AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಶಿಫ್ಟ್ ಮಾಡಿದವರಿಗೆ ಬಿಗ್ ಶಾಕ್ ಕಾದಿದೆ; ನಾಳೆಯಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ‘SIR’ ಮತದಾರರ ಪಟ್ಟಿ ಪರಿಷ್ಕರಣೆ

ಚುನಾವಣಾ ಆಯೋಗವು ಜೂನ್ 30ರಿಂದ ಮತದಾರರ ಪಟ್ಟಿಯ 3ನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭಿಸಿದೆ. ನಕಲಿ ಮತದಾರರಿಗೆ ಕಡಿವಾಣ ಹಾಕಲು ಬೂತ್ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಲಿದ್ದು, 'ಪ್ರೊಜೆನಿ ಮ್ಯಾಪಿಂಗ್' ಮತ್ತು ಆಧಾರ್ ಹೊಂದಾಣಿಕೆ ಕಡ್ಡಾಯ. ಸಾರ್ವಜನಿಕರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಹೊಸ ನೋಂದಣಿಗೆ ಫಾರಂ 6, ತಿದ್ದುಪಡಿಗೆ ಫಾರಂ 8 ಬಳಸಬಹುದು.

ಮನೆ ಶಿಫ್ಟ್ ಮಾಡಿದವರಿಗೆ ಬಿಗ್ ಶಾಕ್ ಕಾದಿದೆ; ನಾಳೆಯಿಂದ ಕರ್ನಾಟಕ ಸೇರಿ 16 ರಾಜ್ಯಗಳಲ್ಲಿ ‘SIR’ ಮತದಾರರ ಪಟ್ಟಿ ಪರಿಷ್ಕರಣೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Jun 29, 2026 | 6:44 AM

Share

ಮುಖ್ಯಾಂಶಗಳು

  • ನಾಳೆಯಿಂದ ಅತ್ಯಂತ ಕಟ್ಟುನಿಟ್ಟಿನ 3ನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ
  • ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಾರ್ಯಾಚರಣೆ
  • ಜುಲೈ 29ರವರೆಗೆ ಆಯಾ ಭಾಗದ ಬೂತ್ ಮಟ್ಟದ ಅಧಿಕಾರಿಗಳು ನಿಮ್ಮ ಮನೆ-ಮನೆಗೆ ಭೇಟಿ

ಬೆಂಗಳೂರು, ಜೂ.29: ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಶುದ್ಧೀಕರಿಸಲು ಹಾಗೂ ನಕಲಿ ಮತದಾರರಿಗೆ ಬ್ರೇಕ್ ಹಾಕಲು ನಾಳೆಯಿಂದ (ಜೂನ್ 30) ಅತ್ಯಂತ ಕಟ್ಟುನಿಟ್ಟಿನ 3ನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯನ್ನು ಆರಂಭಿಸುತ್ತಿದೆ. ಕರ್ನಾಟಕ ಸೇರಿದಂತೆ ದೇಶದ 16 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಬೃಹತ್ ಕಾರ್ಯಾಚರಣೆ ನಡೆಯಲಿದೆ.

ಮತದಾರರ ಪಟ್ಟಿಯ ನೈಜತೆಯನ್ನು ಪರಿಶೀಲಿಸಲು ನಾಳೆಯಿಂದ ಜುಲೈ 29ರವರೆಗೆ ಆಯಾ ಭಾಗದ ಬೂತ್ ಮಟ್ಟದ ಅಧಿಕಾರಿಗಳು ನಿಮ್ಮ ಮನೆ-ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ಬಾರಿ ನಕಲಿ ಮತದಾರರನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೊಗೆಯಲು ಆಯೋಗವು ಪ್ರತಿಯೊಬ್ಬ ಮತದಾರರ ‘ಪ್ರೊಜೆನಿ ಮ್ಯಾಪಿಂಗ್’ (ಕುಟುಂಬದ ವಂಶಾವಳಿ ಆಧಾರಿತ ಮ್ಯಾಪಿಂಗ್) ತಂತ್ರಜ್ಞಾನವನ್ನು ಬಳಸುತ್ತಿದೆ. ಸಮೀಕ್ಷೆಯ ವೇಳೆ ವೋಟರ್ ಐಡಿ ಹಾಗೂ ಆಧಾರ್ ಕಾರ್ಡ್ ವಿವರಗಳ ಹೊಂದಾಣಿಕೆಯನ್ನು ಕಡ್ಡಾಯಗೊಳಿಸಲಾಗಿದೆ.

