ಎಂಪಿ ಎಲೆಕ್ಷನ್​ಗೆ ನಿಗಮದ 20 ಕೋಟಿ ರೂ. ಬಳಕೆ ಮಾಡಿಕೊಂಡ್ರಾ ನಾಗೇಂದ್ರ? ಪುಷ್ಟಿ ನೀಡುತ್ತಿದೆ ಹಗರಣದ ಟೈಮ್ ಲೈನ್

ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ನಾಗೇಂದ್ರನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಒಂದೊಂದೆ ಸ್ಫೋಟಕ ಮಾಹಿತಿ ಹೊರಬರುತ್ತಿವೆ. ತಾವು ಉಸ್ತುವಾರಿ ಹೊತ್ತಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮಾಜಿ ಸಚಿವ ಬಿ.ನಾಗೇಂದ್ರ 20 ಕೋಟಿ ರೂಪಾಯಿ ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಅಂಶ ಬೆಳಕಿಗೆ ಬಂದಿದೆ.

ಎಂಪಿ ಎಲೆಕ್ಷನ್​ಗೆ ನಿಗಮದ 20 ಕೋಟಿ ರೂ. ಬಳಕೆ ಮಾಡಿಕೊಂಡ್ರಾ ನಾಗೇಂದ್ರ? ಪುಷ್ಟಿ ನೀಡುತ್ತಿದೆ ಹಗರಣದ ಟೈಮ್ ಲೈನ್
ನಾಗೇಂದ್ರ
Follow us
ರಮೇಶ್ ಬಿ. ಜವಳಗೇರಾ
|

Updated on: Jul 14, 2024 | 5:19 PM

ಬೆಂಗಳೂರು(ಜು.14): ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಆಕ್ರಮ ಹಣ ವರ್ಗಾವಣೆ ಮಾಡಿಕೊಂಡಿರುವ ಆರೋಪದ ಮೇಲೆಗೆ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಅವರನ್ನು ಬಂಧಿಸಿದೆ. ಇನ್ನು ಇಡಿ, ನ್ಯಾಯಾಲಯದ ಮಹತ್ವದ ಅಂಶವೊಂದನ್ನು ಬಿಚ್ಚಿಟ್ಟಿದೆ. 20.19 ಕೋಟಿ ರೂ. ಹಣವನ್ನು ತಾವು ಉಸ್ತುವಾರಿ ಹೊತ್ತಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಗೇಂದ್ರ ಬಳಕೆ ಮಾಡಿಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ನಿರ್ದೇಶನಾಲಯ (ಇ.ಡಿ.) ಮಾಹಿತಿ ನೀಡಿದೆ ಎಂದು ತಿಳಿದು ಬಂದಿದೆ.

ನಾಗೇಂದ್ರ ಅವರನ್ನು ಬಂಧಿಸಿದ ಬಳಿಕ ಹೆಚ್ಚಿನ ತನಿಖೆ ಸಲುವಾಗಿ ವಶಕ್ಕೆ ಪಡೆಯಲು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು, ಅದರಲ್ಲಿ ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಗರಣದ ಹಣ ವೆಚ್ಚವಾಗಿರುವ ಬಗ್ಗೆ ಉಲ್ಲೇಖಿಸಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಮಾಜಿ ಸಚಿವ ನಾಗೇಂದ್ರ ಜುಲೈ 18ರವೆರೆಗೆ ಇಡಿ ಕಸ್ಟಡಿಗೆ

