬೇರೆ ರಾಜ್ಯಗಳ ಭಕ್ತರಿಂದಲೂ ಪ್ರಸಾದಕ್ಕೆ ಬೇಡಿಕೆ ಇದೆ.

Karnataka: ಕರ್ನಾಟಕದಲ್ಲಿ ಇ-ಪ್ರಸಾದ ಸೇವೆ ಆರಂಭ, ಬೇರೆ ರಾಜ್ಯಗಳ ಭಕ್ತರಿಂದಲೂ ಪ್ರಸಾದಕ್ಕೆ ಬೇಡಿಕೆ
ಕುಕ್ಕೆ ಸುಬ್ರಹ್ಮಣ್ಯ Image Credit source: Tripxl.com
ನಯನಾ ರಾಜೀವ್
|

Updated on: Mar 30, 2025 | 8:15 AM

Share

ಬೆಂಗಳೂರು, ಮಾರ್ಚ್​ 30: ಕರ್ನಾಟಕದ ಪ್ರಮುಖ ದೇವಸ್ಥಾನ(Temple)ಗಳ ಪ್ರಸಾದ(Prasad)ವನ್ನು ಭಕ್ತರ ಮನೆಗಳಿಗೆ ತಲುಪಿಸುವ ಇ-ಪ್ರಸಾದ ಸೇವೆಗೆ ಧಾರ್ಮಿಕ ದತ್ತಿ ಇಲಾಖೆ ಈಗಾಗಲೇ ಚಾಲನೆ ನೀಡಿದೆ. ಆದರೆ ಅಚ್ಚರಿಯ ಸಂಗತಿ ಎಂದರೆ ಬೇರೆ ರಾಜ್ಯಗಳ ಭಕ್ತರೂ ಕೂಡ ನಮ್ಮ ರಾಜ್ಯದ ದೇವಾಲಯಗಳ ಪ್ರಸಾದಕ್ಕೆ ಬೇಡಿಕೆ ಇಟ್ಟಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಇ-ಪ್ರಸಾದ ಸೇವೆಗೆ ಚಾಲನೆ ನೀಡಿ, ಕೆಲ ಸಂದರ್ಭದಲ್ಲಿ ಭಕ್ತರು ದೇವಾಲಯಗಳಿಗೆ ಭೇಟಿ ನೀಡಲು ಸಾಧ್ಯವಾಗುವುದಿಲ್ಲ, ಅಂಥಾ ಸಂದರ್ಭದಲ್ಲಿ ಇ-ಪ್ರಸಾದ ಸೇವೆ ಮೂಲಕ ಆರ್ಡರ್ ಮಾಡಿ ಪ್ರಸಾದ ತರಿಸಿಕೊಳ್ಳುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ನೋ ಲಾಸ್, ನೋ ಪ್ರಾಫಿಟ್ ಅಡಿಯಲ್ಲಿ ಭಕ್ತರಿಗೆ ಸೇವೆ ನೀಡಲಾಗುವುದು.

100 ರಿಂದ 200 ರೂಪಾಯಿಗಳಲ್ಲಿ ಮನೆ ಬಾಗಿಲಿಗೆ ಪ್ರಸಾದ ಕಳುಹಿಸಲಾಗುವುದು ಎಂದು ಹೇಳಿದ್ದರು. ಇದೀಗ ಐದು ಸಾವಿರಕ್ಕೂ ಹೆಚ್ಚು ಭಕ್ತರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಆದರೆ ಜತೆ ಜತೆಯಲ್ಲೇ ಮಹಾರಾಷ್ಟ್ರದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಗಾಣಗಾಪುರದ ದತ್ತಾತ್ರೇಯ ದೇವಸ್ಥಾನ, ಸವದತ್ತಿ ಯಲ್ಲಮ್ಮನ ಪ್ರಸಾದಕ್ಕೆ ಬೇಡಿಕೆ ಸಲ್ಲಿಸಿದ್ದಾರೆ. ಕೇರಳ ಭಕ್ತರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಪ್ರಸಾದಕ್ಕೆ ಕೋರಿಕೆ ಸಲ್ಲಿಸಿದ್ದಾರೆ. ಇದುವರೆಗೆ ಬಂದಿರುವ ಬೇಡಿಕೆಗಳ ಪೈಕಿ ಕುಕ್ಕೆ ಸುಬ್ರಹ್ಮಣ್ಯ, ಸವದತ್ತಿ ಯಲ್ಲಮ್ಮ ಹಾಗೂ ಮೂಕಾಂಬಿಕಾದೇವಸ್ಥಾನದ ಪ್ರಸಾದಕ್ಕೆ ಹೆಚ್ಚಿದೆ.

