ವಿಜಯಪುರ ಜಿಲ್ಲೆಯಲ್ಲಿ ಮತ್ತೆ ನಡುಗಿದ ಭೂಮಿ: 10 ಕಿಮೀ ಆಳದಲ್ಲಿ ಭೂಕಂಪನ

ವಿಜಯಪುರ ಜಿಲ್ಲೆಯಲ್ಲಿ ಭೂಮಿ ಮತ್ತೆ ನಡುಗಿದೆ. ಭೂಮಿ ಕಂಪಿಸಿರುವುದನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ದೃಢಪಡಿಸಿದೆ.

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ನಡುಗಿದ ಭೂಮಿ: 10 ಕಿಮೀ ಆಳದಲ್ಲಿ ಭೂಕಂಪನ
ಸಾಂಕೇತಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Mar 27, 2022 | 7:30 AM

ವಿಜಯಪುರ: ಜಿಲ್ಲೆಯಲ್ಲಿ ಭೂಮಿ ಮತ್ತೆ ನಡುಗಿದೆ. ಭೂಮಿ ಕಂಪಿಸಿರುವುದನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (Karnataka State Natural Disaster Monitoring Centre – KSNDMC) ದೃಢಪಡಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ 2.8 ಪ್ರಮಾಣ ದಾಖಲಾಗಿತ್ತು. ಜಿಲ್ಲೆಯಲ್ಲಿ ಶನಿವಾರ (ಮಾರ್ಚ್ 26) ಸಂಜೆ 7.51ಕ್ಕೆ ಭೂಕಂಪ ಸಂಭವಿಸಿತ್ತು. ಬಸವೇಶ್ವರ ನಗರ ಮತ್ತು ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಭೂಮಿ ಕಂಪನಿಸಿದ ಅನುಭವವಾಗಿದೆ ಎಂದು ಜನರು ತಿಳಿಸಿದ್ದರು. ಈ ಭೂಕಂಪನವು ಭೂಮಿಯಿಂದ 10 ಕಿಮೀ ಆಳದಲ್ಲಿ ಉಂಟಾಗಿದೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ.

ವಿಜಯಪುರದಲ್ಲಿ ಪದೇಪದೆ ಭೂಮಿ ಕಂಪಿಸುತ್ತಿರುವುದರಿಂದ ಜನರಲ್ಲಿ ಆತಂಕವೂ ಹೆಚ್ಚಾಗಿದೆ. ಕೆಲ ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾಗುವ ಮಾಹಿತಿ ಲಭ್ಯವಾದರೆ, ಹಲವು ಬಾರಿ ಈ ಮಾಹಿತಿ ಲಭ್ಯವಾಗಿಲ್ಲ. ಆದರೆ, ಇದುವರೆಗೂ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಮನೆಯ ಕಿಟಕಿ ಗಾಜುಗಳು ಒಡೆದು, ಪಾತ್ರೆಗಳು ನೆಲಕ್ಕುರುಳಿದ ಘಟನೆಗಳು ನಡೆದಿವೆ.

ಇತ್ತೀಚೆಗಷ್ಟೇ ಭೂಕಂಪವಾಗಿತ್ತು

ಕಳೆದ ಮಂಗಳವಾರ (ಮಾರ್ಚ್ 22) ಸಹ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿತ್ತು. ಭಾರಿ ಶಬ್ದ ಕೇಳಿ ಬಂದು ಭೂಮಿ‌ನಡುಗಿದ ಅನುಭವವಾಗಿದೆ. ವಿಜಯಪುರ ನಗರ ಸೇರಿದಂತೆ‌ ಸುತ್ತಮುತ್ತಲ ಗ್ರಾಮಗಳಲ್ಲಿ ಭೂಕಂಪನವಾಗಿದೆ. ಬೆಳಗ್ಗೆ 11.22ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪನದ ಅನುಭವದಿಂದ ಜನರು ಭಯಗೊಂಡಿದ್ದಾರೆ. ಕೆಲ ತಿಂಗಳ ಬಳಿಕ ಮತ್ತೇ ಭೂಕಂಪದ ಆತಂಕ ಉಂಟಾಗಿದೆ. 3.5ರಷ್ಟು ತೀವ್ರತೆಯಲ್ಲಿ ರಿಕ್ಟರ್‌ ಮಾಪನದಲ್ಲಿ ಭೂಮಿ‌ ಕಂಪಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ಭೂಕಂಪನದ ಕೇಂದ್ರ ಬಿಂದು ಕಂಡುಬಂದಿದೆ. ಈ ಹಿಂದೆ (ಜನವರಿ 30) ಬೆಳಿಗ್ಗೆ 9.15 ಗಂಟೆಗೆ ಭೂಕಂಪನ ಸಂಭವಿಸಿತ್ತು. ರಿಕ್ಟರ್ ಮಾಪನದಲ್ಲಿ (Richter scale) 2.9 ರಷ್ಟು ತೀವ್ರತೆ ದಾಖಲಾಗಿತ್ತು. ವಿಜಯಪುರ (Vijayapura) ನಗರ ಹಾಗೂ ವಿಜಯಪುರ ತಾಲೂಕಿನ ಅಲಿಯಾಬಾದ್, ನಿಂಗನಾಳ, ಭರಟಗಿ, ಗೂಗದಡ್ಡಿ ಸೇರಿ ಹಲವು ಗ್ರಾಮಗಳಲ್ಲಿಯೂ ಭೂಕಂಪನದ ಅನುಭವವಾಗಿತ್ತು.

ಭೂಮಿಯ 5 ಕಿ.ಮೀ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿತ್ತು. ಕಳೆದ ಮೂರು ತಿಂಗಳ ಹಿಂದೆ ಸರಣಿ ಭೂಕಂಪನವಾಗಿತ್ತು. ಹಾಗೂ ಭೂಮಿಯಿಂದ ಭಾರೀ ಶಬ್ಧ ಕೇಳಿ ಬರುತ್ತಿತ್ತು. ಈ ಸಂಬಂಧ ವಿಜಯಪುರ ಜಿಲ್ಲೆಗೆ ವಿಜ್ಞಾನಿಗಳ ತಂಡ ಭೇಟಿ ನೀಡಿತ್ತು, ಸ್ಥಳ ಪರಿಶೀಲನೆಗೆ ಮುಂದಾಗಿದ್ದರು. ಸ್ಥಳ ಪರಿಶೀಲನೆ ಬಳಿಕ ವಿಜ್ಞಾನಿಗಳ ತಂಡ ಸ್ಥಳೀಯರಲ್ಲಿ ಧೈರ್ಯ ತುಂಬಿದ್ದರು.

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೇ ಭೂಕಂಪನ; ಭಾರೀ ಶಬ್ದ ಕೇಳಿ, ಭೂಮಿ ನಡುಗಿದ ಅನುಭವ

ಇದನ್ನೂ ಓದಿ: ಉತ್ತರ ಜಪಾನ್‌ನ ಫುಕುಶಿಮಾ ಕರಾವಳಿಯಲ್ಲಿ 7.3 ತೀವ್ರತೆಯ ಭೂಕಂಪ, ಸುನಾಮಿ ಎಚ್ಚರಿಕೆ

Published On - 7:27 am, Sun, 27 March 22