Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಫೈನಲ್, ಅಧಿಕೃತ ಘೋಷಣೆಯೊಂದೆ ಬಾಕಿ

ಕುದುರೆಗಳನ್ನು ಅಖಾಡಕ್ಕಿಳಿಸಲು ಭಾರೀ ಕಸರತ್ತು ಮಾಡುತ್ತಿವೆ. ರಾಜ್ಯದ 2ನೇ ಪಟ್ಟಿ ಬಿಡುಗಡೆಗೆ ಕಾಂಗ್ರೆಸ್​ ಹೈಕಮಾಂಡ್ ಕಸರತ್ತು ನಡೆಸಿದೆ. ನಾಯಕರುಗಳಿಗೆ ತಲೆನೋವಾಗಿ ಪರಿಣಮಿಸಿದ್ದ ಬಳ್ಳಾರಿ ಲೊಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕೊನೆಗೂ ಫೈನಲ್ ಆಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಫೈನಲ್, ಅಧಿಕೃತ ಘೋಷಣೆಯೊಂದೆ ಬಾಕಿ
Follow us
ರಮೇಶ್ ಬಿ. ಜವಳಗೇರಾ
|

Updated on: Mar 21, 2024 | 6:42 PM

ಬೆಂಗಳೂರು, (ಮಾರ್ಚ್ 21): ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ( Loksabha Elections 2024) ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇನ್ನೊಂದೆಡೆ ಟಿಕೆಟ್​ ಆಕಾಂಕ್ಷಿಗಳ ಲಾಬಿ ಜೋರಾಗಿದೆ. ಅದರಲ್ಲೂ ಕಾಂಗ್ರೆಸ್​ ನಾಯಕರಿಗೆ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ(Bellary Loksabha constituency ), ಬಾಗಲಕೋಟೆ ಕ್ಷೇತ್ರಗಳಿಗೆ ಟಿಕೆಟ್​ಗಾಗಿ ಪೈಪೋಟಿ ನಡೆದಿದ್ದುಮ ಈ ಪೈಕಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೇರಿಕೊಂಡು ಇಂದು (ಮಾರ್ಚ್ 21) ಬಳ್ಳಾರಿ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಫೈನಲ್ ಮಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ಶ್ರೀರಾಮುಲು ವಿರುದ್ಧ ಕಣಕ್ಕಿಳಿಸಲು ಶಾಸಕ ತುಕಾರಾಂ(E tukaram) ಅವರನ್ನು ಮನವೊಲಿಸಲಾಗಿದ್ದು, ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.

ಹೌದು…ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಇ.ತುಕಾರಾಂ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ತೀರ್ಮಾನಿಸಿದೆ. ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯಿಂದ ಮಾಜಿ ಸಂಸದ ವಿ ಎಸ್ ಉಗ್ರಪ್ಪ, ಸಚಿವ ಬಿ ನಾಗೇಂದ್ರ ಸಹೋದರ ವೆಂಕಟೇಶ್ ಪ್ರಸಾದ್, ಅಳಿಯ ಮುರಳಿ ಕೃಷ್ಣ, ವಕೀಲ ಗುಜ್ಜಲ ನಾಗರಾಜ್ ಸೇರಿದಂತೆ ಮುಂತಾದವರು ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದ್ರೆ, ಕಾಂಗ್ರೆಸ್ ಅಂತಿಮವಾಗಿ ಇ.ತುಕಾರಾಂ ಪುತ್ರಿ ಚೈತನ್ಯ ಅವರನ್ನು ಅಖಾಡಕ್ಕಿಳಿಸಲು ನಿರ್ಧರಿಸಿತ್ತು. ಆದ್ರೆ, ಬಿಜೆಪಿಯಿಂದ ಶ್ರೀರಾಮುಲು ಸ್ಪರ್ಧಿಸುತ್ತಿದ್ದಂತೆಯೇ ಕಾಂಗ್ರೆಸ್ ಗೇಮ್ ಪ್ಲ್ಯಾನ್ ಬದಲಾಗಿದ್ದು, ಪುತ್ರಿ ಬದಲಿಗೆ ನೀವೇ ಸ್ಪರ್ಧೆ ಮಾಡಿ ಎಂದು ಕಾಂಗ್ರೆಸ್, ತುಕರಾಂಗೆ ಸೂಚಿಸಿದೆ. ಆದ್ರೆ, ಇದಕ್ಕೆ ತುಕರಾಂ ನಿರಾಕಿರಿದ್ದು, ನನಗೆ ಬೇಡ ನನ್ನ ಪುತ್ರಿಗೆ ಟಿಕೆಟ್ ಕೊಡಿ ಎಂದು ಬೇಡಿಕೆ ಇಟ್ಟಿದ್ದರು.

ಇದೀಗ ಅಂತಿಮವಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಇಂದು ತುಕರಾಂ ಅವರನ್ನು ಕೂರಿಸಿಕೊಂಡು ಬಳ್ಳಾರಿಯಿಂದ ಸ್ಪರ್ಧೆ ಮಾಡಬೇಕೆಂದು ಮನವೊಲಿಸಿದ್ದು, ಇದು ಯಶಸ್ವಿಯಾಗಿದೆ. ಹೀಗಾಗಿ ಬಳ್ಳಾರಿಯಲ್ಲಿ ಶ್ರೀರಾಮುಲು ವಿರುದ್ಧ ತುಕರಾಂ ನಿಲ್ಕುವುದು ಖಚಿತವಾಗಿದ್ದು, ಅಧಿಕೃತ ಘೋಷಣೆಯೊಂದೆ ಬಾಕಿ ಇದೆ. ಇದೊಂದಿಗೆ ಟಿಕೆಟ್ ಆಕಾಂಕ್ಷಿಯಾಗಿದ್ದ ಉಗ್ರಪ್ಪ ನಿರಾಸೆಯಾಗಿದೆ.

ಲೋಕಸಭಾ ಕ್ಷೇತ್ರದ ಒಟ್ಟು ಅವಳಿ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ 6 ಮಂದಿ ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ತಲಾ ಒಬ್ಬ ಜೆಡಿಎಸ್ ಮತ್ತು ಬಿಜೆಪಿ ಶಾಸಕರಿದ್ದಾರೆ. ಸಿರುಗುಪ್ಪ ಕ್ಷೇತ್ರ ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಸೇರಿದರೆ, ಹರಪನಹಳ್ಳಿ ಕ್ಷೇತ್ರ ದಾವಣಗೆರೆ ಕ್ಷೇತ್ರಕ್ಕೆ ಸೇರಿದೆ. ಹೀಗಾಗಿ ಬಳ್ಳಾರಿಯಲ್ಲಿ ಐದು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿದ್ದು, ವಿಜಯನಗರ ಜಿಲ್ಲೆಯ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಆದ್ದರಿಂದ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಲೆಕ್ಕಚಾರದಿಂದ ಅಭ್ಯರ್ಥಿಗಳ ವೈಯಕ್ತಿಕ ವರ್ಚಸ್ಸು, ಪಕ್ಷ ಸಂಘಟನೆ, ಹಣಬಲ, ಪಕ್ಷನಿಷ್ಠೆ ಮುಂತಾದವುಗಳನ್ನು ಪರಿಗಣಿಸಿ ಕಾಂಗ್ರೆಸ್​ ತುಕರಾಂ ಅವರಿಗೆ ಮಣೆ ಹಾಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