ಗ್ರಾಮಗಳಲ್ಲಿರುವ ಕಾಮನ್ ಸರ್ವೀಸ್ ಸೆಂಟ್​ಗೆ ಹೋಗಿ ಮೊದಲು ನೋಂದಾಯಿಸಿಕೊಳ್ಳಬೇಕಿದೆ, ಮುಂಬರುವ ದಿನಗಳಲ್ಲಿ ಮೊಬೈಲ್​ನಿಂದ ಆರ್ಡರ್ ಮಾಡಿ ತರಿಸಿಕೊಳ್ಳಬಹುದು. ಪ್ರಸಾದ್ ಸೇವನೆಯಿಂದ ಅಲ್ಲಲ್ಲಿ ಕೆಟ್ಟ ಘಟನೆಗಳು ಸಂಭವಿಸುತ್ತಿರುವುದರಿಂದ ಶುದ್ಧತೆ ಕಡೆ ಹೆಚ್ಚು ಗಮನಕೊಡಲಾಗಿದೆ.

ಇದನ್ನೂ ಓದಿ
Image
Tirupati Laddu: ಪವಿತ್ರ ತಿರುಪತಿ ಪ್ರಸಾದದ ಬಗ್ಗೆ ಕುತೂಹಲಕಾರಿ ಸಂಗತಿಗಳು
Image
ದೇವರ ಹುಂಡಿಗೆ ಎಷ್ಟು ಹಣ ಹಾಕಬೇಕು? ಅದರಿಂದ ಸಿಗುವ ಫಲವೇನು?
Image
ಬಾಗಲಕೋಟೆ: ಆ ದೇವತೆಯ ಸನ್ನಿಧಾನದಲ್ಲಿ ಸಿಗುವ ಅಂಬಲಿ ಪ್ರಸಾದ ಅಮೃತವಿದ್ದಂತೆ
Image
ಮನೆಯಲ್ಲಿ ನೆಮ್ಮದಿ ಕಾಣಬೇಕೆಂದರೆ ನಿಮ್ಮ ದೇವರ ಕೋಣೆಯಲ್ಲಿ ಈ ಫೋಟೋಗಳು ಇಡಬೇಡಿ!

ಮತ್ತಷ್ಟು ಓದಿ:ನಿಮ್ಮ ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನಗಳ ಪ್ರಸಾದ: ತರಿಸಿಕೊಳ್ಳಲು ಏನು ಮಾಡಬೇಕು? ಇಲ್ಲಿದೆ ಮಾಹಿತಿ

ಸಾಮಾನ್ಯವಾಗಿ ಆಯಾ ದೇವಾಲಯಗಳಲ್ಲಿ ನಿತ್ಯ ವಿತರಿಸುವ ಕಲಗಲುಸಕ್ಕರೆ, ಕುಂಕುಮ, ಬಿಲ್ವಪತ್ರೆ, ದ್ರಾಕ್ಷಿ, ವಿಭೂತಿ, ತುಳಿಸಿ, ತೀರ್ಥ, ಭಾವಚಿತ್ರ, ದಾರವನ್ನು ಕಳುಹಿಸಲಾಗುತ್ತದೆ. ವೆವ್​ಸೈಟ್ ವಿಳಾಸ: https://csc.devalayas.com/

ಯಾವೆಲ್ಲ ದೇವಾಲಯಗಳ ಪ್ರಸಾದ ಲಭ್ಯ? -ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ, ದ.ಕ. -ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯ, ಉಡುಪಿ -ಶ್ರೀ ವಿನಾಯಕ ಸ್ವಾಮಿ ದೇವಾಲಯ ಜಯನಗರ, ಬೆಂಗಳೂರು -ಶ್ರೀ ಚಲುವನಾರಾಯಣ ಸ್ವಾಮಿ ದೇವಾಲಯ, ಮಂಡ್ಯ -ನಂಜನಗೂಡು ಶೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ, ಮೈಸೂರು -ಶ್ರೀ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯ ಮಾಲೂರು, ಕೋಲಾರ -ಶ್ರೀ ಸೋಮೇಶ್ವರ ಸ್ವಾಮಿ ದೇವಾಲಯ, ಹಲಸೂರು ಬೆಂಗಳೂರು -ಶ್ರೀ ಗವಿಗಂಗಾಧರೇಶ್ವರ ಸ್ವಾಮಿ ದೇವಾಲಯ, ಗವೀಪುರಂ, ಬೆಂಗಳೂರು -ಶ್ರೀ ಕ್ಷೇತ್ರ ಝರಣಿ ನರಸಿಂಹ ದೇವಸ್ಥಾನ, ಬೀದರ್‌ -ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಯಲ್ಲಮ್ಮನಗುಡ್ಡ, ಬೆಳಗಾವಿ – ಶ್ರೀ ಕನಕ ದುರ್ಗಮ್ಮ ದೇವಾಲಯ, ಬಳ್ಳಾರಿ -ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ, ಹೂವಿನ ಹಡಗಲಿ, ವಿಜಯನಗರ -ಶ್ರೀ ಹುಲಿಗಮ್ಮ ದೇವಾಲಯ ಹುಲಿಗಿ, ಕೊಪ್ಪಳ -ಶ್ರೀ ಗುರುದತ್ತಾತ್ರೇಯ ಸ್ವಾಮಿ ದೇವಾಲಯ ಗಾಣಗಾಪುರ, ಗುಲ್ಬರ್ಗ ಇರುವುದಾಗಿ ತಿಳಿಸಲಾಗಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