ಇನ್ನು ಈ ಪರಿಷ್ಕರಣಾ ಅವಧಿಯಲ್ಲಿ ಬಿಎಲ್‌ಒಗಳು ಮನೆಗೆ ಭೇಟಿ ನೀಡಿದಾಗ ಯಾರೆಲ್ಲಾ ಲಭ್ಯವಿರುವುದಿಲ್ಲವೋ ಅಥವಾ ಇತ್ತೀಚೆಗೆ ಮನೆ ಬದಲಾಯಿಸಿ ಬೇರೆಡೆ ವಲಸೆ ಹೋಗಿದ್ದಾರೋ, ಅಂತಹವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ನೇರವಾಗಿ ಡಿಲೀಟ್ ಮಾಡುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಹೆಸರು ಇರುವುದನ್ನು ಖಚಿತಪಡಿಸಿಕೊಳ್ಳಬೇಕಿದೆ.

18 ವರ್ಷ ತುಂಬಿದ ಯುವಕ-ಯುವತಿಯರು ಅಥವಾ ಇದುವರೆಗೆ ಹೆಸರು ಸೇರಿಸದವರು ಫಾರಂ 6 ಬಳಸಿ ಹೊಸದಾಗಿ ಹೆಸರು ನೊಂದಾಯಿಸಿಕೊಳ್ಳಬಹುದು. ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ, ವಯಸ್ಸು ತಿದ್ದುಪಡಿ ಮಾಡಲು ಅಥವಾ ಹೊಸ ವಿಳಾಸಕ್ಕೆ ಹೆಸರು ವರ್ಗಾಯಿಸಲು ಫಾರಂ 8 ಅನ್ನು ಬಳಸಬೇಕಾಗುತ್ತದೆ. ಜೂನ್ 30 ರಿಂದ ಜುಲೈ 29ರವರೆಗೆ ಬಿಎಲ್‌ಒಗಳಿಂದ ಮನೆ-ಮನೆ ಸಮೀಕ್ಷೆ ಪ್ರಕ್ರಿಯೆ ನಡೆಯಲಿದೆ. ಆಗಸ್ಟ್ 5ರಂದು ಮತದಾರರ ಕರಡು ಪಟ್ಟಿ ಪ್ರಕಟಣೆ. ಅಕ್ಟೋಬರ್ 7ರಂದು ಎಲ್ಲಾ ಆಕ್ಷೇಪಣೆಗಳ ಇತ್ಯರ್ಥದ ಬಳಿಕ ಅಧಿಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ.

ಇದನ್ನೂ ಓದಿ: ದೇಶಾದ್ಯಂತ ‘SIR’ ಮತದಾರರ ಪಟ್ಟಿ ಪರಿಷ್ಕರಣೆ: 12 ರಾಜ್ಯಗಳಲ್ಲಿ ಬರೋಬ್ಬರಿ 5.18 ಕೋಟಿ ಮತದಾರರ ಹೆಸರು ಡಿಲೀಟ್

ಯಾವೆಲ್ಲಾ ರಾಜ್ಯಗಳಲ್ಲಿ ಈ ಪರಿಷ್ಕರಣೆ?:

