AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾತು ಉಳಿಸಿಕೊಂಡ BSY: ರೈತರಿಗೆ ಏಕಕಾಲದಲ್ಲಿ 660 ಕೋಟಿ ಹಣ ಬಿಡುಗಡೆಯಾಯ್ತು!

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲಿ ನೆಲಕಚ್ಚಿದ್ದ ರೈತರ ಬದುಕಿಗೆ ಆಸರೆಯಾಗುವುದಾಗಿ ಭರವಸೆ ನೀಡಿದ್ದ ಸಿಎಂ ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆನ್​ಲೈನ್ ಮೂಲಕ ರೈತರಿಗೆ ಪರಿಹಾರ ನೀಡುವ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದಾರೆ. ಈ ವೇಳೆ, ಮೆಕ್ಕೆಜೋಳ ಮತ್ತು ಹೂವು ಬೆಳೆದ ರೈತರಿಗೆ ಆನ್ ಮೂಲಕ ನೇರವಾಗಿ ಅವರವರ ಅಕೌಂಟ್ ಗೆ ಪರಿಹಾರ ಮೊತ್ತ ಸಂದಾಯ ಮಾಡಿದ್ದಾರೆ. ಇದರಿಂದ ಏಕಕಾಲದಲ್ಲಿ 666 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ರೈತರ […]

ಮಾತು ಉಳಿಸಿಕೊಂಡ BSY: ರೈತರಿಗೆ ಏಕಕಾಲದಲ್ಲಿ 660 ಕೋಟಿ ಹಣ ಬಿಡುಗಡೆಯಾಯ್ತು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jun 02, 2020 | 3:17 PM

Share

ಬೆಂಗಳೂರು: ಕೊರೊನಾ ಸಂಕಷ್ಟ ಕಾಲದಲ್ಲಿ ನೆಲಕಚ್ಚಿದ್ದ ರೈತರ ಬದುಕಿಗೆ ಆಸರೆಯಾಗುವುದಾಗಿ ಭರವಸೆ ನೀಡಿದ್ದ ಸಿಎಂ ಯಡಿಯೂರಪ್ಪ ತಮ್ಮ ಮಾತು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆನ್​ಲೈನ್ ಮೂಲಕ ರೈತರಿಗೆ ಪರಿಹಾರ ನೀಡುವ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಈ ವೇಳೆ, ಮೆಕ್ಕೆಜೋಳ ಮತ್ತು ಹೂವು ಬೆಳೆದ ರೈತರಿಗೆ ಆನ್ ಮೂಲಕ ನೇರವಾಗಿ ಅವರವರ ಅಕೌಂಟ್ ಗೆ ಪರಿಹಾರ ಮೊತ್ತ ಸಂದಾಯ ಮಾಡಿದ್ದಾರೆ. ಇದರಿಂದ ಏಕಕಾಲದಲ್ಲಿ 666 ಕೋಟಿ ರೂ.ಗಳ ಪರಿಹಾರ ಮೊತ್ತವನ್ನು ರೈತರ ಖಾತೆಗೆ ಆನ್​ಲೈನ್ ಮೂಲಕ ಸಿಎಂ ಬಿಡುಗಡೆ ಮಾಡಿದ್ರು. ನಂತರ ರೈತರಿಗೆ ಕರೆ ಮಾಡಿ ಹಣ ವರ್ಗಾವಣೆ ಆಗಿರುವುದನ್ನು ಯಡಿಯೂರಪ್ಪ ಖಾತರಿಪಡಿಸಿಕೊಂಡರು.

ಇದೇ ಸಂದರ್ಭದಲ್ಲಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ 100 ದಿನಗಳ ಪ್ರಗತಿಯ ವರದಿಯನ್ನು ಬಿಡುಗಡೆ ಮಾಡಿದರು. ಈ ವೇಳೆ ಕೃಷಿ ಸಚಿವ ಬಿ.ಸಿ.ಪಾಟೀಲ್, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ಕೆ.ನಾರಾಯಣ ಸ್ವಾಮಿ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ ಉಪಸ್ಥಿತರಿದ್ದರು.

ರೈತರ ಸಂಪೂರ್ಣ ಮಾಹಿತಿ ಇದೆ, ಎಲ್ಲ ರೈತರಿಗೆ ಹಣ ತಲುಪಿಸಲಾಗುತ್ತೆ ಮೆಕ್ಕೆ ಜೋಳ ಬೆಳೆದ 10 ಲಕ್ಷ ರೈತರಿಗೆ ಇಂದು ಪರಿಹಾರ ನೀಡೋ ಕೆಲಸ ಆರಂಭವಾಗಿದೆ. ಇಂದು ಏಕಕಾಲದಲ್ಲಿ 943 ರೈತರಿಗೆ ಆನ್ ಲೈನ್ ಮೂಲಕ ಹಣ ತಲುಪಿದೆ. ಮುಂದಿನ 15 ದಿನಗಳಲ್ಲಿ ಎಲ್ಲಾ ಮೆಕ್ಕೆಜೋಳ ಬೆಳೆದ ರೈತರಿಗೆ ಹಣ ತಲುಪಿಸಲಾಗುತ್ತೆ. ನಮ್ಮ ಬಳಿ ರೈತರ ಸಂಪೂರ್ಣ ಮಾಹಿತಿ ಇದೆ. ಮೆಕ್ಕೆಜೋಳ ರೈತರಿಗೆ 500 ಕೋಟಿ ಪರಿಹಾರ ಹಾಗೂ 160 ಕೋಟಿ ಹೂ, ಹಣ್ಣು ಮತ್ತು ತರಕಾರಿ ರೈತರಿಗೆ ನೀಡಲಾಗುತ್ತೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಇದೇ ವೇಳೆ ತಿಳಿಸಿದರು.

ರೇಷ್ಮೆ ಬೆಳೆಗಾರರಿಗೆ 50 ಕೋಟಿ: ರೇಷ್ಮೆ ಬೆಳೆಗಾರರಿಗೆ 50 ಕೋಟಿ ರೂ. ಪರಿಹಾರ ನೀಡಲಾಗಿದೆ. ಇವತ್ತು ರೈತರ ಖಾತೆಗೆ ಹಣ ಹಾಕಲಾಗಿದೆ ಎಂದು ರೇಷ್ಮೆ ಸಚಿವ ನಾರಾಯಣಗೌಡ ತಿಳಿಸಿದರು

Published On - 1:54 pm, Tue, 2 June 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು