ಕೋಲಾರದಲ್ಲಿ ಭೂಮಿ ಕಂಪಿಸಿದ ಅನುಭವ; ಬೆಚ್ಚಿ ಬಿದ್ದ ಜನತೆ

ಕೋಲಾರ: ಭಾರತದಲ್ಲಿ ಅದರಲ್ಲೂ ದಕ್ಷಿಣ ಭಾರತದಲ್ಲಿ ಭೂಕಂಪ ಸಂಭವಿಸಿದ ಉದಾಹರಣೆ ತುಂಬಾನೇ ಕಡಿಮೆ. ಆದರೆ, ಈಗ ರಾಜ್ಯದ ಕೋಲಾರದಲ್ಲಿ ಸಣ್ಣದಾಗಿ ಭೂಮಿ ಕಂಪಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ರಾತ್ರಿ 8.37ರ ಸಮಯ. ಭಾನುವಾರವಾದ್ದರಿಂದ ಬಹುತೇಕರು ಮನೆಯಲ್ಲೇ ಇದ್ದರು. ಕೆಲವರು ಟಿವಿ ವೀಕ್ಷಣೆ ಮಾಡುತ್ತಿದ್ದರೆ, ಇನ್ನೂ ಕೆಲವರು ಅಡುಗೆ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಮೂರು ಸೆಕೆಂಡ್ ಕಾಲ ಭೂಮಿ ಕಂಪಿಸಿದೆ. ಏನಾಗುತ್ತಿದೆ ಎನ್ನುವುದು ಗೊತ್ತಾಗುವುದರೊಳಗೆ ಕಂಪನ ನಿಂತಿದೆ. ಭೂಮಿ ಕಂಪಿಸಿದ್ದರಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕ ಉಂಟಾಗಿದೆ. […]

ಕೋಲಾರದಲ್ಲಿ ಭೂಮಿ ಕಂಪಿಸಿದ ಅನುಭವ; ಬೆಚ್ಚಿ ಬಿದ್ದ ಜನತೆ
ಸಾಂದರ್ಭಿಕ ಚಿತ್ರ

Updated on: Dec 20, 2020 | 9:34 PM

ಕೋಲಾರ: ಭಾರತದಲ್ಲಿ ಅದರಲ್ಲೂ ದಕ್ಷಿಣ ಭಾರತದಲ್ಲಿ ಭೂಕಂಪ ಸಂಭವಿಸಿದ ಉದಾಹರಣೆ ತುಂಬಾನೇ ಕಡಿಮೆ. ಆದರೆ, ಈಗ ರಾಜ್ಯದ ಕೋಲಾರದಲ್ಲಿ ಸಣ್ಣದಾಗಿ ಭೂಮಿ ಕಂಪಿಸಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ.

ರಾತ್ರಿ 8.37ರ ಸಮಯ. ಭಾನುವಾರವಾದ್ದರಿಂದ ಬಹುತೇಕರು ಮನೆಯಲ್ಲೇ ಇದ್ದರು. ಕೆಲವರು ಟಿವಿ ವೀಕ್ಷಣೆ ಮಾಡುತ್ತಿದ್ದರೆ, ಇನ್ನೂ ಕೆಲವರು ಅಡುಗೆ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಮೂರು ಸೆಕೆಂಡ್ ಕಾಲ ಭೂಮಿ ಕಂಪಿಸಿದೆ. ಏನಾಗುತ್ತಿದೆ ಎನ್ನುವುದು ಗೊತ್ತಾಗುವುದರೊಳಗೆ ಕಂಪನ ನಿಂತಿದೆ.

ಭೂಮಿ ಕಂಪಿಸಿದ್ದರಿಂದ ಸ್ಥಳೀಯರಲ್ಲಿ ಕೆಲಕಾಲ ಆತಂಕ ಉಂಟಾಗಿದೆ. ಕೆಲವರು ಮನೆಯಿಂದ ಹೊರ ಬಂದಿದ್ದಾರೆ. ಕಂಪನ ನಿಂತ ನಂತರದಲ್ಲಿ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಅಂದಹಾಗೆ, ಈ ಬಗ್ಗೆ ಅಧಿಕಾರಿಗಳು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಗುರುವಾರ ರಾತ್ರಿ 4.2 ಮಧ್ಯಮ ತೀವ್ರತೆಯ ಭೂಕಂಪನ ಸಂಭವಿಸಿತ್ತು. ಭೂಕಂಪನದ ತೀವ್ರತೆಗೆ ದೆಹಲಿ-ಎನ್‌ಸಿಆರ್‌ನಲ್ಲೂ ನಡುಕ ಉಂಟಾಗಿತ್ತು. ಆದರೆ, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.

ಬಸವನಬಾಗೇವಾಡಿಯಲ್ಲಿ ಭೂಕಂಪನ; ಗೋಡೆಗಳಲ್ಲಿ ಬಿರುಕು, ಹೆದರಿ ಓಡಿದ ಜನರು

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us