ಇದೇ ವರ್ಷದ ಮಾರ್ಚ್ 4ರಂದು 21ರಂದು 44 ಕೋಟಿ ರೂ, ಮಾ. 22ರಂದು 33 ಕೋಟಿ ರೂ. ಹಾಗೂ ಮೇ 21ರಂದು 50 ಕೋಟಿ ರೂ. ಸೇರಿ ದಂತ ಒಟ್ಟು 187.33 ಕೋಟಿ ರೂ. ಹಣವು ವಾಲ್ಮೀಕಿ ನಿಗಮದ ಬ್ಯಾಂಕ್‌ ಖಾತೆಗಳಿಗೆ ರಾಜ್ಯ ಖಜಾನೆ-2ರಿಂದ ಜಮೆಯಾಗಿತ್ತು. ಈ ಹಣದ ಪೈಕಿ 94.73 ಕೋಟಿ ರೂ. ಹಣವು ಎಂ.ಜಿ.ರಸ್ತೆಯ ಯೂನಿಯನ್ ಬ್ಯಾಂಕ್ ಖಾತೆಯಿಂದ ಹೈದರಾಬಾದ್ ನ ಫಸ್ಟ್ ಫೈನಾನ್ಸ್ ಕೋ ಆಪರೇಟಿವ್‌ ಬ್ಯಾಂಕ್‌ನ 18 ನಕಲಿ ಖಾತೆಗಳಿಗೆ ರವಾನೆಯಾಗಿತ್ತು. ಆದರೆ ಅಕ್ರಮ ಸದ್ದು ಮಾಡಿದ ಕೂಡಲೇ 5 ಕೋಟಿ ರೂ. ಮರಳಿ ನಿಗಮದ ಖಾತೆಗೆ ಬಂದಿತ್ತು. ಇನ್ನುಳಿದ 89.73 ಕೋಟಿ ರೂ. ಹಣವನ್ನು ಹೈದರಾಬಾದ್ ಗ್ಯಾಂಗ್ ದೋಚಿತ್ತು ಎಂಬ ಆರೋಪ ಬಂದಿದೆ.

ಪುಷ್ಟಿ ನೀಡುತ್ತಿವೆ ಹಗರಣದ ಟೈಮ್ ಲೈನ್

ಹೌದು… ವಾಲ್ಮೀಕಿ ನಿಗಮದ ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿಕೊಂಡಿದ್ದಾರೆ ಎನ್ನುವ ಇಡಿ ಆರೋಪಕ್ಕೆ ಹಗರಣದ ಟೈಮ್​ಲೈನ್ ಪುಷ್ಟಿ ನೀಡುತ್ತಿವೆ. ಯೂನಿಯನ್ ಬ್ಯಾಂಕ್‌ನ ಹೊಸ ಖಾತೆಗೆ 187 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಬಳಿಕ ಹೈದರಾಬಾದ್​​​ ಫಸ್ಟ್ ಬ್ಯಾಂಕ್​ನಲ್ಲಿ ಜನವರಿ ಮತ್ತು ಫೆಬ್ರವರಿಯಲ್ಲಿ 18 ನಕಲಿ ಖಾತೆಗಳನ್ನು ಓಪನ್ ಮಾಡಲಾಗಿದ್ದು, ಈ ಖಾತೆಗಳಿಗೆ ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಹಂತ ಹಂತವಾಗಿ ಬರೋಬ್ಬರಿ 89 ಕೋಟಿ ರೂ. ಹಣ ವರ್ಗಾವಣೆ ಮಾಡಲಾಗಿದೆ.

ಮೇ 7ರಂದು ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ಆದ್ರೆ, ಚುನಾವಣೆಗೂ ಮುನ್ನ ನಿಗಮದ ಹಣ ಆರೋಪಿಗಳ ಕೈಸೇರಿತ್ತು. ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ತಿಂಗಳಲ್ಲಿ ಒಟ್ಟು18 ನಕಲಿ ಖಾತೆಗಳಿಗೆ ಬರೋಬ್ಬರಿ 89 ಕೋಟಿ ರೂ. ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಚುನಾವಣೆಗೂ ಒಂದು ದಿನ ಮುಂಚೆ ಅಂದರೆ ಮೇ 6ರಂದು ಒಂದು ನಕಲಿ ಖಾತೆಗೆ 5 ಕೋಟಿ ರೂ. ವರ್ಗಾವಣೆ ಆಗಿದೆ.

ಒಟ್ಟಾರೆ ಮೇ 7ಕ್ಕಿಂತ ಮುನ್ನ ನಿಗಮದ ಹಣ ಅಕ್ರಮವಾಗಿ ಆರೋಪಿಗಳ ಕೈ ಸೇರಿತ್ತು. ಈ ಹಣದಲ್ಲೇ ನಾಗೇಂದ್ರ 20.19 ಕೋಟಿ ರೂ. ಹಣ ಚುನಾವಣೆಗೆ ಬಳಕೆ ಮಾಡಿದ್ದಾರೆ ಎಂದು ಇಡಿ ಆರೋಪಿಸಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