Vijayapura Earthquake: ಸಾಯಂಕಾಲ ಆಯ್ತು, ಇದೀಗ ರಾತ್ರಿಯೂ ವಿಜಯಪುರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಮತ್ತೆ ಭೂಮಿ ಕಂಪಿಸಿದೆ. ವಿಜಯಪುರದ ಹಲವೆಡೆ ಸಂಜೆ 4.26ಕ್ಕೆ ಭೂಕಂಪನವಾಗಿದೆ. ಅದಾದ ಮೇಲೆ ಪದೇಪದೆ ಭೂಕಂಪನವಾಗುತ್ತಿರುವುದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ.

Vijayapura Earthquake: ಸಾಯಂಕಾಲ ಆಯ್ತು, ಇದೀಗ ರಾತ್ರಿಯೂ ವಿಜಯಪುರದಲ್ಲಿ ಮತ್ತೆ ಭೂಮಿ ಕಂಪಿಸಿದ ಅನುಭವ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Aug 22, 2022 | 9:48 PM

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದೆ. ಜಿಲ್ಲೆಯ ಹಲವೆಡೆ ಸಂಜೆ 4.26ಕ್ಕೆ ಭೂಕಂಪನವಾಗಿದ್ದು ಪದೇಪದೆ ಭೂಕಂಪನವಾಗುತ್ತಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 2.6ರಷ್ಟು ದಾಖಲಾಗಿದೆ. ಸಾಯಂಕಾಲದ ಬಳಿಕ ಇದೀಗಾ ಮತ್ತೇ ನಗರದ ಜನತೆ ಭೂಕಂಪನದ ಅನುಭವ ಪಡೆದಿದ್ದಾರೆ.  ಇದರ ಜೊತೆಗೆ ಇಂದು ಸೋಮವಾರ ರಾತ್ರಿ 9.23ಕ್ಕೆ ವಿಜಯಪುರ ನಗರದಲ್ಲಿ ಮತ್ತೆ ಕಂಪನದ ಅನುಭವವಾಗಿದೆ. ವಿಜಯಪುರ ನಗರದ ರೈಲ್ವೆ ಸ್ಟೇಷನ್ ಏರಿಯಾ, ಗೋಳಗುಮ್ಮಟ ಏರಿಯಾ ಸೇರಿದಂತೆ ಬಹುತೇಕ ಕಡೆಗಳಲ್ಲಿ‌ ಭೂಮಿಯಲ್ಲಿ ಸದ್ದು ಕೇಳಿಬಂದಿದೆ.

ಕಳೆದ ವಾರವೂ ಇಲ್ಲಿ ಭೂಕಂಪನದ ಅನುಭವವಾಗಿತ್ತು. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು ಜಿಲ್ಲಾಡಳಿತಕ್ಕೆ ಸಮಗ್ರ ಮಾಹಿತಿ ನೀಡಿದ್ದಾರೆ. ನಿರಂತರ ಭೂಕಂಪನ ಕುರಿತು ಹೆಚ್ಚಿನ ಅಧ್ಯಯನ ಮಾಡಿಸಬೇಕೆಂದು ಜನರು ಒತ್ತಾಯಿಸಿದ್ದಾರೆ (Earthquake, Vijayapura).

ವಿಜಯಪುರ ಜಿಲ್ಲೆಯ ವಿವಿಧೆಡೆ ಮತ್ತೆ ಭೂಕಂಪನ: 3.2ರಷ್ಟು ಕಂಪನದ ತೀವ್ರತೆ ದಾಖಲು (Aug 21 ವರದಿ)

ವಿಜಯಪುರ ಜಿಲ್ಲೆಯ ವಿವಿಧೆಡೆ ಮತ್ತೆ ಭೂಮಿ ಕಂಪಿಸಿದ್ದು, (Earthquake) ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3.2ರಷ್ಟು ದಾಖಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದಿಂದ ಮಾಹಿತಿ ನೀಡಲಾಗಿದೆ. ಆಗಸ್ಟ್‌ 19ರ ರಾತ್ರಿ 8.16ಕ್ಕೆ ಭೂಮಿ ಕಂಪಿಸಿದೆ ಎನ್ನಲಾಗುತ್ತಿದೆ. ಜನರು ಮನೆ ಬಿಟ್ಟು ಹೊರಗೋಡಿ ಬಂದಿದ್ದು, ಕೆಲ ಮನೆಗಳಲ್ಲಿನ ಪಾತ್ರೆ ಪಗಡೆ ಕೆಳಗೆ ಬಿದ್ದಿದ್ದವು. ಜನರು ಭೂಕಂಪನದಿಂದ ಆತಂಕಗೊಂಡಿದ್ದರು.

ವಿಜಯಪುರ ‌ಜಿಲ್ಲೆಯಲ್ಲಿ ಮತ್ತೆ ಭೂಮಿ ನಡುಗಿದೆ. ಶನಿವಾರ ಸಂಜೆ ಭೂಕಂಪದ ಅನುಭವಾಗಿದೆ.(Aug 20 ವರದಿ)

ವಿಜಯಪುರ ‌ಜಿಲ್ಲೆಯಲ್ಲಿ (Vijayapura) ಮತ್ತೆ ಭೂಮಿ ನಡುಗಿದೆ (Mild Earthquake). ಶನಿವಾರ ರಾತ್ರಿ 8.16 ಕ್ಕೆ ಭೂಕಂಪದ ಅನುಭವಾಗಿದೆ. ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಆಸ್ತಿಪಾಸ್ತಿ ನಷ್ಟದ ಬಗ್ಗೆಯೂ ವರದಿಯಾಗಿಲ್ಲ.

ವಿಜಯಪುರ ನಗರದ ವಿವಿಧ ಭಾಗಗಳಲ್ಲಿ ಭೂಮಿ ನಡುಗಿದೆ. ವಿಜಯಪುರ ‌ಜಿಲ್ಲೆಯ ತಿಕೋಟಾ, ಬಬಲೇಶ್ವರ, ಬಸವನಬಾಗೇವಾಡಿ ತಾಲೂಕುಗಳು ಸೇರಿದಂತೆ ಇತರೆ ಭಾಗಗಳಲ್ಲೂ ಭೂಮಿ ನಡುಗಿದ ಅನುಭವವಾಗಿದೆ. ಭೂಕಂಪನ ಅನುಭವವಾಗುತ್ತಿದ್ದಂತೆ ಜನರು ಆತಂಕದಿಂದ ಮನೆಯಿಂದ ಆಚೆ ಬಂದಿದ್ದಾರೆ. ಮೇಲಿಂದ ಮೇಲೆ ಭೂಕಂಪನ ಆಗುತ್ತಿರೋದಕ್ಕೆ ಜನ ಭಯಭೀತರಾಗಿದ್ದಾರೆ. ಈ ಮಧ್ಯೆ ಭೂಕಂಪನದ ತೀವ್ರತೆಯ ಬಗ್ಗೆ ಜಿಲ್ಲಾಡಳಿತ ಇನ್ನಷ್ಟೇ ಅಧಿಕಥೃತ ಮಾಹಿತಿ ನೀಡಬೇಕಿದೆ.

Published On - 7:32 pm, Mon, 22 August 22

ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