ಕರ್ನಾಟಕ, ದೆಹಲಿ, ಪಂಜಾಬ್, ಹರಿಯಾಣ, ಉತ್ತರಾಖಂಡ್, ಮಣಿಪುರ, ಮೇಘಾಲಯ, ಜಾರ್ಖಂಡ್, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ಅರುಣಾಚಲ ಪ್ರದೇಶ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢ ಸೇರಿದಂತೆ ಒಟ್ಟು 19 ಪ್ರಮುಖ ವಲಯಗಳಲ್ಲಿ ಈ ವಿಶೇಷ ಪರಿಷ್ಕರಣೆ ನಾಳೆಯಿಂದ ಏಕಕಾಲದಲ್ಲಿ ಜಾರಿಗೆ ಬರಲಿದೆ.

12 ರಾಜ್ಯಗಳಲ್ಲಿ ಬರೋಬ್ಬರಿ 5.18 ಕೋಟಿ ಮತದಾರರ ಹೆಸರು ಡಿಲೀಟ್

ಭಾರತೀಯ ಚುನಾವಣಾ ಆಯೋಗವು ದೇಶಾದ್ಯಂತ ಹಮ್ಮಿಕೊಂಡಿರುವ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಕ್ರಿಯೆ ಪ್ರಕಾರ, ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬರೋಬ್ಬರಿ 5.18 ಕೋಟಿಗೂ ಹೆಚ್ಚು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಧಿಕೃತವಾಗಿ ಕೈಬಿಡಲಾಗಿದೆ. ಚುನಾವಣಾ ಆಯೋಗದ ಈ ವೋಟರ್ ಲಿಸ್ಟ್ ಕ್ಲೀನ್-ಅಪ್ ಪ್ರಕ್ರಿಯೆಯು ಆರಂಭದಿಂದಲೂ ತೀವ್ರ ರಾಜಕೀಯ ಜಟಾಪಟಿಗೆ ಕಾರಣವಾಗಿತ್ತು. ಸೂಕ್ತ ದಾಖಲೆಗಳ ಕೊರತೆಯ ನೆಪವೊಡ್ಡಿ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ವಿರೋಧ ಪಕ್ಷಗಳು ಮತ್ತು ಪ್ರಮುಖ ಸಾಮಾಜಿಕ ಕಾರ್ಯಕರ್ತರು ಆಯೋಗದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದರು. ಆದರೆ, ಈ ಎಲ್ಲಾ ಕಾನೂನು ಸವಾಲುಗಳು ಮತ್ತು ರಾಜಕೀಯ ವಿವಾದಗಳ ನಡುವೆಯೂ, ದೇಶದ ಸರ್ವೋನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ಈ ಮಹತ್ತರ ಹೆಜ್ಜೆಯನ್ನು ಸರ್ವಾನುಮತದಿಂದ ಎತ್ತಿಹಿಡಿದು, ಪ್ರಕ್ರಿಯೆಯ ಸಾಂವಿಧಾನಿಕ ಸಿಂಧುತ್ವವನ್ನು ಮಾನ್ಯ ಮಾಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:43 am, Mon, 29 June 26

Follow Us
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
ಬೆಂಗಳೂರಲ್ಲಿ ಟನಲ್ ರೋಡ್‌ಗೆ ಶಂಕುಸ್ಥಾಪನೆ: ಟೋಲ್ ಫ್ರೀ ಎಂದ ಸಿಎಂ!
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
RSS ನೋಂದಣಿಗೆ ಬೇಕಿದ್ರೆ ನಾನೇ ಶುಲ್ಕ ಕಟ್ಟುತ್ತೇನೆಂದ ಪ್ರಿಯಾಂಕ್ ಖರ್ಗೆ​​
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಸಿಎಂ ನಿವಾಸದಲ್ಲಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?
ಕಾಂಗ್ರೆಸ್​​ ಸೇರ್ತಾರ ಜೆಡಿಎಸ್​​ ಶಾಸಕ ಜಿ.ಟಿ. ದೇವೇಗೌಡ?